ಬೀದರ್‌ | ಮೊಳಕೇರಾ ಆಕಸ್ಮಿಕ ಸ್ಪೋಟಕ್ಕೆ ಕಾರಣವೇನು : ಎಸ್ಪಿ ಪ್ರದೀಪ ಗುಂಟಿ ಹೇಳಿದ್ದೇನು?

Date:

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಸ್ಪೋಟಕ್ಕೆ ಶೈನಿಂಗ್ ಕೆಮಿಕಲ್‌‌ ಕಾರಣ ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹೇಳಿದ್ದಾರೆ.

- Advertisement -

ಮೊಳಕೇರಾ ಗ್ರಾಮದಲ್ಲಿ ನಿಗೂಢವಾಗಿ ನಡೆದ ದುರ್ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೋಟದಲ್ಲಿ ಒಟ್ಟು 8 ಜನರಿಗೆ ಗಾಯಗೊಂಡಿದ್ದು, ಅವರಲ್ಲಿ 6 ಜನ ಪುಟ್ಟ ಮಕ್ಕಳಿದ್ದಾರೆ. ಇಬ್ಬರು ವಯಸ್ಕರಿದ್ದಾರೆ. ಗಾಯಗೊಂಡ 8 ಜನರಲ್ಲಿ 2 ಮಕ್ಕಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ನಾಲ್ಕು ಜನ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಗಾಯಗೊಂಡ ಉಳಿದಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ ಹಾಗೂ ಸೋಲಾಪುರಕ್ಕೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1004883981

ಘಟನೆ ವಿಷಯ ತಿಳಿದ ಬಳಿಕ ಸ್ಥಳಕ್ಕೆ ಪೊಲೀಸ್ ಹಾಗೂ ಫಾರೆನ್ಸಿಕ್ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮದಲ್ಲಿ ಕೆಲ ಮನೆ ಮಾಲೀಕರು ಪೇಂಟಿಂಗ್ ಶೈನಿಂಗ್‌ಗಾಗಿ ಫೈಬರ್ ಡೋಸ್ ಸಂಬಂಧಿತ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ಮನೆಗಳಲ್ಲಿ ಪೇಂಟ್ಸ್‌ ಹಾಗೂ ವಿವಿಧ ಕೆಮಿಕಲ್ಸ್ ಸಂಗ್ರಹಿಸಿದ್ದನ್ನು ಪತ್ತೆ ಹಚ್ಚಲಾಗಿದೆ. ಅವಧಿ ಮೀರಿದ ಕೆಮಿಕಲ್‌ಗಳನ್ನು ಸಂಗ್ರಹಿಸಿಟ್ಟ ಕಾರಣ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಫಾರೆನ್ಸಿಕ್ ತಂಡ ಶಂಕೆ ವ್ಯಕ್ತಪಡಿಸಿದೆʼ ಎಂದು ಹೇಳಿದರು.

ಕಳೆದ ಆರು ತಿಂಗಳಲ್ಲಿ ಐದಾರು ಸಲ ಈ ರೀತಿ ಆಕಸ್ಮಿಕ ಸ್ಪೋಟ ಸಂಭವಿಸಿದೆ. ಈ ಬಗ್ಗೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಮತ್ತೊಮ್ಮೆ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂಬುದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ ಶಿಲ್ಪಾ ಶರ್ಮಾ

ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಆಕಸ್ಮಿಕವಾಗಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಹೈದರಾಬಾದ್‌ನ ಮಲ್ಲರೆಡ್ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಬ್ಬಾರ್ ಎಂಬುವವರನ್ನು‌ ಶನಿವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.

WhatsApp Image 2026 01 31 at 6.04.45 PM
ಸ್ಪೋಟದಲ್ಲಿ ಗಾಯಗೊಂಡು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳನ್ನು ಡಿಸಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮೊಳಕೇರಾ ಗ್ರಾಮಕ್ಕೆ ನಾಳೆ ಸಚಿವ ಈಶ್ವರ ಖಂಡ್ರೆ ಭೇಟಿ

ಆಕಸ್ಮಿಕ ಸ್ಫೋಟದಿಂದ ಎಂಟು ಜನರು ಗಾಯಗೊಂಡಿರುವ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮಕ್ಕೆ ನಾಳೆ ಬೆಳಿಗ್ಗೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...