ಬೀದರ್‌ | ಎಸ್‍ಎಸ್‍ಎಲ್‍ಸಿಯಲ್ಲಿ ಶೇ 95ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಿ : ಸಿಇಒ ಗಿರೀಶ ಬದೋಲೆ

Date:

ಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 95ರಷ್ಟು ಫಲಿತಾಂಶ ತರಲು ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಸಲಹೆ ನೀಡಿದರು.

- Advertisement -

ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ವತಿಯಿಂದ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಎ.ಆರ್.ಎಂ. ಸಭಾಂಗಣದಲ್ಲಿ ಬೀದರ್, ಔರಾದ್ ಹಾಗೂ ಭಾಲ್ಕಿ ತಾಲ್ಲೂಕುಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ. ಪ್ರತಿನಿಧಿಗಳಿಗೆ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಬೀದರ್ 31ನೇ ಸ್ಥಾನದಲ್ಲಿತ್ತು. ಆಗ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ 64ರಷ್ಟು ಇತ್ತು. ಆಗ ಜಿಲ್ಲೆಯ 70 ಶಾಲೆಗಳು ಶೇ 20 ರಿಂದ ಶೇ 30 ರಷ್ಟು ಮಾತ್ರ ಫಲಿತಾಂಶ ಪಡೆದಿದ್ದವು. ಅಂಥ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಿ ಫಲಿತಾಂಶ ಹೆಚ್ಚಳ ಹಾಗೂ ಸ್ಥಾನ ಏರಿಕೆಗೆ ಶ್ರಮಿಸಬೇಕುʼ ಎಂದು ತಿಳಿಸಿದರು.

ʼ8ನೇ ಹಾಗೂ 9ನೇ ತರಗತಿಯಲ್ಲಿ ಫಲಿತಾಂಶ ವೃದ್ಧಿಸುವ ದಿಸೆಯಲ್ಲಿ ಪ್ರಯತ್ನ ನಡೆಸಿದರೆ, ಎಸ್‍ಎಸ್‍ಎಲ್‍ಸಿ ಫಲಿತಾಂಶ ತಾನಾಗಿಯೇ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವುದು, ಹಾಜರಾತಿ ಹೆಚ್ಚಿಸುವುದು ಮೊದಲಾದವುಗಳಿಗೆ ಆದ್ಯತೆ ನೀಡಬೇಕುʼ ಎಂದು ತಿಳಿಸಿದರು.

ʼಶಾಲೆ ಬಿಟ್ಟ ಮಕ್ಕಳನ್ನು ಮರಳಿ ಮುಖ್ಯವಾಹಿನಿಗೆ ತರಲು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಎಐಸಿಯು ಮೂಲಕ ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಕಾರ್ಯಾಗಾರ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬೀದರ್ ನಾಗರಿಕ ಸನ್ಮಾರ್ಗ ಸಮಿತಿಯ ಅಧ್ಯಕ್ಷ ಡಾ.ಅಬ್ದುಲ್ ದೀರ್ ಮಾತನಾಡಿ, ʼಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಂಘಟಿತ ಪ್ರಯತ್ನ ಅವಶ್ಯಕವಾಗಿದೆ ಎಂದು ಹೇಳಿದರು. ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ.ಯವರು ಮನಸ್ಸು ಮಾಡಿದರೆ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ತರಬಹುದು. ಮಕ್ಕಳ ಭವಿಷ್ಯ ಉಜ್ವಲಗೊಳಿಸಬಹುದು. ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಸಮಾಜದ ಹಿತಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಬರುವ ದಿನಗಳಲ್ಲಿ ಇನ್ನೂ ಅನೇಕ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದೆʼ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಸೈಯದ್ ಫುರ್ಕಾನ್ ಪಾಶಾ ಹಾಗೂ ಜಗದೀಶ್ ನಿಂಬೂರ ಉಪನ್ಯಾಸ ನೀಡಿದರು.

ಬಸವ ಸೇವಾ ಪ್ರತಿಷ್ಠಾನ ಡಾ. ಗಂಗಾಂಬಿಕೆ ಅಕ್ಕ, ಸೇಂಟ್ ಜೋಸೆಫ್ ಚರ್ಚ್‍ನ ರೆವರೆಂಡ್ ಫಾದರ್ ವಿಲ್ಸನ್ ಫರ್ನಾಂಡೀಸ್, ಫಾದರ್ ಕ್ಲೇರಿ ಡೀಸೋಜಾ, ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು, ಇಂದೋರ್ ಕೈಫುಲ್ ಇಮಾಮ್ ನಿರ್ದೇಶಕ ಮುಫ್ತಿ ಅಬುಬಕರ್ ಜಾಬೇರ್ ಖಾಸ್ಮಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ : ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಎಚ್.ಜಿ, ಡಯಟ್ ನಿರ್ದೇಶಕ ಗುರುಪ್ರಸಾದ್, ಸಮಿತಿಯ ಕಾರ್ಯದರ್ಶಿ ಅಶೋಕ ವಡಗಾವೆ, ಸದಸ್ಯರಾದ ಶಂಭುಲಿಂಗ ವಾಲ್ದೊಡ್ಡಿ, ಮಂಜುಳಾ ಮೂಲಗೆ, ಐಎಂಎ ಬೀದರ್ ಘಟಕದ ಅಧ್ಯಕ್ಷ ಡಾ. ವಿಜಯ ಬಲ್ಲೂರಕರ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸುನೈನಾ ಗುತ್ತಿ ಮತ್ತಿತರರಿದ್ದರು. ಸಮಿತಿಯ ಬಸವರಾಜ ಮಾಳಗೆ
ನಿರೂಪಿಸಿದರು. ಡಾ.ಶ್ವೇತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...