ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

Date:

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಿತು.

- Advertisement -

ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಮಾತನಾಡಿ, “ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ. ಅದು ಜೀವನವನ್ನು ಸಾರ್ಥಕಗೊಳಿಸುವ ಶಕ್ತಿಯಾಗಿದೆ. ವಿದ್ಯಾರ್ಥಿಗಳು ಯಶಸ್ಸು ಸಿಕ್ಕಾಗ ವಿನಯದಿಂದಿರಬೇಕು, ಸವಾಲುಗಳನ್ನು ಎದುರಿಸುವಾಗ ತಾಳ್ಮೆ ವಹಿಸಬೇಕು ಹಾಗೂ ಸೋಲಿನಿಂದ ಕುಗ್ಗದೆ ಮತ್ತೆ ಎದ್ದು ಮುನ್ನಡೆಯಬೇಕು ಎಂದು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ವಿಶ್ವವಿದ್ಯಾಲಯದಲ್ಲಿ ಪಡೆದ ಜ್ಞಾನವನ್ನು ವೈಯಕ್ತಿಕ ಪ್ರಗತಿಗೆ ಮಾತ್ರ ಸೀಮಿತಗೊಳಿಸದೆ, ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳೇ ನಾಳೆಯ ವಿಜ್ಞಾನಿಗಳು, ಶಿಕ್ಷಕರು, ಉದ್ಯಮಿಗಳು, ವೈದ್ಯರು, ಆಡಳಿತಗಾರರು ಹಾಗೂ ರಾಷ್ಟ್ರ ನಿರ್ಮಾತೃಗಳಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ವಿಕಸಿತ ಭಾರತ–2047’ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದು ಹೇಳಿದರು.

“ಎಐ ಸೇರಿದಂತೆ ಹೊಸ ತಂತ್ರಜ್ಞಾನಗಳು ಜಗತ್ತನ್ನು ವೇಗವಾಗಿ ಬದಲಾಯಿಸುತ್ತಿವೆ. ಕೃಷಿ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ, ಡಿಜಿಟಲ್ ಸೇವೆಗಳು, ಪರಿಸರ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಆಲೋಚನೆಗಳು ಮತ್ತು ಸ್ಟಾರ್ಟಪ್‌ಗಳಿಗೆ ಅಪಾರ ಅವಕಾಶಗಳಿವೆ. ಸ್ಥಳೀಯ ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಂಡು, ಜ್ಞಾನ ಮತ್ತು ದೃಢಸಂಕಲ್ಪದೊಂದಿಗೆ ಹೊಸ ಪ್ರಯತ್ನಗಳನ್ನು ಕೈಗೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

“ಭಾರತದ ಸಾವಿರಾರು ವರ್ಷಗಳ ಜ್ಞಾನ ಪರಂಪರೆಯು ಗಣಿತ, ವೈದ್ಯಕೀಯ, ಖಗೋಳ ವಿಜ್ಞಾನ, ತತ್ವಶಾಸ್ತ್ರ, ಭಾಷೆ, ಸಾಹಿತ್ಯ, ಕೃಷಿ ಹಾಗೂ ಪರಿಸರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಈ ಜ್ಞಾನ ಪರಂಪರೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ, ಸಂಶೋಧನೆ ನಡೆಸಿ, ಆಧುನಿಕ ವಿಜ್ಞಾನದೊಂದಿಗೆ ಸಮನ್ವಯಗೊಳಿಸಬೇಕು. ಭಾರತೀಯ ಜ್ಞಾನ ಪರಂಪರೆಯ ಬೇರುಗಳು ಹಾಗೂ ಆಧುನಿಕ ವಿಜ್ಞಾನದ ರೆಕ್ಕೆಗಳನ್ನು ಹೊಂದಿರುವ ಭಾರತವನ್ನು ನಿರ್ಮಿಸಬೇಕಿದೆ” ಎಂದು ಅವರು ಹೇಳಿದರು.

ಬೀದರ್ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ವಾಸ್ತುಶಿಲ್ಪದ ಶ್ರೀಮಂತ ಪರಂಪರೆಯನ್ನು ಹೊಂದಿರುವ ಜಿಲ್ಲೆ. ಕಲ್ಯಾಣ ಕರ್ನಾಟಕದಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ. ಗುಣಮಟ್ಟದ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಂಶೋಧನೆ ಹಾಗೂ ಆಧುನಿಕ ಅವಕಾಶಗಳ ಮೂಲಕ ಈ ಭಾಗದ ಯುವ ಪ್ರತಿಭೆಯನ್ನು ಬೆಳೆಸುವ ಅಗತ್ಯವಿದೆ ಎಂದು ರಾಜ್ಯಪಾಲರು ತಿಳಿಸಿದರು.

ಪವಿತ್ರ ನೆಲದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಶ್ಲಾಘನೀಯ

ಕರ್ನಾಟಕ ಹಾಗೂ ಓಡಿಶಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿರ್‌ ಅವರು ಘಟಿಕೋತ್ಸವ ಭಾಷಣ ಮಾಡಿದ ಅವರು, “ಬೀದರ್ ವಿಶ್ವವಿದ್ಯಾಲಯವು ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿರುವುದು ನಿಜಕ್ಕೂ ಅಭಿನಂದನೀಯ. ಮಹಾತ್ಮ ಗಾಂಧೀಜಿಯವರು ‘ಭಾರತವು ಹಳ್ಳಿಗಳಲ್ಲಿ ವಾಸಿಸುತ್ತದೆ’ ಎಂದು ಹೇಳಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಇಂತಹ ವಿಶ್ವವಿದ್ಯಾಲಯಗಳ ಮೂಲಕ ಗಾಂಧೀಜಿಯವರ ಕನಸು ನನಸಾಗುತ್ತಿರುವುದು ಸಂತಸದ ಸಂಗತಿಯಾಗಿದೆ” ಎಂದರು.

“ಭಾರತದಲ್ಲಿ ಶಿಕ್ಷಣ ಪಡೆದು ಉನ್ನತ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕಾಗಿ ಲಕ್ಷಾಂತರ ಯುವಜನರು ವಿದೇಶಗಳತ್ತ ಮುಖ ಮಾಡುತ್ತಿರುವುದು ಖೇದಕರ ಸಂಗತಿ. ವಿದೇಶಕ್ಕೆ ತೆರಳಿದವರಲ್ಲಿ ಬಹುತೇಕರು ತಮ್ಮ ತಾಯ್ನಾಡಿಗೆ ಮರಳಿ ಬಂದು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಬದಲು ಅಲ್ಲಿಯೇ ನೆಲೆಸುವ ಪ್ರವೃತ್ತಿ ಹೆಚ್ಚುತ್ತಿದೆ. ವಿದೇಶದಲ್ಲಿ ಉತ್ತಮ ಭವಿಷ್ಯವಿದೆ ಎಂಬ ಕಾರಣ ಮಾತ್ರದಿಂದ ತಾಯ್ನಾಡನ್ನು ತೊರೆಯುವುದು ಸಮರ್ಥನೀಯವಲ್ಲ. ದೇಶದ ಪ್ರತಿಭಾವಂತ ಯುವಜನತೆ ವಿದೇಶಗಳಿಗೆ ತೆರಳಿ ಅಲ್ಲಿಯೇ ನೆಲೆಸುವುದರಿಂದ ಉಂಟಾಗುತ್ತಿರುವ ಈ ಬೌದ್ಧಿಕ ಪಲಾಯನವು ಭಾರತದ ಗುಣಾತ್ಮಕ ಅಭಿವೃದ್ಧಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ” ಎಂದು ಹೇಳಿದರು.

WhatsApp Image 2026 09 12 at 2.08.08 PM 1
ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾತನಾಡಿದರು

“ಬೀದ‌ರ್ ಮೂಲತಃ ಒಂದು ಪವಿತ್ರ ಭೂಮಿಯಾಗಿದ್ದು, ಇಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಾಮೂಹಿಕ ಶಿಕ್ಷಣ ನೀಡಿದರು, ಸರ್ವಸಮಾನತೆ ಮತ್ತು ಜಾತ್ಯತೀತ ನಿಲುವಿನಿಂದ ಸ್ತ್ರೀಯರಿಗೆ ಮತ್ತು ದಮನೀಯ ಸಮುದಾಯದವರಿಗೆ ವಿದ್ಯೆ ನೀಡಿದರು. ಸಿಖ್‌ ಧರ್ಮಗುರು ಗುರುನಾನಕ್ ಇಲ್ಲಿಗೆ ಬಂದು ತಂಗಿದ ಕಾರಣ ಇದೊಂದು ತೀರ್ಥಸ್ಥಳವೆನಿಸಿದೆ. ಬೀದರಿನ ಇಂತಹ ಪವಿತ್ರ ಭೂಮಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪಿತವಾಗಿರುವುದು ಅತ್ಯಂತ ಶ್ಲಾಘನೀಯ. ಎಲ್ಲ ವಿದ್ಯಾರ್ಥಿಗಳು ರಾಷ್ಟ್ರ ಪುನರ್‌ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇಬ್ಬರಿಗೆ ಗೌರವ ಡಾಕ್ಟರೇಟ್‌

ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಎಸ್. ಎಂ.ಜನವಾಡಕರ್‌ ಹಾಗೂ ಸಮಾಜ ಸೇವೆಯಲ್ಲಿ ಸೇವೆ ಸಲ್ಲಿಸಿದ ಶಿವಯ್ಯಾ ಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು.

ಚಿನ್ನದ ಪದಕ ಪಡೆದ 20 ವಿದ್ಯಾರ್ಥಿಗಳು

ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಒಟ್ಟು 20 ವಿದ್ಯಾರ್ಥಿಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕ ಪ್ರದಾನ ಮಾಡಿದರು.

WhatsApp Image 2026 09 12 at 2.08.09 PM 3

ಚಿನ್ನದ ಪದಕ ಪಡೆದವರಲ್ಲಿ ಎಂ.ಎ. ಅರ್ಥಶಾಸ್ತ್ರ ವಿಭಾಗದ ಪಲ್ಲವಿ, ಬಿ.ಇಡಿ. ವಿಭಾಗದ ರೇಣುಕಾ, ಎಂ.ಎ. ಇಂಗ್ಲಿಷ್‌ನ ನಿಖಿತಾ, ಎಂ.ಎ. ಇತಿಹಾಸದ ಭಾಗ್ಯಶ್ರೀ, ಎಂ.ಎ. ಕನ್ನಡದ ಜಯಶ್ರೀ, ಎಂ.ಎ. ರಾಜ್ಯಶಾಸ್ತ್ರದ ಅನುಪಮಾ, ಎಂ.ಎ. ಸಮಾಜಶಾಸ್ತ್ರದ ನಂದಿನಿ, ಎಂ.ಎ. ಉರ್ದು ವಿಭಾಗದ ಇರ್ಫಾನಾ ಬೇಗಂ, ಎಂ.ಎ. ಮಹಿಳಾ ಅಧ್ಯಯನದ ರವಿಕುಮಾರ, ಎಂ.ಕಾಂ. ವಿಭಾಗದ ಮುಹಮ್ಮದ್ ಮುಜಮ್ಮಿಲ್, ಎಂ.ಎಡ್. ವಿಭಾಗದ ಸ್ವಾತಿ, ಎಂ.ಎಸ್‌.ಡಬ್ಲ್ಯೂ. ವಿಭಾಗದ ಆಶಾ ಸೇರಿದ್ದಾರೆ. ಎಂ.ಎಸ್‌.ಸಿ. ಬಯೋಟೆಕ್ನಾಲಜಿ ವಿಭಾಗದ ನಿದಾ ಹಬೀಬಾ, ಎಂ.ಎಸ್‌.ಸಿ. ಸಸ್ಯಶಾಸ್ತ್ರದ ಸೋನಿಯಾ ಪಾಟೀಲ, ಎಂ.ಎಸ್‌.ಸಿ. ರಸಾಯನಶಾಸ್ತ್ರದ ಸೈಯದಾ ಮಾರಿಯಾ ಫಾತಿಮಾ, ಎಂ.ಎಸ್‌.ಸಿ. ಕಂಪ್ಯೂಟರ್ ಸೈನ್ಸ್‌ನ ಹುರಿಯತ್ ಫಾತಿಮಾ, ಎಂ.ಎಸ್‌.ಸಿ. ಗಣಿತದ ಮೆಹರಿನ್ ಅಮೀನ್, ಎಂ.ಎಸ್‌.ಸಿ. ಆರ್ಗ್ಯಾನಿಕ್ ಕೆಮಿಸ್ಟ್ರಿಯ ಮನೀಷಾ, ಎಂ.ಎಸ್‌.ಸಿ. ಭೌತಶಾಸ್ತ್ರದ ದಿವ್ಯಾ ಹಾಗೂ ಎಂ.ಎಸ್‌.ಸಿ. ಪ್ರಾಣಿಶಾಸ್ತ್ರದ ಸೈಯದಾ ಮೆಹಮೂದಾ ಬಾನು ಅವರು ಚಿನ್ನದ ಪದಕ ಪಡೆದರು.

ಘಟಿಕೋತ್ಸವದಲ್ಲಿ ಒಟ್ಟು 112 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇದರಲ್ಲಿ 10 ಸ್ನಾತಕ ಹಾಗೂ 102 ಸ್ನಾತಕೋತ್ತರ ಪದವಿಗಳು ಸೇರಿವೆ. 20 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ವಿಶ್ವವಿದ್ಯಾಲಯದ 11 ಚಿನ್ನದ ಪದಕಗಳು ಹಾಗೂ 9 ಪ್ರಾಯೋಜಿತ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

WhatsApp Image 2026 09 12 at 2.08.09 PM 2

ಕುಲಪತಿ ಇಂಗ್ಲಿಷ್‌ನಲ್ಲಿ, ರಾಜ್ಯಪಾಲ ಹಿಂದಿಯಲ್ಲಿ ಭಾಷಣ

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ್ ಅವರು ಗಣ್ಯ ಅತಿಥಿಗಳನ್ನು ಪರಿಚಯಿಸಿ, ವಿಶ್ವವಿದ್ಯಾಲಯದ ಸಂಕ್ಷಿಪ್ತ ಪರಿಚಯವನ್ನು ಇಂಗ್ಲಿಷ್‌ ಭಾಷೆಯಲ್ಲಿ ಮಾಡಿದರೆ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕನ್ನಡದಲ್ಲಿ ʼಎಲ್ಲರಿಗೂ ನಮಸ್ಕಾರʼ ಹೇಳಿ ಘಟಿಕೋತ್ಸವ ಭಾಷಣವನ್ನು ಹಿಂದಿ ಭಾಷೆಯಲ್ಲಿ ಮಾಡಿದರು. ನಿವೃತ್ತ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ಕನ್ನಡದಲ್ಲಿಯೇ ಭಾಷಣ ಮಾಡಿದರು.

ಕುಲಸಚಿವ ಪರಮೇಶ್ವರ ನಾಯಕ್ ಅವರು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪಟ್ಟಿಯನ್ನು ಮಂಡಿಸಿದರು.

ವಿವಿಧ ವಿಭಾಗದ ಡೀನ್‌ಗಳಾದ  ಡಾ.ರವಿಂದ್ರನಾಥ ಗಬಾಡಿ, ಡಾ.ಜಯಕುಮಾರ ಶಿಂಧೆ, ಡಾ. ಶರಣಪ್ಪ ಮಲಗೊಂಡ, ಡಾ.ರೂತಾ ಹಾಗೂ ಡಾ. ಮಲ್ಲಿಕಾರ್ಜುನ ಸಿ ಕನಕಟ್ಟೆ ಹಾಗೂ ಬೀದರ್‌ ವಿವಿಯ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಶಿವನಾಥ ಪಾಟೀಲ್, ವಿಠಲದಾಸ್ ಪ್ಯಾಗೆ, ವೈಷ್ಣವಿ ಪಾಟೀಲ್, ಸಚಿನ್ ಮಲ್ಕಾಪುರೆ, ಅಬ್ದುಲ್ ಸತ್ತಾರ್, ಅರ್ಜುನ ಕನಕ. ಡಾ.ರಮೇಶ ಬುಳ್ಳಾ, ಡಾ.ಮಲ್ಲಿಕಾರ್ಜುನ ಜಾಬಾ, ಡಾ.ಅಂಬೀಕಾದೇವಿ ಕೊತಮೀರ ಉಪಸ್ಥಿತರಿದ್ದರು.

ಇದನ್ನೂ ಓದಿ : ವಚನ ಕಲ್ಯಾಣ | ಭಕ್ತಂಗೆ ಸುಖವೂ ಸರಿ, ದುಃಖವೂ ಸರಿ..

ಅಕಾಡೆಮಿಕ ಕೌನ್ಸಿಲ್ ಸದಸ್ಯರಾದ  ಡಾ.ಗೀರಿರಾವ ಕುಲಕರ್ಣಿ, ಡಾ.ಹೇಮಾವತಿ ಪಾಟೀಲ್, ಡಾ.ಮಲ್ಲಿಕಾರ್ಜುನ ಕಾಂಬಳೆ, ಡಾ.ಗಂಗಶೆಟ್ಟಿ ಬಿರಾದಾರ, ಡಾ.ಸ್ಟಾನಲಿ ಸ್ಯಾಮವೇಲ್, ಡಾ.ಶಿವಕುಮಾರ ಪಾಟೀಲ್, ಡಾ.ವೇದಪ್ರಕಾಶ ಆರ್ಯ, ಡಾ.ಗೋಪಾಲ ಬಡಿಗೇರ ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಡಾ.ವಿದ್ಯಾ ಪಾಟೀಲ್ ನಿರೂಪಿಸಿದರು, ಡಾ.ಶ್ರೀನಿವಾಸ ರೆಡ್ಡಿ ನೆರವೇರಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...