ವಿಶ್ವ ಛಾಯಾಗ್ರಹಣ ದಿನ ಪ್ರಯುಕ್ತ ಬೆಂಗಳೂರಿನ ಫೋಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು ವತಿಯಿಂದ ಹಿರಿಯ ಛಾಯಾಗ್ರಾಹಕ ಹಾಗೂ ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರನ್ನು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಮೂಲ್ಯ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ಗೋಪಿಚಂದ್ ತಾಂದಳೆ ಸೇರಿದಂತೆ ಇತರೆ ಛಾಯಾಗ್ರಹಕರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಅತಿಥಿಗಳು ಮಾತನಾಡಿ, “ಗೋಪಿಚಂದ್ ತಾಂದಳೆ ಅವರು ಸುಮಾರು 25 ವರ್ಷಗಳಿಂದ ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿರುವ ಅವರು, ಬೀದರ್ ಜಿಲ್ಲೆಯ ಪ್ರಮುಖ ಘಟನೆಗಳು, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಮಹತ್ವದ ವಿಷಯಗಳನ್ನು ತಮ್ಮ ಕ್ಯಾಮೆರಾ ಮೂಲಕ ದಾಖಲಿಸುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ನಾಳೆ ಪ್ರತಿಭಟನೆ
ಈ ಸಂದರ್ಭದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ, ಫೋಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು ಅಧ್ಯಕ್ಷ ಮೋಹನ್ ಕುಮಾರ್ ಬಿ.ಎನ್., ಪತ್ರಕರ್ತ ಕೆ.ವಿ. ಪ್ರಭಾಕರ್ ಸೇರಿದಂತೆ ಫೋಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರಿನ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.




