ಬೀದರ್‌ | ಎಸಿಎಸ್‌ಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಸಿ : ಡಾ.ಮೂರ್ತಿ ಎಲ್.

Date:

ಎಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ʼಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ ಅಭಿವೃದ್ಧಿ ನಿಗಮ ಇನ್ನಿತರ ಇಲಾಖೆಗಳಲ್ಲಿ ಎಸಿಎಸ್‌ಪಿ, ಟಿಎಸ್‌ಪಿ ಯೋಜನೆಗಳಲ್ಲಿ ಮೀಸಲಾಗಿಟ್ಟ ಅನುದಾನದಡಿಯಲ್ಲಿ ಕಾಮಗಾರಿ, ಇತರೆ ಸೌಲಭ್ಯಗಳು ನಿಗದಿಪಡಿಸಿದ ಓಣಿಗಳಲ್ಲಿ ಬಳಸಿ ಅದೇ ವರ್ಗದ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಾಗುವ ದೌರ್ಜನ್ಯ ಪ್ರಕರಣಗಳು ದಾಖಲಾಗದಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲಿ ಇತ್ಯರ್ಥಪಡಿಸುವಂತೆ ನೋಡಿಕೊಳ್ಳುವಂತೆ ನಿರ್ದೇಶಿಸಿದರು.

ಕಂದಾಯ ಗ್ರಾಮಗಳಲ್ಲಿ ಸ್ಮಶಾನ ಭೂಮಿ, ಕುಡಿಯುವ ನೀರು, ಇನ್ನಿತರ ಸೌಲಭ್ಯಗಳು ಒದಗಿಸಿ ಅವರ ಅಭಿವೃದ್ಧಿಗಾಗಿ ಕ್ರಮವಹಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವಿದ್ಯಾರ್ಥಿಗಳನ್ನು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದುವಂತೆ ನೋಡಿಕೊಳ್ಳಬೇಕುʼ ಎಂದರು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡದ ನೂರಾರು ಪದಾಧಿಕಾರಿಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಮತ್ತು ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ್ ಎಂ, ಎಂ.ಕುಂಬಯ್ಯ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತರ ಮುಕುಲ್ ಜೈನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಮಾಜಿ ಎಂಎಲ್ಸಿ ಅರವಿಂದ ಅರಳಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಾದ ಅನೀಲಕುಮಾರ ಬೆಲ್ದಾರ್‌, ಮಾರುತಿ ಬೌದ್ಧೆ, ಮಹೇಶ ಗೋರನಾಳಕರ, ರಮೇಶ ಡಾಕುಳಗಿ, ಪಂಡಿತರಾವ ಚಿದ್ರಿ, ಬಸವರಾಜ ಮಾಳಗೆ ಸೇರಿದಂತೆ ಪರಿಶಿಷ್ಟ ಜಾತಿ, ಪಂಗಡದ ಸಾರ್ವಜನಿಕರು ಭಾಗವಹಿಸಿದರು.

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು

ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ಜನರು ಅರಣ್ಯ ಭೂಮಿಯಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, 53, 57 ಮತ್ತು ಸಿ ಫಾರಂ ಹೊಂದಿರುವವರು ಅರ್ಜಿ ಸಲ್ಲಿಸಿದ್ದಾರೆ. ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೂಚಿಸಿದರು.

ʼಮುಂದಿನ ತಿಂಗಳು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಸಾಗುವಳಿ ಮಾಡುತ್ತಿರುವ ಜನಾಂಗದವರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲು ಆಯೋಗ ಸೂಚಿಸಲಿದೆ. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಜನರ ಭೂಮಿಗೆ ಸಂಬಂಧಿಸಿದ ಪೋಡಿ ಸೇರಿದಂತೆ ಇತರೆ ಕೆಲಸಗಳನ್ನು ಕಂದಾಯ ಇಲಾಖೆ ತ್ವರಿತಗತಿಯಲ್ಲಿ ಮಾಡಬೇಕು. ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬೇಡಿಕೆ ಇರುವ ಗ್ರಾಮಗಳಿಗೆ ಭೂಮಿ ಒದಗಿಸುವುದು ಅನಿವಾರ್ಯʼ ಎಂದು ಹೇಳಿದರು.

ʼನಕಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತಡೆಯಲು ಮುಂದಿನ ದಿನಗಳಲ್ಲಿ ಕುಲಶಾಸ್ತ್ರೀಯ ಅಧ್ಯಯನದ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಲು ಅವರ ಗುಡಿಸಲುಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಪರಿಶಿಷ್ಟ ಜಾತಿ ಪಂಗಡದ ಜನರ ಹಿತರಕ್ಷಣೆ ಕಾಪಾಡುವಲ್ಲಿ ಆಯೋಗವು ಸಿದ್ಧವಿದ್ದು ಈಗಾಗಲೇ 3,900 ಪ್ರಕರಣಗಳು ನಡೆಯುತ್ತಿವೆ. ದಿನನಿತ್ಯ ಸಾವಿರಾರು ಅರ್ಜಿಗಳು ಬರುತ್ತಿವೆ, ಈಗಾಗಲೇ 325 ಪ್ರಕರಣಗಳನ್ನು ಕೋರ್ಟ ನಡೆಸಿ ಇತ್ಯರ್ಥ ಪಡಿಸಲಾಗಿದೆ. ಈಚೆಗೆ ಸುಳ್ಳು ಜಾತಿ ಪ್ರಮಾಣ ಪತ್ರಗಳ ಸಂಖ್ಯೆ ಹೆಚ್ಚುತ್ತಿವೆ. ಬೇಡ ಜಂಗಮ, ಬುಡ್ಗಾ ಜಂಗಮ ಕುರಿತು ಈಗಾಗಲೇ ಪ್ರಕರಣಗಳ ಬಗ್ಗೆ ನ್ಯಾಯಾಲಯ ತೀರ್ಪು ನೀಡಿವೆ. ಶಾಲಾ-ಕಾಲೇಜು ಹಂತದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಒಳಮೀಸಲಾತಿ ಅನ್ಯಾಯ ಸರಿಪಡಿಸಲು ಬಲಗೈ ಸಮುದಾಯ ಒತ್ತಾಯ

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಕಾರ್ಯದರ್ಶಿ ಡಾ.ಎಚ್.ಎಸ್.ಶಿವರಾಮ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...