ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೋಟಾ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ಅನಿತಾ (32) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಆರೋಪಿ ಮನೆಗೆ ನುಗ್ಗಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಈ ಕೃತ್ಯವನ್ನು ಸಂಬಂಧಿಕನಾದ ಕೈಲಾಸ್ ವೈಜಿನಾಥ್ ಎಂಬಾತ ಎಸಗಿರುವುದಾಗಿ ತಿಳಿದು ಬಂದಿದೆ.
ಘಟನೆ ಖಟಕಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.





