ಬೀದರ್‌ | ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಬಳಕೆ : ಭೀಮಣ್ಣ ಮೇಟಿ

Date:

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಾಮಾಣಿಕ ಬದ್ಧತೆ ತೋರಿಸದೆ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಮೋಸತನ ಸಂಸತ್ತಿನಲ್ಲಿ ಸೋತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಡಾ.ಭೀಮಣ್ಣ ಮೇಟಿ ಆರೋಪಿಸಿದರು.

- Advertisement -

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಸಂವಿಧಾನ ತಿದ್ದುಪಡಿ ಮಸೂದೆ ಸೋಲು ಮಹಿಳಾ ಮೀಸಲಾತಿಯ ಸೋಲಾಗಿರದೆ, ರಾಜಕೀಯ ವಂಚನೆಯ ಸೋಲುʼ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆಗಳನ್ನು ಸರ್ಕಾರ ಗುಪ್ತವಾಗಿ ಜೋಡಿಸಲು ಪ್ರಯತ್ನಿಸಿದೆ. 2011ರ ಜನಗಣತಿ ಆಧಾರಿತ ಕ್ಷೇತ್ರ ಪುನರ್ವಿಂಗಡಣೆ ದಕ್ಷಿಣ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪ್ರತಿನಿಧಿತ್ವಕ್ಕೆ ಹಾನಿ ಉಂಟು ಮಾಡುವ ಸಾಧ್ಯತೆ ಇದೆʼ ಎಂದು ಹೇಳಿದರು.

ʼಈ ಕುರಿತು ಮುಖ್ಯಮಂತ್ರಿಗಳು, ನಾಗರಿಕ ಸಮಾಜ ಸಂಸ್ಥೆಗಳು ಹಾಗೂ ಮಹಿಳಾ ಸಂಘಟನೆಗಳು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದರೂ, ಕೇಂದ್ರ ಸರ್ಕಾರ ಯಾವುದೇ ಸಮಾಲೋಚನೆ ನಡೆಸಿಲ್ಲ. ಕಾಂಗ್ರೆಸ್ ‌2023ರಿಂದಲೇ ಮಹಿಳಾ ಮೀಸಲಾತಿ ಕ್ಷೇತ್ರ ಪುನರ್ವಿಂಗಡಣೆಗೆ ಲಿಂಕ್ ಮಾಡದೆ ತಕ್ಷಣ ಜಾರಿಗೆ ತರಬೇಕು ಎಂಬ ನಿಲುವು ಹೊಂದಿದೆ. ಆದರೆ, ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿಯನ್ನು ಚುನಾವಣಾ ರಾಜಕೀಯದ ಭಾಗವನ್ನಾಗಿ ಮಾಡಿದೆ’ ಎಂದು ದೂರಿದರು.

‘2023ರಲ್ಲಿ ಸಂಸತ್ತಿನಲ್ಲಿ ಅಂಗೀಕೃತವಾದ ನಾರಿ ಶಕ್ತಿ ವಂದನ ಅಧಿನಿಯಮವನ್ನು ಸರ್ಕಾರವು 30 ತಿಂಗಳ ಬಳಿಕವೇ ಜಾರಿಗೆ ತಂದಿರುವುದು ಸರ್ಕಾರದ ನೈಜ ಉದ್ದೇಶವನ್ನು ಪ್ರಶ್ನಿಸುವಂತಿದೆ. ಇದು ಐತಿಹಾಸಿಕ ಕಾನೂನು ಎಂದಾದರೆ ಅದರ ಅನುಷ್ಠಾನಕ್ಕೆ ಎರಡೂವರೆ ವರ್ಷ ತಡ ಏಕೆ’ ಎಂದು ಪ್ರಶ್ನಿಸಿದರು.

ʼಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಐತಿಹಾಸಿಕ ಹೆಜ್ಜೆ ಎಂದು ಹೊಗಳಿದ್ದರು. ಆದರೆ, ಈಗ ಅದನ್ನು ಕ್ಷೇತ್ರ ಪುನರ್ವಿಂಗಡಣೆಯೊAದಿಗೆ ಜೋಡಿಸುವ ಮೂಲಕ ಮಹಿಳಾ ಸಬಲೀಕರಣದ ಮೂಲ ಉದ್ದೇಶವನ್ನೇ ದುರ್ಬಲಗೊಳಿಸಲಾಗಿದೆʼ ಎಂದು ಆರೋಪಿಸಿದರು.

ʼಮಣಿಪುರ ಹಿಂಸಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ, ಏರಿಕೆಯಾಗುತ್ತಿರುವ ಆಹಾರ ಮತ್ತು ಎಲ್‌ಪಿಜಿ ಬೆಲೆಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳು ಸೇರಿದಂತೆ ಮಹಿಳೆಯರ ನೈಜ ಪ್ರಶ್ನೆಗಳ ಬಗ್ಗೆ ಕೇಂದ್ರ ಸರ್ಕಾರ ಮೌನ ವಹಿಸಿದೆ. ಮಹಿಳಾ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಆತಂಕವಿದೆ, ವಿವಾಹದ ನಂತರ ಸ್ಥಳಾಂತರವಾಗುವ ಮಹಿಳೆಯರ ಮತದಾನದ ಹಕ್ಕು ಕಸಿದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆʼ ಎಂದು ಹೇಳಿದರು.

ʼಉನ್ನಾವೋ, ಹತ್ರಾಸ್ ಹಾಗೂ ಬಿಲ್ಕಿಸ್ ಬಾನು ಪ್ರಕರಣಗಳನ್ನು ಉಲ್ಲೇಖಿಸಿದ ಅವರು, “ಮಹಿಳಾ ಸುರಕ್ಷತೆ ಮತ್ತು ನ್ಯಾಯದ ಬಗ್ಗೆ ಬಿಜೆಪಿ ಸರ್ಕಾರದ ನಿಲುವು ದ್ವಂದ್ವಾತ್ಮಕವಾಗಿದೆ. ಕೇಂದ್ರ ಸರ್ಕಾರಕ್ಕೆ ಮಹಿಳಾ ಮೀಸಲಾತಿಯ ಬಗ್ಗೆ ನಿಜವಾದ ಬದ್ಧತೆ ಇದ್ದಿದ್ದರೆ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳಿಂದ ಬೇರ್ಪಡಿಸಿ ಸ್ವತಂತ್ರವಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಬೇಕಾಗಿತ್ತು” ಎಂದು ಮೇಟಿ ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : ಬಾರದ ಪ್ರತಿಕ್ರಿಯೆ; ಮುಂದುವರೆದ ಏಕಾಂಗಿ ಉಪವಾಸ ಸತ್ಯಾಗ್ರಹ

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೊಡೆ, ಪ್ರಚಾರ ಸಮಿತಿಯ  ಬ್ಲಾಕ್ ಅಧ್ಯಕ್ಷರುಗಳಾದ ನರಸಣ್ಣ ಯಾಕತಪುರ, ಬಸವರಾಜ ಭುಯ್ಯಾ, ಮೊಹಮ್ಮದ್ ವಾಜಿದ್, ಭದ್ರಯ್ಯ ಸ್ವಾಮಿ, ಮಂಜುನಾಥ ರೆಡ್ಡಿ, ತುಕಾರಾಮ ಕರಾಟೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...