ಬೀದರ್‌ | 68 ಗ್ರಾಮಗಳಲ್ಲಿ ನೀರಿನ ಅಭಾವ : 19 ಕಡೆ ಟ್ಯಾಂಕರ್; 59 ಖಾಸಗಿ ಬೋರ್‌ವೆಲ್ ಬಾಡಿಗೆ

Date:

ಬೀದರ್ ಜಿಲ್ಲೆಯ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 68 ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದು, 19 ಕಡೆಗಳಲ್ಲಿ ಟ್ಯಾಂಕರ್ ಹಾಗೂ 59 ಕಡೆ ಖಾಸಗಿ ಬೋರವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.

- Advertisement -

ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕುಡಿಯುವ ನೀರಿನ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ʼಮುಂಗಾರು ಹಂಗಾಮು ಆರಂಭಗೊಳ್ಳುವ ತನಕ ಜೂ.15 ರವರೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಲ್ಲೇ ಕಂಡು ಬಂದರೂ 24 ಗಂಟೆಯಲ್ಲಿ ಬಗೆಹರಿಸಬೇಕುʼ ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ʼಔರಾದ್‌ ತಾಲೂಕಿನ 10 ಗ್ರಾಮ ಪಂಚಾಯತ್‌ಗಳಲ್ಲಿ 22 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ, ಈ ಪೈಕಿ 11 ಕಡೆ ಟ್ಯಾಂಕರ್‌, 14 ಕಡೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಇನ್ನೂ ಭಾಲ್ಕಿ ತಾಲೂಕಿನ 18 ಗ್ರಾಮ ಪಂಚಾಯತ್‌ ವ್ಯಾಪ್ತಿಯ 13 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಈ ಪೈಕಿ 3 ಕಡೆ ಟ್ಯಾಂಕರ್‌ ಹಾಗೂ 18 ಕಡೆ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆʼ ಎಂದು ವಿವರಿಸಿದರು.

ʼಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ 68 ಗ್ರಾಮಗಳಲ್ಲಿ ಒಟ್ಟು 19 ಕಡೆ ಟ್ಯಾಂಕರ್‌ ಹಾಗೂ 59 ಕಡೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಸುವ ವ್ಯವಸ್ಥೆ ಆಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಜಿಲ್ಲೆಗೆ ₹4 ಕೋಟಿ ಅನುದಾನ ಬಿಡುಗಡೆಯಾಗಿದೆ. ಉಳಿದ ತಾಲೂಕುಗಳಲ್ಲಿ ನೀರಿನ ಸಮಸ್ಯೆ ಇರುವ ಕಡೆ ಸಮಸ್ಯೆ ಬಗೆಹರಿಸಲಾಗಿದೆ. ಜಿಲ್ಲೆಯ ಯಾವುದೇ ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ಇಲ್ಲʼ ಎಂದರು.

ʼಕಾರಂಜಾ ಜಲಾಶಯದಲ್ಲಿ ಸದ್ಯ 5 ಟಿಎಂಸಿ ನೀರು ಸಂಗ್ರಹ ಇದೆ. ಹೀಗಾಗಿ ನಗರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಬರದಂತೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಆಯಾ ತಾಲೂಕಿನ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ 20 ದಿನಗಳಲ್ಲಿ ಅಥವಾ ಜೂ.7ರ ವರೆಗೆ ಮುಂಗಾರು ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅಧಿಕಾರಿಗಳು ಜೂ.15ರ ವರೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲರೂ ಜಾಗೃತರಾಗಿರಬೇಕುʼ ಎಂದರು.

ʼಔರಾದ್‌ ತಾಲೂಕಿನ ಹೊಕ್ರಾಣ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೊಕ್ರಾಣ ಹಾಗೂ ಬಾವಲಗಾಂವ್‌ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿಲ್ಲದ ಕಾರಣ ಗ್ರಾಮದ ಬಹುತೇಕ ಕುಟುಂಬಗಳು ಖಾಸಗಿ ಬೋರ್‌ವೆಲ್ ಮುಖಾಂತರ ಸ್ವಂತ ಹಣ ಕೊಟ್ಟು ಖರೀದಿಸುತ್ತಿದ್ದಾರೆʼ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ʼಈ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸಿ, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದುʼ ಎಂದು ಹೇಳಿದರು.

WhatsApp Image 2026 05 14 at 4.13.26 PM
ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.

₹135 ಕೋಟಿ ಬೆಳೆ ಹಾನಿ ಪರಿಹಾರ :

ʼಕಳೆದ ಹಂಗಾಮಿನಲ್ಲಿ ಅತಿವೃಷ್ಟಿ ಆಲಿಕಲ್ಲು ಮಳೆಯಿಂದ ರೈತರ ಬೆಳೆ ಹಾನಿಯಾಗಿದ್ದು ಅದಕ್ಕೆ ರಾಜ್ಯ ಸರ್ಕಾರದಿಂದ ₹100 ಕೋಟಿ ಹಣ ಈಗಾಗಲೇ ರೈತರ ಖಾತೆಗೆ ಜಮೆಯಾಗಿದೆ. ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಿದ ಹಿನ್ನೆಲೆ ಹೆಚ್ಚುವರಿ ಅನುದಾನ ಕೂಡ ಸರ್ಕಾರ ಮಂಜೂರು ಮಾಡಿದ್ದು, ಇನ್ನೂ ₹142 ಕೋಟಿ ಹೆಚ್ಚಿನ ಅನುದಾನ ಬರಬೇಕಾಗಿದೆ ಮುಂದಿನ 15-20 ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗಬಹುದುʼ ಎಂದು ಸಚಿವರು ತಿಳಿಸಿದರು.

₹250 ಕೋಟಿ ಬೆಳೆ ವಿಮೆ :

ಫಸಲ ಬಿಮಾ ಯೋಜನೆ ಆರಂಭದ ಪ್ರಥಮ ವರ್ಷದಲ್ಲಿ ಹೆಚ್ಚಿನ ಪರಿಹಾರ ಬಂದಿತು, ನಂತರದ ವರ್ಷಗಳಲ್ಲಿ ವಿಮೆ ಪಾವತಿಸಿದ ಬೆಳೆ ವಿಮೆ ಬಂದಿಲ್ಲ. ಬೆಲೆ ನಷ್ಟ ಆದರೂ ರೈತರಿಗೆ ಹಣ ಸಿಗುತ್ತಿರಲಿಲ್ಲ. ಈ ವರ್ಷ ₹250 ಕೋಟಿ ಬೆಳೆ ವಿಮೆ ಹಣ ಬಂದಿದೆ. ಅಧಿಕಾರಿಗಳ ಸಹಕಾರದಿಂದ ರೈತರಿಗೆ ಹೆಚ್ಚಿನ ಬೆಳೆ ಪರಿಹಾರವಾಗಿ ₹520 ಕೋಟಿವರೆಗೆ ಪರಿಹಾರ ಬಂದಿದೆ. ಹೀಗಾಗಿ ಎಲ್ಲಾ ಅಧಿಕಾರಿ, ಮಾಧ್ಯಮಗಳ ಸಹಕಾರ ಇದೆʼ ಎಂದು ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಶಾಶ್ವತ ಕುಡಿಯುವ ನೀರಿಗಾಗಿ ₹7 ಸಾವಿರ ಕೋಟಿ ಯೋಜನೆ :

ಬೀದರ್ ಹಾಗೂ ಕಲಬುರಗಿ ಜಿಲ್ಲೆಯ ಕೆಲ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಯಾದಗಿರಿ ಜಿಲ್ಲೆಯ ನಾರಾಯಣಪೂರ ಜಲಾಶಯದಿಂದ ನೀರು ಸರಬರಾಜು ಮಾಡಲು ₹7 ಸಾವಿರ ಕೋಟಿಯ ಯೋಜನೆ ಸಿದ್ದಪಡಿಸಲಾಗುತಿದ್ದು, ಇದರಿಂದ ಮುಂದಿನ 25 ವರ್ಷಗಳವರೆಗೆ ಕುಡಿಯುವ ನೀರಿನ ಸಮಸ್ಯೆಯೆ ಉದ್ಭವಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್ ಜಿಲ್ಲೆಯ 120 ಹಳ್ಳಿಗಳು ಹಾಗೂ ಕಲಬುರಗಿಯ 250 ಹಳ್ಳಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಸರ್ಕಾರದ ಮಟ್ಟದಲ್ಲಿ ಇದಕ್ಕೆ ಅನುಮೋದನೆ ದೊರೆತರೆ ಯೋಜನೆಯ ಕಾಮಗಾರಿ ಆರಂಭಿಸಲಾಗುವುದು ಎಂದ ಅವರು, ಈಗಾಗಲೇ ಭಾಲ್ಕಿ ತಾಲೂಕಿನ 120 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ನಡೆಯುತ್ತಿದ್ದು ಇದರಿಂದ 110 ರಿಂದ 120 ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಿದೆ ಎಂದು ಮಾಹಿತಿ ನೀಡಿದರು.

ʼಜಿಲ್ಲೆಯಲ್ಲಿ ಜೆಜೆಎಂ ವತಿಯಿಂದ ಕುಡಿಯುವ ನೀರಿನ ಕೆಲಸ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಪೈಪ್ ಲೈನ್ ಕಿತ್ತು ಹೋಗಿದೆ. ತಪಾಸಣೆ ಮಾಡಿ ತನಿಖೆ ಕೈಗೊಳ್ಳುತ್ತೇವೆ. ಕೆಲವೆಡೆ ಜೆಸ್ಕಾಂ ವಿದ್ಯುತ್ ಸಂಪರ್ಕ ನೀಡದಕ್ಕೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಕೇಂದ್ರ ಸರ್ಕಾರ ಜಲ ಜೀವನ ಮಿಷನ್ ಯೋಜನೆಗಾಗಿ ಇನ್ನೂ ₹20 ಸಾವಿರ ಕೋಟಿ ಬರಬೇಕಾಗಿದೆʼ ಎಂದರು.

ರೈತರ ಪ್ರತಿ ಟನ್ ಕಬ್ಬಿಗೆ 2,900 ಕೊಡಬೇಕು:

ರಾಜ್ಯ ಸರ್ಕಾರ ಘೋಷಿಸಿದಂತೆ ರೈತರ ಪ್ರತಿ ಟನ್ ಕಬ್ಬಿಗೆ ₹50 ಹಣ ರೈತರ ಖಾತೆಗೆ ಜಮೆ ಮಾಡಿದೆ. ಹೀಗಾಗಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಬಾಕಿ ಬಿಲ್ ಕೋಡಬೇಕು. ಜಿಲ್ಲೆಯ ಕಾರ್ಖಾನೆಗಳು ಶೇ 90ರಷ್ಟು ಕಬ್ಬಿನ ಹಣ ಪಾವತಿಸಿದ್ದಾರೆ, ಉಳಿದ ಹಣ ಪಾವತಿಸಬೇಕು. ರೈತರ ಕಬ್ಬಿ ಬಿಲ್ ಬಾಕಿ ಇಟ್ಟುಕೊಂಡ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೀಘ್ರದಲ್ಲೇ ವಿಮಾನಯಾನ ಸೇವೆ ಆರಂಭ:

ಈಗಾಗಲೇ ಸರ್ಕಾರ ಮಟ್ಟದಲ್ಲಿ ವಿಮಾನಯಾನ ಸೇವೆಗಾಗಿ ಅನುಮೋದನೆ ನೀಡಿದ್ದು ಇನ್ನೊಮ್ಮೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಯಾವ ದಿನಾಂಕದಿಂದ ಬುಕಿಂಗ್ ಆರಂಭಿಸುವ ಬಗ್ಗೆ ಮಾಹಿತಿ ನೀಡುತ್ತಾರೆ. ಇದಕ್ಕಾಗಿ 14.25 ಕೋಟಿ ಕೆಕೆಆರ್‌ಡಿಬಿ (ರಾಜ್ಯ ಸರ್ಕಾರ) ಭರಿಸಲಾಗುತ್ತಿದೆ. ಹೀಗಾಗಿ 15 -20 ದಿನದೊಳಗಾಗಿ ಬೀದರ್-ಬೆಂಗಳೂರು ವಿಮಾನಯಾನ ಸೇವೆ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ವಿಮಾನಯಾನ ಸೇವೆಯ ಅಗ್ರಿಮೆಂಟ್ 3 ವರ್ಷದ ಅವಧಿಯವರೆಗೆ ಮಾಡಿಕೊಳ್ಳುವ ಪ್ರಯತ್ನ ಮಾಡಲಾಗುವುದುʼ ಸಚಿವ ಖಂಡ್ರೆ ತಿಳಿಸಿದರು.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ನೆರಳಿನ ಪರದೆ ಅಳವಡಿಕೆ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ ಮಹಾನಗರ ಪಾಲಿಕೆ ಆಯುಕ್ತರಾದ ಮುಕುಲ್ ಜೈನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...