ಬೀದರ್‌ | ಕಾರ್ಮಿಕರೊಂದಿಗೆ ವಿಶ್ವ ಕಾರ್ಮಿಕ ದಿನ ಆಚರಣೆ

Date:

ಬೀದರ್‌ ನಗರದ ಗುಂಪಾ ಸಮೀಪದ ಕಾರ್ಮಿಕರ ತಂಗುದಾಣದಲ್ಲಿ ಆದಿತ್ಯ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ ವಿಶ್ವ ಕಾರ್ಮಿಕ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಸಾರ್ವಜನಿಕ ಗ್ರಂಥಾಲಯದ ನಿವೃತ್ತ ಉಪನಿರ್ದೇಶಕ ಡಿ.ಎಚ್ ಕೇಸರಿ ಮಾತನಾಡಿ, ʼಕಾರ್ಮಿಕರ ಪರಿಶ್ರಮವು ಸಮಾಜದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕಾರ್ಮಿಕರ ಆಸೆಗಳು, ಅವರ ಜೀವನದ ಸಂಕಷ್ಟಗಳು ಹಾಗೂ ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳ ಬಗ್ಗೆ ವಿವರವಾಗಿ ಚರ್ಚಿಸಿ, ಅವರಿಗೆ ಅಗತ್ಯವಾದ ನೆರವು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಿವೃತ್ತ ಪ್ರಾಚಾರ್ಯರೂ ಆದ ಆದಿತ್ಯ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ದೇವಿದಾಸ ತುಮಕುಂಟೆ ಮಾತನಾಡಿ, ʼಕಾರ್ಮಿಕ ವರ್ಗ ನಿಷ್ಠೆಯಿಂದ ದುಡಿಯುತ್ತದೆ. ಇಂದಿಗೂ ಅವರ ಸಿಗಬೇಕಾದ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ. ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಭದ್ರತೆ ಹಾಗೂ ಹಕ್ಕುಗಳ, ಯೋಜನೆಗಳನ್ನು ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಮಿಕರು ಕೆಲಸ ಸಮಯದಲ್ಲಿ ಆಗುವ ತೊಂದರೆಗಳ ಬಗ್ಗೆ ತಿಳಿದುಕೊಳ್ಳಲಾಯಿತು. ಎಲ್ಲಾ ಕಾರ್ಮಿಕರಿಗೆ ಉಪಹಾರ ವಿತರಣೆ ಮಾಡಲಾಯಿತು.

ಇದನ್ನೂ ಓದಿ : ಭಾಲ್ಕಿ | ಜ್ಞಾನ, ಕರುಣೆ, ವಿವೇಕದ ಸಾಕಾರಮೂರ್ತಿ ಬುದ್ಧ : ಗುರುಬಸವ ಪಟ್ಟದ್ದೇವರು

ಈ ಸಂದರ್ಭದಲ್ಲಿ ಪ್ರಮುಖರಾದ ಮಾರುತಿ ವಾಗಮಾರೆ, ವಾಮನರಾವ್, ಅನಿತಾ, ತುಳಸಿರಾಮ, ತ್ರಿವೇಣಿ, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...