ಬೀದರ್‌ ವಿಶ್ವವಿದ್ಯಾಲಯ | ಬಿಎಡ್ ಪ್ರಥಮ, ತೃತೀಯ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟ

Date:

ಬೀದರ್‌ ವಿಶ್ವವಿದ್ಯಾಲಯದ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಜುಲೈ 2026ರ ಪರೀಕ್ಷೆಗಳ ಫಲಿತಾಂಶವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ.ಪರಮೇಶ್ವರ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು.

- Advertisement -

ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಮಾತನಾಡಿ ಪರೀಕ್ಷಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಹಕರಿಸಿದ ಪರೀಕ್ಷಾ ವಿಭಾಗದ ಸಿಬ್ಬಂದಿ, ಮೌಲ್ಯಮಾಪಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ https://bidaruniversity.karnataka.gov.in/en ಪರಿಶೀಲಿಸಿಕೊಳ್ಳುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ ಮಾತನಾಡಿ, “ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಿ ಫಲಿತಾಂಶ ವೀಕ್ಷಿಸಬಹುದು. ಅಗತ್ಯವಿದ್ದಲ್ಲಿ ಮರುಮೌಲ್ಯಮಾಪನ ಹಾಗೂ ಇತರೆ ಪರೀಕ್ಷಾ ಸಂಬಂಧಿತ ಸೌಲಭ್ಯಗಳಿಗೆ ವಿಶ್ವವಿದ್ಯಾಲಯದ ನಿಯಮಾನುಸಾರ ಅರ್ಜಿ ಸಲ್ಲಿಸಬಹುದು” ಎಂದು ತಿಳಿಸಿದರು.

ಶಿಕ್ಷಣ ನಿಕಾಯದ ಡೀನ್ ಡಾ.ಮಲ್ಲಿಕಾರ್ಜುನ ಚ. ಕನಕಟ್ಟೆ ಮಾತನಾಡಿ, “ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಬೀದರ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯಲ್ಲಿಯೇ ಪರೀಕ್ಷಾ ಪ್ರಕ್ರಿಯೆ, ಫಲಿತಾಂಶ ಪ್ರಕಟಣೆ ಕಾರ್ಯ ಪೂರ್ಣಗೊಳಿಸಿರುವುದು ಶ್ಲಾಘನೀಯ. ಇದಕ್ಕಾಗಿ ಕುಲಪತಿ ಹಾಗೂ ಕುಲಸಚಿವರಿಗೆ ಧನ್ಯವಾದ ಸಲ್ಲಿಸಿದರು. ಫಲಿತಾಂಶ ಪ್ರಕಟವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಂತ ಹಾಗೂ ಉದ್ಯೋಗಾವಕಾಶಗಳತ್ತ ಮುಂದುವರಿಯಲು ಅನುಕೂಲವಾಗಲಿದೆ” ಎಂದು ಹೇಳಿದರು.

ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಂಡು ಮುಂದಿನ ಶೈಕ್ಷಣಿಕ ಹಂತಕ್ಕೆ ಸಿದ್ಧರಾಗುವಂತೆ ವಿಶ್ವವಿದ್ಯಾಲಯವು ಸೂಚಿಸಿದೆ.

ಇದನ್ನೂ ಓದಿ : ವಚನ ಕಲ್ಯಾಣ | ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು

ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಕಲಾ ವಿಭಾಗದ ನಿಕಾಯ ಡೀನ್‌ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...