ಬೀದರ್‌ | 43 ಗ್ರಾಮಗಳಲ್ಲಿ ನೀರಿನ ಅಭಾವ : ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯ ಕ್ರಮ

Date:

ಔರಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಹೆಚ್ಚಿನ ನೀರಿನ ಅಭಾವ ಕಂಡುಬಂದಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 43 ಗ್ರಾಮಗಳಲ್ಲಿ ನೀರು ಸಮಸ್ಯೆ ಉಲ್ಬಣಗೊಂಡಿದೆ. ಮೇ ತಿಂಗಳ ಅಂತ್ಯದವರೆಗೆ ಸಮಸ್ಯೆ ತೀವ್ರ ಆಗಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ʼಔರಾದ್‌ ತಾಲೂಕಿನ 14 ಗ್ರಾಮ, ಕಮಲನಗರ 11, ಬಸವಕಲ್ಯಾಣ 10, ಭಾಲ್ಕಿಯ 8 ಗ್ರಾಮ ಸೇರಿ ಒಟ್ಟು 43 ಗ್ರಾಮಗಳಲ್ಲಿ ನೀರಿನ ಅಭಾವ ಇದೆ. ಈ ಗ್ರಾಮಗಳಲ್ಲಿ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮುಂದುವರಿಸಬೇಕು. ತೀರಾ ಅಗತ್ಯವಿದ್ದಲ್ಲಿ ಮಾತ್ರ ಹೊಸ ಕೊಳವೆ ಬಾವಿ ಕೊರೆಯಿಸಿʼ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ʼಸರಕಾರದ ಅನುದಾನದಿಂದ ಖಾಸಗಿ ಜಮೀನಿನಲ್ಲಿ ಕೊರೆಯಿಸಿದ ಕೊಳವೆ ಬಾವಿ ಅಥವಾ ತೆರೆದ ಬಾವಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ಕೆಲವರು ಅಡ್ಡಿಯನ್ನುಂಟು ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಯಾರು ಎಷ್ಟೇ ಪ್ರಭಾವಿಯಾಗಿರಲಿ, ಶಕ್ತಿಶಾಲಿಯಾಗಿರಲಿ, ಬೇಸಿಗೆಯ ತಾಪದ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಯಾವುದೇ ರೀತಿಯ ಅಡ್ಡಿಯನ್ನುಂಟು ಮಾಡುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಬೇಕುʼ ಎಂದು ಸಚಿವ ಖಂಡ್ರೆ ಅವರು ಸೂಚಿಸಿದರು.

ʼಅಂತರ್ಜಲ ಮಟ್ಟ 700 ರಿಂದ 800 ಅಡಿವರೆಗೆ ಕುಸಿದಿದ್ದು, ಔರಾದ್‌ ತಾಲೂಕಿನ ತಾಂಡಾಗಳಲ್ಲಿ ನೀರಿನ ಅಭಾವ ಹೆಚ್ಚು ಕಂಡು ಬಂದಿದೆ. ಕೊಳವೆಬಾವಿ ಪುನಶ್ಚೇತನ, ಪ್ಲಶಿಂಗ್ ಹಾಗೂ ಡೀಪನಿಂಗ್ ಕಾರ್ಯ ಕೈಗೊಳ್ಳಬೇಕು. ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧವಾಗಿರಿಸಬೇಕುʼ ಎಂದು ಅಧಿಕಾರಿಗಳಿಗೆ ತಿಳಿಸಿದರು.‌

WhatsApp Image 2026 05 04 at 9.53.40 PM
ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ʼಸಮಸ್ಯಾತ್ಮಕ ಗ್ರಾಮ, ವಾರ್ಡ್‌ಗಳಲ್ಲಿ ಸ್ಥಳೀಯ ತಹಸೀಲ್ದಾರರು, ತಾಲ್ಲೂಕು ಪಂಚಾಯತ ಇಓ, ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಬೆಳಿಗ್ಗೆ ಭೇಟಿ ನೀಡಿ ನೀರು ಸರಬರಾಜು ಸ್ಥಿತಿಯನ್ನು ನಿಭಾಯಿಸಿ ನೇರವಾಗಿ ಮೋಟಾರು ಹಚ್ಚಿಕೊಳ್ಳುವವರ ಸರಬರಾಜು ಕಟ್ ಮಾಡಬೇಕುʼ ಎಂದು ಸೂಚಿಸಿದರು.

ಗ್ರಾಮಗಳ ಅವಶ್ಯಕತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿ ಟ್ಯಾಂಕರ್ ಸರಬರಾಜು ಮಾಡುವುದರ ಬಿಲ್‌ಗಳನ್ನು ಸಕಾಲದಲ್ಲಿ ಪಾವತಿಸಬೇಕು. ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಮುಂದಿನ 24 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು ಇದೆ. ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಕಾರಂಜಾ ಹಾಗೂ ಚುಳಕಿ ನಾಲಾ ಜಲಾಶಯಗಳಿಂದ ನೀರು ಬಿಡುವಂತೆ ಸೂಚಿಸಿದರು.

ವಿದ್ಯುತ್ ವ್ಯತ್ಯಯ ಸಮಸ್ಯೆಗಳ ಕುರಿತು ಚರ್ಚಿಸಿ, ನಿರಂತರ ಹಾಗೂ ಸುಗಮ ವಿದ್ಯುತ್ ಪೂರೈಕೆಗೆ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕಾಲುವೆಗಳ ಮೂಲಕ ನೀರು ಹರಿಸುವ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೆಕು. ಮುಂಗಾರು ಕೃಷಿ ಬಿತ್ತನೆಗೆ ರೈತರಿಗೆ ಬೀಜ, ರಸಗೊಬ್ಬರಗಳ ಕೊರತೆ ಆಗದಂತೆ ಹಾಗೂ ಎಲ್ಲವನ್ನು ಈಗಲೇ ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದರು.

ಬೇಸಿಗೆ ಸಂದರ್ಭದಲ್ಲಿ ಅರಣ್ಯ ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳನ್ನು ಗಂಭೀರವಾಗಿ ಪರಿಗಣಿಸಿ, ಅಗ್ನಿಶಾಮಕ ದಳವನ್ನು ಸದಾ ಸನ್ನದ್ಧವಾಗಿರಿಸುವುದರ ಜೊತೆಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚುವವರ ವಿರುದ್ಧ ಕಟ್ಟುನಿಟ್ಟಿನ ತನಿಖೆ ನಡೆಸಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜನರ ಮೂಲಭೂತ ಅಗತ್ಯಗಳಾದ ನೀರು, ವಿದ್ಯುತ್ ಸರಬರಾಜಿನಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳ ಬಗ್ಗೆ ಜನರಿಂದ ಬಂದ ದೂರನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಇದನ್ನೂ ಓದಿ : ಬೀದರ್‌ | ಬಿಸಿಲಿನ ತಾಪ : ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಸಮಯ ಬದಲಾವಣೆ ಇಲ್ಲವೇ?

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಸಿಇಪ ಡಾ.ಗಿರೀಶ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...