ಬೀದರ್ | ಕೂಲಿಕಾರರ ಹಕ್ಕು ಕಸಿಯುವ ವಿಬಿ-ಜಿ ರಾಮ್ ಜಿ ಕಾಯ್ದೆ : ಮಸೂದೆ ಹಿಂಪಡೆಯಲು ಆಗ್ರಹ

Date:

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದು ಹಾಕಿ ಕೇವಲ ಸರ್ಕಾರದ ಅಣತಿಯ ವಿಬಿ-ಜಿ ರಾಮ್ ಜಿ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು.

- Advertisement -

ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪದಾಧಿಕಾರಿಗಳು, ಕಾರ್ಮಿಕರು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼ2004-2005ರಲ್ಲಿ ಎಡಪಕ್ಷಗಳ ಬೆಂಬಲದ ಮೇಲೆ ಆಧಾರವಾಗಿದ್ದ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆಯನ್ನು ಗ್ರಾಮೀಣ ಭಾಗದ ಕೃಷಿ ಕೂಲಿಕಾರರು. ಬಡ ರೈತರು ಹಾಗೂ ಇನ್ನಿತರ ಗ್ರಾಮೀಣ ದುಡಿಮೆಗಾರರಲ್ಲಿ ಶೇ.30 ರಷ್ಟು ಜನರು ತಮ್ಮ ಜೀವನೋಪಯಕ್ಕಾಗಿ ಅವಲಂಬಿದ್ದರು. ಆದರೆ, ಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಹೊಸದಾಗಿ ವಿಬಿ- ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೊಳಿಸಿದ್ದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಈ ಹೊಸ ಕಾಯ್ದೆಯಿಂದ ಕೃಷಿಕರು, ಕೂಲಿಕಾರರ ಮೇಲೆ ಹಲವು ದುಷ್ಪಪರಿಣಾಮಗಳು ಬೀರುತ್ತವೆ. ಮನರೇಗಾ 60 ದಿನಗಳ ಕೃಷಿ ಕೆಲಸ ನಿರ್ಬಂಧಿಸಿದನ್ನು ನೋಡಿದರೆ 125 ದಿನಗಳ ಕೆಲಸ ಸಿಗುವುದಿಲ್ಲ. ಹೀಗಾಗಿ ಕಾರ್ಮಿಕರು ಕೆಲಸದಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಶೇ 60 ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಮೊತ್ತವನ್ನು ಖರ್ಚು ಮಾಡಬೇಕೆಂಬ ಅಂಶಗಳಿವೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವು ಹಣ ನೀಡಿಲ್ಲವೆಂದು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವು ಹಣ ಕೊಟ್ಟಿಲ್ಲವೆಂದು ಹೇಳುವ ಮೂಲಕ ಕೂಲಿ ಕಾರ್ಮಿಕರನ್ನು ಕೂಲಿಯಿಂದ ವಂಚಿತರಾಗಿ ಮಾಡುತ್ತದೆʼ ಎಂದು ದೂರಿದರು.

WhatsApp Image 2026 01 06 at 6.27.44 PM 1

ʼಮನರೇಗಾ ಕಾಯ್ದೆಯಲ್ಲಿ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸದೆ ಮಾನವ ದಿನಗಳ ಮೂಲಕ ಉದ್ಯೋಗ ಸೃಷ್ಟಿಸಲು ಕಾನೂನು ಇತ್ತು. ವಿಬಿ-ಜಿ ರಾಮ್‌ ಜಿ ಹೊಸ ಕಾಯ್ದೆಯಲ್ಲಿ ಯಂತ್ರಗಳನ್ನು ಬಳಸಿ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಅಂಶಗಳಿದ್ದು, ಇದರಿಂದ ಕೂಲಿಕಾರರಿಗೆ ಕೂಲಿ ದಿನಗಳು ಸಿಗದಂತೆ ಆಗುತ್ತದೆ. ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಈ ಉದ್ಯೋಗ ಯೋಜನೆಯಲ್ಲಿ ಕೆಲಸ ಕೊಡಬೇಕೆಂಬ ನಿಯಮಗಳು ಹಾಗೂ ಕೇಂದ್ರ ಸರ್ಕಾರ ಅಧಿಸೂಚಿತ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾತ್ರವೇ ಉದ್ಯೋಗ ಖಾತರಿ ಜಾರಿ ಎಂಬ ಅಂಶಗಳು ಕೂಲಿಕಾರರ ಹಕ್ಕನ್ನು ಕಸಿದುಕೊಳ್ಳಲಿದೆʼ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಬಿ-ಜಿ ರಾಮ್‌ ಜಿ ಹೊಸ ಪದ್ಧತಿ ಕಾಯ್ದೆಯ ಉದ್ಯೋಗ ಖಾತ್ರಿಯನ್ನು ಮುಂದಿನ ದಿನಗಳಲ್ಲಿ ತೆಗೆದು ಹಾಕುವ ಹುನ್ನಾರವಾಗಿದೆ. ಕೃಷಿ ಮತ್ತು ಗ್ರಾಮೀಣ ರೈತರನ್ನು ಕೂಲಿ ಕೆಲಸದಿಂದ ತೆಗೆದು ಹಾಕುವ ಹುನ್ನಾರ ಬಿಜೆಪಿ ಕೇಂದ್ರ ಸರ್ಕಾರ ಮಾಡುತ್ತಿದೆ. ಈ ಹೊಸ ಕಾಯ್ದೆ ಕೂಡಲೇ ಹಿಂಪಡೆದು ಹಳೆ ಮನರೇಗಾ ಕಾಯ್ದೆಯನ್ನೇ ಮುಂದುವರೆಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಟ್ರಸ್ಟ್‌ಗಳು ರಚಿಸಿ ಸರ್ಕಾರ ಆದೇಶ

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಸಾಮೋದ್ದೀನ್‌, ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಸಹ ಕಾರ್ಯದರ್ಶಿ ದೇವಾನಂದ ಗಾಯಕವಾಡ ಸೇರಿದಂತೆ ಪ್ರಭು ಸಂತೋಷಕರ್‌, ಲಖನ್‌ ಮಹಾಜನ್‌, ಸೂರ್ಯಕಾಂತ, ಶ್ರೀಮಂತ, ಕಂಟೆಪ್ಪ, ಭುಜಂಗ, ಸಂಗ್ರಾಮ, ಶಾಂತಮ್ಮ, ಕಾಶಿಬಾಯಿ, ಹುಸೇನ್‌ ಹಾಗೂ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...