ಬೀದರ್‌ | ಬೆಳಗ್ಗೆ ನಡೆ-ಗ್ರಾಮಗಳ ಕಡೆ ಅಭಿಯಾನ: ನೂತನ ಸಿಇಒ ಗಿತ್ತೆ ಮಾಧವ ಮಿಂಚಿನ ಸಂಚಾರ

Date:

ಬೀದರ್ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ)‌ ಅಧಿಕಾರ ಸ್ವೀಕರಿಸಿದ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮೊದಲ ದಿನ ಮಂಗಳವಾರ ಬೆಳಿಗ್ಗೆ ಬೀದರ್ ತಾಲೂಕಿನ ಕಮಠಾಣ, ಬಗದಲ್ ಹಾಗೂ ಚಟ್ನಳ್ಳಿ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

- Advertisement -

ಕಮಠಾಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳನ್ನು ವೀಕ್ಷಿಸಿ ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳ ಪರಿಶೀಲಿಸಿದರು. ರೋಗಿಗಳಿಗೆ ವಿತರಿಸಲಾಗುವ ಮಾತ್ರೆಗಳು ಹಾಗೂ ಔಷಧಗಳ ದಾಸ್ತಾನು ಸಮರ್ಪಕವಾಗಿದೆಯೇ ಎಂಬುದನ್ನು ಫಾರ್ಮಸಿಯಲ್ಲಿ ಪರಿಶೀಲಿಸಿದರು. ಬಳಿಕ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಅಲ್ಲಿನ ತಪಾಸಣಾ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಂತರ ಕಮಠಾಣ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಸಿಇಒ ಅವರು, ಕಚೇರಿಯ ಕಾರ್ಯನಿರ್ವಹಣೆ ಪರಿಶೀಲಿಸಿದರು. ಸ್ಥಳದಲ್ಲಿದ್ದ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವುದಾಗಿ ಗ್ರಾಮಸ್ಥರು ಗೋಳು ತೋಡಿಕೊಂಡರು. ಅದಕ್ಕೆ ಸ್ಪಂದಿಸಿದ ಸಿಇಒ ಅವರು, ʼಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು. ಯಾರೂ ಆತಂಕ ಪಡುವ ಅಗತ್ಯವಿಲ್ಲʼ ಎಂದು ಭರವಸೆ ನೀಡಿದರು.

WhatsApp Image 2026 09 01 at 3.30.28 PM

ಬಗದಲ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಅಡುಗೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ತಯಾರಿಸಲಾಗುವ ಆಹಾರದಲ್ಲಿ ಬಳಸುವ ತರಕಾರಿ ಹಾಗೂ ದಿನಸಿ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಾಲಿನಲ್ಲಿ ಕುಳಿತು ಮಧ್ಯಾಹ್ನದ ಊಟ ಸೇವಿಸಿದರು. ಊಟದ ಗುಣಮಟ್ಟ ಹಾಗೂ ರುಚಿಯ ಕುರಿತು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿಇಒ, ʼಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು. ಪ್ರತಿಯೊಬ್ಬರೂ ಶಿಸ್ತನ್ನು ಅಳವಡಿಸಿಕೊಂಡು, ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು” ಎಂದು ಕಿವಿಮಾತು ಹೇಳಿದ ಅವರು, ಶಾಲೆಯಲ್ಲಿರುವ ಚೆಸ್ ಪಾರ್ಕ್ ಹಾಗೂ ಮ್ಯಾಥ್ಸ್ ಪಾರ್ಕ್‌ಗಳನ್ನು ವೀಕ್ಷಿಸಿ, ಅವುಗಳ ಬಳಕೆಯ ಕುರಿತು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಮಾಹಿತಿ ಪಡೆದರು.

ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಅಲ್ಲಿನ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳವನ್ನು ಪರಿಶೀಲಿಸಿದರು. ಕೇವಲ ಕಾಮಗಾರಿಯ ವೀಕ್ಷಣೆಗೆ ಸೀಮಿತವಾಗದೆ, ಸ್ಥಳದಲ್ಲಿದ್ದ ಕಾರ್ಮಿಕರ ಹಾಜರಾತಿಯನ್ನು ಸ್ವತಃ ಪರಿಶೀಲಿಸಿ ದಾಖಲಿಸಿಕೊಂಡರು. ಅಲ್ಲದೆ, ಕೆಲಕಾಲ ಕಾರ್ಮಿಕರೊಂದಿಗೆ ಕಾಯಕದಲ್ಲಿ ತೊಡಗಿಸಿಕೊಂಡು ಶ್ರಮದಾನದ ಅನುಭವ ಪಡೆದರು.

WhatsApp Image 2026 09 01 at 6.42.55 PM

ಚಟ್ನಳ್ಳಿ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿ, ಪಂಚಾಯತಿಯ ಕಾರ್ಯನಿರ್ವಹಣೆ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ಇದನ್ನೂ ಓದಿ : ಭಾಲ್ಕಿ ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಈ ಸಂದರ್ಭದಲ್ಲಿ ಬೀದರ್‌ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್‌ ಪಾಟೀಲ್ ಸೇರಿದಂತೆ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2026 09 01 at 3.30.30 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...