ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

Date:

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಹೇಳಿದರು.

- Advertisement -

ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಬೀದರ್ ಇವರ ಸಹಯೋಗದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ‘ಯುವ ಸೌರಭ’ ಯುವಜನರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...
WhatsApp Image 2026 10 10 at 7.46.08 PM 3
ಜಾಹೀರಾತು

“ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳು ತಮ್ಮಲ್ಲಿರುವ ಕೌಶಲ್ಯ, ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳು ಸದುಪಯೋಗ ಮಾಡಿಕೊಂಡು ಪ್ರತಿಭೆಯನ್ನು ಹೊರಹಾಕಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ನಾಡಿನ ಶ್ರೀಮಂತ ಸಂಸ್ಸೃತಿಯನ್ನು ಇಂದಿನ ಯುವ ಜನಾಂಗಕ್ಕೆ ತಲುಪಿಸುವ ಕಾರ್ಯ ಮಾಡಬೇಕು” ಎಂದು ಹೇಳಿದರು.

ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಬೀದರ್ ಪ್ರಾದೇಶಿಕ ಕೇಂದ್ರದ ಡೀನ್ ಹಾಗೂ ನಿರ್ದೇಶಕ ಡಾ. ಆರ್.ವಿ. ಗಂಗಶೆಟ್ಟಿ ಮಾತನಾಡಿ, “ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ವಿಶೇಷ ಕೌಶಲ್ಯ ಅಡಗಿರುತ್ತದೆ. ಅದನ್ನು ಗುರುತಿಸಿಕೊಂಡು ಸೂಕ್ತ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಪ್ರದರ್ಶಿಸಿ ಇತರರಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಿದಾಸ್ ನಿರೂಪಿಸಿ, ವಂದಿಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ.ಚಂದ್ರಕಾಂತ ಗಂಗಶೆಟ್ಟಿ ಮಾತನಾಡಿದರು.

WhatsApp Image 2026 10 10 at 6.59.31 PM 1
ಜಾಹೀರಾತು

ಕಾರ್ಯಕ್ರಮದ ಬಳಿಕ ನಡೆದ ಸಾಂಸ್ಕೃತಿಕ ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಮಾನಸಾ ಪಾಂಚಾಳ ಮತ್ತು ತಂಡ (ಬೀದರ್) ರಕ್ಷಿತಾ ಮತ್ತು ತಂಡ (ಭಾಲ್ಕಿ) ಸುಗಮ ಸಂಗೀತ ಪ್ರಸ್ತುತಪಡಿಸಿದರು. ಶ್ರೇಯಾ ಮತ್ತು ತಂಡ (ಬೀದರ್) ತರುಣ ಮತ್ತು ತಂಡ (ಔರಾದ) ಮೇಘಾ ಮತ್ತು ತಂಡ (ಚಿಟಗುಪ್ಪ) ಸಮೂಹ ನೃತ್ಯ ಪ್ರದರ್ಶಿಸಿದರು.

WhatsApp Image 2026 10 13 at 5.23.10 PM

ಅಂಬಿಕಾ ಮತ್ತು ತಂಡ (ಮನ್ನಳ್ಳಿ) ಕೋಲಾಟ ಪ್ರದರ್ಶಿಸಿದರೆ, ನಿಷ್ಕಾ ಮತ್ತು ತಂಡ (ಬೀದರ್) ಪೂಜಾ ಕುಣಿತದ ಮೂಲಕ ಗಮನ ಸೆಳೆದರು. ಸ್ನೇಹಾ ಮತ್ತು ತಂಡ (ಬೀದರ್) ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ನೀಡಿದ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ ಕಣ್ಮನ ಸೆಳೆದವು.

ಇದನ್ನೂ ಓದಿ : ಬೀದರ್ | ಅಲಿಯಂಬರ್‌ ಬಳಿ ಸೇತುವೆ ಕುಸಿತ: ಸಂಚಾರ ಸ್ಥಗಿತ

ಕಾರ್ಯಕ್ರಮದಲ್ಲಿ ಸ್ವಾಮಿ ನರೇಂದ್ರ ಪಿಯು ಕಾಲೇಜಿನ ನಿರ್ದೇಶಕಿ ಕಲ್ಪನಾ, ಸದ್ಗುರು ಸಿದ್ದಾರೂಢ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ನಾಗಪ್ಪ ಜಾಣಕನೋರ್, ಹಿರಿಯ ಜನಪದ ಕಲಾವಿದರಾದ ಶಂಭುಲಿಂಗ ವಾಲ್ದೊಡ್ಡಿ, ಶಂಕರ ಚೊಂಡಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು...

ದೆಹಲಿ ಸಭೆಯಲ್ಲೂ ಸಿಗದ ಸ್ಪಂದನೆ: ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ...