ಬೀದರ್‌ | ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಲಿ : ಶೈನಿ ಪ್ರದೀಪ್ ಗುಂಟಿ

Date:

ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಅಕ್ಕ ಪಡೆಯ ರಾಜ್ಯ ಸಲಹೆಗಾರರಾದ ಶೈನಿ ಪ್ರದೀಪ್ ಗುಂಟಿ ಸಲಹೆ ಮಾಡಿದರು.

- Advertisement -

ಬೀದರ್ ನಗರದ ನೌಬಾದ್‍ನ ಜ್ಞಾನ ಶಿವಯೋಗಾಶ್ರಮದಲ್ಲಿ ಶ್ರೀಶೈಲಂನ ಅಕ್ಕ ಮಹಾದೇವಿ ಚೈತನ್ಯ ಪೀಠ ಹಾಗೂ ಜ್ಞಾನ ಶಿವಯೋಗಾಶ್ರಮದ ಸಹಯೋಗದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಅಕ್ಕಮಹಾದೇವಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಮಹಿಳೆಯರು ಪರಸ್ಪರರ ಬೆಳವಣಿಗೆಗೆ ಸಹಕರಿಸಬೇಕು. ಸಾಧನೆಯತ್ತ ಹೆಜ್ಜೆ ಇಡಲು ಪ್ರೋತ್ಸಾಹಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಅಕ್ಕ ಮಹಾದೇವಿ ಸ್ತ್ರೀಯರ ಆಧ್ಯಾತ್ಮ ಸ್ವಾತಂತ್ರ್ಯದ ರೂವಾರಿಯಾಗಿದ್ದಾರೆ. ಮಾತೆ ಕರುಣಾದೇವಿಯವರ ಪ್ರತಿರೂಪವಾಗಿದ್ದು, ಮಹಿಳೆಯರ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಅಕ್ಕ ಪಡೆಯು ರಾಜ್ಯದಲ್ಲಿ ಅಕ್ಕ ಮಹಾದೇವಿ ಅವರ ಕನಸು ಸಾಕಾರಗೊಳಿಸುವ ಹಾಗೂ ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ” ಎಂದು ತಿಳಿಸಿದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಮಾತೆ ಕರುಣಾದೇವಿ ಅವರು ನಿರಂತರ ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಅವರು ಬೀದರ್ ಜಿಲ್ಲೆಯವರೇ ಆಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ” ಎಂದು ಹೇಳಿದರು.

ವೈದ್ಯೆ ಡಾ.ಪ್ರತಿಕ್ಷಾ ಸ್ವಾಮಿ, ಉಪನ್ಯಾಸಕಿ ರೇಣುಕಾದೇವಿ ಮಳ್ಳಿ ಸ್ವಾಮಿ, ಅಕ್ಕ ಪಡೆಯ ತಂಡದ ನಾಯಕಿ ಸಂಗೀತಾ ಪಾಟೀಲ, ಆರತಿ ಮಹಿಳಾ ಸಮಿತಿಯ ಅಧ್ಯಕ್ಷೆ ಕಾವೇರಿ ಸ್ವಾಮಿ, ಸಖಿ ಕೇಂದ್ರದ ಆಡಳಿತಾಧಿಕಾರಿ ಸಂಗೀತ ಪಾಟೀಲ, ವಿವಾಹ ಪೂರ್ವ ಸಮಾಲೋಚನಾ ಕೇಂದ್ರದ ಚೆನ್ನಾಂಬಿಕಾ, ಜ್ಯೂನಿಯರ್ ಮಿಸ್ ಇಂಡಿಯಾದಲ್ಲಿ ದ್ವಿತೀಯ ಸ್ಥಾನ ಪಡೆದ ಪೂರ್ವಿ ಎಸ್. ಬಿರಾದಾರ, ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ಮಾಜಿ ಸದಸ್ಯೆ ಶೋಭಾವತಿ ಫುಲಾರೆ, ಪತ್ರಕರ್ತೆ ಸುಷ್ಮಿತಾ ಮೋರೆ ಸೇರಿ ವಿವಿಧ ಕ್ಷೇತ್ರಗಳ ಸಾಧಕಿಯನ್ನು ಸನ್ಮಾನಿಸಲಾಯಿತು.

ದಿಶಾ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ ಮಾತನಾಡಿ, “ಮಾತೆ ಕರುಣಾದೇವಿ ಅವರ ಅಪೇಕ್ಷೆಯಂತೆ ಸರ್ಕಾರದ ವತಿಯಿಂದಲೇ ಅಕ್ಕ ಮಹಾದೇವಿ ಜಯಂತಿ ಆಚರಿಸುವಂತೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅವರು ಮೂವರು ಸಚಿವರು ಹಾಗೂ 14 ಶಾಸಕರ ಸಹಿಯುಳ್ಳ ಮನವಿಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ. ಈ ಕುರಿತು ಶೀಘ್ರ ಘೋಷಣೆಯಾಗುವ ನಿರೀಕ್ಷೆ ಇದೆ” ಎಂದು ಹೇಳಿದರು.

ಜ್ಞಾನ ಶಿವಯೋಗಾಶ್ರಮದ ಡಾ.ರಾಜಶೇಖರ ಶಿವಾಚಾರ್ಯ ಅವರು ಮಾತನಾಡಿ, “ವೈರಾಗ್ಯ ನಿಧಿ ಅಕ್ಕಮಹಾದೇವಿ ಅವರು ಆಧ್ಯಾತ್ಮದ ಮೇರು ಪರ್ವತ ಏರಿದ ಶರಣೆ. ರಾಜ್ಯ ಸರ್ಕಾರ ಜಾಗತಿಕ ಮಟ್ಟದಲ್ಲಿ ಅವರ ವಚನ, ತತ್ವಗಳ ಪ್ರಚಾರ ಹಾಗೂ ಪ್ರಸಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಾವೆಲ್ಲರೂ ಅಕ್ಕಮಹಾದೇವಿ ಅವರ ತತ್ವಚಿಂತನೆಗಳನ್ನು ಗೌರವಿಸಬೇಕು” ಎಂದರು.

Noubad Gnyan Shivyogashram 1

ಕಲಾವಿದ ಮಾರುತಿ ಚಾಂಬೋಳೆ ವಚನ ಸಂಗೀತ ನಡೆಸಿಕೊಟ್ಟರು. ಪೂರ್ವಿಕಾ ಭರತನಾಟ್ಯ ಪ್ರದರ್ಶಿಸಿದರು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಪುನಾರಂಭ, ರೈತರ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

ಮೇರಾ ಯುವ ಭಾರತ್‍ನ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಆಮ್ ಆದ್ಮಿ ಪಕ್ಷದ ಜಿಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಫುಲಾರಿ ಹಾಗೂ ಪ್ರಮುಖರಾದ ವರದಯ್ಯ ಸ್ವಾಮಿ, ಓಂಪ್ರಕಾಶ್ ರೊಟ್ಟೆ, ಮಹೇಶ ಪಾಟೀಲ, ಕಂಟೆಪ್ಪ ಭಂಗೂರೆ, ಕುಶಾಲರಾವ್ ಗೌರಶೆಟ್ಟಿ, ಡಾ.ಸುಭಾಷ್ ಪಾಟೀಲ, ಡಾ. ಓಂಕಾರ ಸ್ವಾಮಿ, ಶಿವಕುಮಾರ ಕೊಳಾರ, ಗಂಗಾಧರ ಸ್ವಾಮಿ, ಜಗದೀಶ್ವರ್ ಬಿರಾದಾರ, ಶಿವಶಂಕರ ಬೆಳಮಗಿ, ಅಮರೇಶ ಕಮಠಾಣೆ, ಶ್ರೀಕಾಂತ ಹೊನ್ನಿಕೇರಿ, ಶಾಂತಮ್ಮ ಸ್ವಾಮಿ, ಮಹಾಂತೇಶ್ ಬಿರಾದಾರ ಮತ್ತಿತರರು ಇದ್ದರು. ರೇಣುಕಾದೇವಿ ಮಳ್ಳಿ ನಿರೂಪಿಸಿದರು. ಪ್ರವೀಣ್ ಸ್ವಾಮಿ ಸ್ವಾಗತಿಸಿದರು. ಬಸವರಾಜ ಹಳ್ಳಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...