ಬೀದರ್‌ | ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಢಿಕ್ಕಿ : ಹಾಸ್ಟೆಲ್‌ ವಾರ್ಡನ್‌ ಸ್ಥಳದಲ್ಲೇ ಸಾವು

Date:

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ‌ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್‌ ತಾಲೂಕಿನ ಹೊನ್ನಿಕೇರಿ ಕ್ರಾಸ್‌ ಬಳಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಅಪಘಾತದಲ್ಲಿ ಸಾವನಪ್ಪಿದ ಹಾಸ್ಟೆಲ್‌ ವಾರ್ಡನ್ ದೇಸುರಾವ ರಾಠೋಡ್ (40) ಮೂಲತಃ ಚಿಂಚೋಳಿ ತಾಲೂಕಿನವರಾಗಿದ್ದು ಕರ್ತವ್ಯ ನಿಮಿತ್ತ ಬೀದರ್‌ ನಲ್ಲಿ ನೆಲೆಸಿದ್ದರು. ಕರ್ತವ್ಯ ಮುಗಿಸಿಕೊಂಡು ಭಾಲ್ಕಿಯಿಂದ ಬೀದರ್ ನಗರಕ್ಕೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಜನವಾಡ ಪೊಲೀಸ್‌ ಠಾಣೆ ಪಿಎಸ್‌ಐ ಈದಿನ.ಕಾಮ್‌ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೃತ ವಾರ್ಡನ್ ಭಾಲ್ಕಿ ತಾಲೂಕಿನ ಲಖನಗಾಂವ ಗ್ರಾಮದ ವಸತಿ ನಿಲಯ ಮೇಲ್ವಿಚಾರಕ ಹಾಗೂ ಭಾಲ್ಕಿ ಪಟ್ಟಣದ ವಸತಿ ನಿಲಯದ ಪ್ರಭಾರಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...