ಬೀದರ ನಗರದ ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಝುಡಿಯೊ ಮಾಲ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮಾಲ್ನ ಮ್ಯಾನೇಜರ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ರಾಂಪೂರೆ ಕಾಲೋನಿಯ ಲಕ್ಷ್ಮೀಕಾಂತ (22) ಆತ್ಮಹತ್ಯೆಗೆ ಶರಣಾದ ಯುವಕ. ಲಕ್ಷ್ಮೀಕಾಂತ ಕಳೆದ ಮೂರು ತಿಂಗಳಿಂದ ನಗರದ ಬೊಮ್ಮಗೊಂಡೇಶ್ವರ ಸರ್ಕಲ್ ಸಮೀಪದ ಝುಡಿಯೊ ಮಾಲ್ನಲ್ಲಿ ಕ್ಯಾಷಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಕಳೆದ ಕೆಲವು ದಿನಗಳಿಂದ ಮಳಿಗೆಯ ಮ್ಯಾನೇಜರ್ ಕಿಶೋರ ಎಂಬಾತ ಕಂಪನಿಯ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಮಾಡಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದನೆಂದು ಕುಟುಂಬದವರು ಆರೋಪಿಸಿದ್ದಾರೆ.
ಕಿರುಕುಳದಿಂದ ಯುವಕ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದನು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ಪೋಷಕರು ಮನೆಗೆ ಬಂದ ಬಳಿಕ ಯುವಕ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಗಾಂಧಿ ಗಂಜ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮೃತ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕಲ್ಯಾಣ ಕರ್ನಾಟಕಕ್ಕೆ 2 ಡಿಸಿಎಂ ಸ್ಥಾನ ನೀಡಲಿ : ವಿನಯಕುಮಾರ ಮಾಳಗೆ ಆಗ್ರಹ




