ಬೀದರ್‌ | ವಿಶ್ವ ತಂಬಾಕು ನಿಷೇಧ ದಿನ : ಜಾಗೃತಿ ಕಾರ್ಯಕ್ರಮ

Date:

ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ಬೀದರ್ ನಗರದ ಬರೀದ್ ಶಾಹಿ ಉದ್ಯಾನದಲ್ಲಿ ಯೋಗ ಸಾಧಕರು ಹಾಗೂ ಹಿರಿಯ ನಾಗರಿಕರು ಸಿಗರೇಟ್ ದಹಿಸುವ ಮೂಲಕ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

- Advertisement -

ಸಮಾಜ ಚಿಂತಕ ವೀರಭದ್ರಪ್ಪ ಉಪ್ಪಿನ್ ಮಾತನಾಡಿ, “ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ, ಗುಟ್ಕಾ ಮುಂತಾದವುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಅವುಗಳ ಉತ್ಪಾದನೆಯನ್ನೇ ನಿಷೇಧಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ದೇಶದಲ್ಲಿ ಸುಮಾರು 50 ಕೋಟಿಯಷ್ಟು ಜನರು ಸಿಗರೇಟ್ ಹಾಗೂ ಗುಟ್ಕಾ ಸೇವನೆಯ ದುಶ್ಚಟಕ್ಕೆ ಒಳಗಾಗಿದ್ದಾರೆ. ವಿವಿಧ ಜಾಗೃತಿ ಅಭಿಯಾನಗಳ ಪರಿಣಾಮ ಕೇವಲ ಶೇ.6 ರಷ್ಟು ಜನರು ಮಾತ್ರ ಈ ದುಶ್ಚಟಗಳಿಂದ ದೂರವಾಗಲು ಸಾಧ್ಯವಾಗಿದೆ. ಇದು ಸಾಕಾಗುವುದಿಲ್ಲ. ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಿ ತಂಬಾಕು ಉತ್ಪನ್ನಗಳ ಉತ್ಪಾದನೆ ಸ್ಥಗಿತಗೊಳಿಸಿದರೆ ಜನರು ದುಶ್ಚಟಗಳಿಂದ ಮುಕ್ತಿ ಪಡೆದು ಆರೋಗ್ಯವಂತರಾಗಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ನಿವೃತ್ತ ಮುಖ್ಯೋಪಾಧ್ಯಾಯ ನಿಜಲಿಂಗಪ್ಪ ತಗಾರೆ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಸಿಗರೇಟ್ ಹಾಗೂ ಗುಟ್ಕಾ ಸೇವನೆಯ ಚಟ ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲ ವಯೋಮಾನದವರಲ್ಲೂ ವ್ಯಾಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸಿಗರೇಟ್ ದಹಿಸಿ ತಂಬಾಕು ವಿರೋಧಿ ಸಂದೇಶ ಸಾರಲಾಯಿತು. ಯೋಗ ಮೇಲ್ವಿಚಾರಕ ಗಂಗಪ್ಪ ಸಾವಳೆ ಅವರು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಪ್ರತಿಜ್ಞೆಯನ್ನು ಎಲ್ಲರಿಗೂ ಬೋಧಿಸಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಜ್ಞಾನೇಶ್ವರ್ ಪಾಟೀಲ, ಈಶ್ವರ ಕನೆರಿ, ವಸಂತ್ ದೊಡಮನಿ, ಗೋಪಾಲ ರೆಡ್ಡಿ, ವೈಜಿನಾಥ್ ನೌಬಾದ ಸೇರಿದಂತೆ ಅನೇಕ ಯೋಗ ಸಾಧಕರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ರೈತ ಮಲ್ಲಿಕಾರ್ಜುನ ಪಾಟೀಲ ಸ್ವಾಗತಿಸಿದರು. ಅಶೋಕ ಶೀಲವಂತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...