ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

Date:

ಮಾಧ್ಯಮಗಳಲ್ಲಿ ಇನ್ನಷ್ಟು ಮಹಿಳೆಯರು ತಮ್ಮನ್ನು ತಾವು ತೊಡಗಿಕೊಳ್ಳಬೇಕು. ಎಲ್ಲ ಕ್ಷೇತ್ರಗಳಲ್ಲಿ ತೋರಿದ ಅಭಿಲಾಷೆ ಈ ಕ್ಷೇತ್ರದಲ್ಲೂ ತೋರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

- Advertisement -

ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ್ ಜಿಲ್ಲಾ ಘಟಕದಿಂದ ಆಯೋಜಿಸಲು ಉದ್ದೇಶಿಸಿರುವ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ʼಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳನ್ನು ಸರಿ ದಾರಿಗೆ ತರುವ, ಅವುಗಳ ಯೋಜನೆ ಹಾಗೂ ಕಾರ್ಯಶೈಲಿ ಬಿತ್ತರಿಸುವ ಕಾರ್ಯ ಮಾಧ್ಯಮಗಳು ಮಾಡುತ್ತವೆ. ಇಂದು ನನ್ನಂತಹ ಒಬ್ಬ ಪರಿಪೂರ್ಣ ರಾಜಕಾರಣಿಗಳನ್ನು ತಯ್ಯಾರು ಮಾಡುವ ಕಾರ್ಯ ಮಾಧ್ಯಮಗಳು ಮಾಡಿವೆ. ನಿಸ್ವಾರ್ಥಿ ರಾಜಕಾರಣಿಗಳು ಸಮಾಜದ ಮುಖ್ಯವಾಹಿನಿಗೆ ಬರಲು ಮಾಧ್ಯಮಗಳ ಪಾತ್ರ ಬಹಳಷ್ಟಿದೆʼ ಎಂದರು.

IMG 20260223 WA0013

ʼಬಸವಣ್ಣನವರ ಪರಿಕಲ್ಪನೆ ಎತ್ತಿ ಹಿಡಿದವರು ಬೀದರ್ ಜನರು ಮಾತ್ರ. ಇಲ್ಲಿನ ಜನರ ಮುಗ್ದ ಸ್ವಭಾವ, ಸಹಕಾರ, ಮನೋಭಾವ ನಾಡಿಗೆ ಮಾದರಿಯಾಗಿದೆ. ಬಸವಣ್ಣನವರ ಕರ್ಮಭೂಮಿ ಬೀದರ್‌ನಲ್ಲಿ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸುತ್ತಿರುವುದು ಸಂತೋಷ ತಂದಿದೆ. ಹೊರ ದೇಶಗಳಿಂದ ಪತ್ರಕರ್ತರನ್ನು ಸಮ್ಮೇಳನಕ್ಕೆ ಅಹ್ವಾನಿಸಲು ಮುಂದಾಗಿರುವುದು ಸ್ವಾಗತಾರ್ಹʼ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸಿ ಮಾತನಾಡಿ, ʼಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ ʼಚಿಂತನ-ಮಂಥನʼ ವೇದಿಕೆಯಾಗಬೇಕುʼ ಎಂದರು.

ʼಡೀಪ್‌ಫೇಕ್‌ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು ನ್ಯೂಸ್‌ರೂಮ್‌ಗಳು ಕಲಿಸಬೇಕಾಗಿದೆ. ಮಾಧ್ಯಮ ಲೋಕದ ಕಾರ್ಪೊರೇಟ್‌ಕರಣ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ ಎಐ ಮತ್ತು ಆಧುನಿಕ ತಂತ್ರಜ್ಞಾನವೂ ವಿನೂತನ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ. ನೈತಿಕ, ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆಯಾಗಲಿ. ಈ ಬಾರಿಯ ಬಜೆಜ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಉತ್ತಮ್ಮ ಅನುಕೂಲಗಳು ಆಗುವ ಭರವಸೆ ಇದೆʼ ಎಂದು ಅಭಿಪ್ರಾಯಪಟ್ಟರು.

IMG 20260223 WA0019
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ ಪ್ರಭಾಕರ್ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಾತನಾಡಿದರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ ಪ್ರಾಸ್ತಾವಿಕ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ನೀರು-ಮೇವು ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ : ಡಿಸಿ ಶಿಲ್ಪಾ ಶರ್ಮಾ

ರಾಜ್ಯ ಸಂಘದ ಉಪಾಧ್ಯಕ್ಷರಾದ ಹೆಚ್.ಬು ಮದನಗೌಡ, ಮತ್ತಿಕೆರೆ ಜಯರಾಮ, ಅಜ್ಜಮಾಡ ರಮೇಶ ಕುಟ್ಟಪ್ಪ, ಕಾರ್ಯದರ್ಶಿಗಳಾದ ಪುಂಢಲಿಕ ಬಾಳೊಜಿ, ಸೋಮಶೇಖರ ಕೆರೆಗುಡು, ಖಜಾಂಚಿ ವಾಸುದೇವ ಹೊಳ್ಳ, ಮಾಜಿ ಉಪಾಧ್ಯಕ್ಷ  ವೇದಿಕೆಯಲ್ಲಿದ್ದರು. ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ್, ಅಡಾಕ ಸಮಿತಿ ಸದಸ್ಯರಾದ ಶಿವಕುಮಾರ ಸ್ವಾಮಿ, ಅಪ್ಪಾರಾವ ಸೌದಿ, ಮಾಜಿ ಜಿಲ್ಲಾಧ್ಯಕ್ಷರಾದ ಗಂಧರ್ವ ಸೇನಾ, ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಕಾಮಶೆಟ್ಟಿ, ಅಶೋಕಕುಮಾರ ಕರಂಜಿ, ಡಿ.ಕೆ.ಗಣಪತಿ, ದೀಪಕ ವಾಲಿ, ಡಾ.ರಜನೀಶ ವಾಲಿ, ಬಾಬುವಾಲಿ, ಪ್ರಥ್ವಿರಾಜ.ಎಸ್ ಸೇರಿದಂತೆ ಜಿಲ್ಲಾ ಪತ್ರಕರ್ತ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...