ಬೀದರ್‌ | ಕಾಡು ಹಂದಿ ದಾಳಿ: ಚಿಕಿತ್ಸೆ ಫಲಿಸದೆ ರೈತ ಸಾವು

Date:

ಕಾಡು ಹಂದಿ ದಾಳಿಯಿಂದ ಗಂಭೀರ ಗಾಯಗೊಂಡ ರೈತರೊಬ್ಬರು ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಭಾಲ್ಕಿ ತಾಲೂಕಿನ ಆನಂದವಾಡಿಯ ರೈತ ಚನ್ನಬಸಪ್ಪ ಶಿವಲಿಂಗಪ್ಪ ಭೂರೆ (65) ಮೃತರು. ರೈತ ಚನ್ನಬಸಪ್ಪ ಅವರು ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೃಷಿ ಚಟುವಟಿಕೆ ನಿಮಿತ್ತ ಹೊಲಕ್ಕೆ ತೆರಳಿದ ವೇಳೆ ದಾರಿ ಮಧ್ಯದಲ್ಲಿ ಕಾಡು ಹಂದಿ ದಿಢೀರ ದಾಳಿ ನಡೆಸಿ ತಲೆ, ಕುತ್ತಿಗೆ, ಹೊಟ್ಟೆ, ಕಾಲಿನ ಭಾಗಕ್ಕೆ ಕಚ್ಚಿದ್ದರಿಂದ ರಕ್ತ ತೀವ್ರ ಸ್ವರೂಪವಾಗಿ ಹೊರ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದೇ ವೇಳೆ ಇನ್ನೋರ್ವ ಮಹಿಳೆ ಸಂಪತಬಾಯಿ ಹೇಡೆ ಎಂಬುವರ ಮೇಲೆ ಕೂಡ ಕಾಡು ಹಂದಿ ದಾಳಿ ನಡೆಸಿದೆ.  ತಕ್ಷಣಕ್ಕೆ ಇಬ್ಬರನ್ನೂ ಗ್ರಾಮಸ್ಥರು ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಂಪತಬಾಯಿ ಹೇಡೆ ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ರೈತ ಚನ್ನಬಸಪ್ಪ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗಿದೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಭಾಲ್ಕಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಕ್ತ ಪರಿಹಾರಕ್ಕೆ ಮಾಜಿ ಶಾಸಕ ಪ್ರಕಾಶ ಖಂಡ್ರೆ ಆಗ್ರಹ

ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದ ರೈತ ಶ್ರೀ ಚನ್ನಬಸಪ್ಪ ಶಿವಲಿಂಗಪ್ಪ ಭೂರೆ ಅವರು ಕಾಡುಹಂದಿ ದಾಳಿಗೆ ಒಳಗಾಗಿ ಮೃತಪಟ್ಟಿರುವುದು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಘಟನೆಯಾಗಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಕಂಬನಿ ಮಿಡಿದಿದ್ದಾರೆ.

ರೈತ ಕುಟುಂಬದ ಆಧಾರಸ್ತಂಭವನ್ನೇ ಕಳೆದುಕೊಂಡಿದ್ದು, ಸರ್ಕಾರ ಕೂಡಲೇ ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಕುರಿತು ಮಾನವೀಯ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ಬರಪೀಡಿತ ಜಿಲ್ಲೆ ಘೋಷಿಸಿ : 4ನೇ ದಿನಕ್ಕೆ ಕಾಲಿಟ್ಟ ಧರಣಿ, ರಸ್ತೆ ಮೇಲೆ ಸ್ನಾನ ಮಾಡಿದ ರೈತರು!

ಅರಣ್ಯ ಇಲಾಖೆಯು ರೈತರ ಜೀವ ಹಾಗೂ ಬೆಳೆಗಳ ರಕ್ಷಣೆಗೆ ಕಾಡುಹಂದಿ ಮತ್ತು ನವಿಲುಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಹಾಗೂ ವೈಜ್ಞಾನಿಕ ಕ್ರಮಗಳನ್ನು ಕೈಗೊಂಡು, ಅಗತ್ಯವಿರುವ ಕಡೆ ಸೂಕ್ತ ಬೇಲಿ ಮತ್ತು ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...