ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ರಾಜ್ಯಪಾಲರ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಮುಖಂಡರು ಆಗ್ರಹಿಸಿದ್ದಾರೆ.
ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ವರ ನೇತ್ರತ್ವದಲ್ಲಿ ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.
ʼಹೈಕೊರ್ಟ್ ನ್ಯಾಯಾಧೀಶರು ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆದರೆ ಸಿಎಂ ಸಿದ್ಧರಾಮಯ್ಯನವರು ಇನ್ನೂ ಕಾನೂನು ಹೋರಾಟ ಮಾಡುವುದಾಗಿ ಕಾಲಹರಣ ಮಾಡುತ್ತಿದ್ದಾರೆ. ಮುಡಾ, ವಾಲ್ಮೀಕಿ ಹಗರಣ ಕೆಐಡಿಬಿ ಹಗರಣ ಸೇರಿದಂತೆ ಇತರೆ ಹಗರಣಗಳಲ್ಲಿ ಸಿಲುಕಿಕೊಂಡಿರುವ ಸಿದ್ಧರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸರ್ಕಾರವನ್ನು ವಜಾಗೊಳಿಸಬೇಕುʼ ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕತ್ತಲೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ; ಸಿಬ್ಬಂದಿ ಪರದಾಟ
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಮಂತ್ರಿ ಭಗವಂತ ಖೂಬಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪಾ ಯರನಳ್ಳಿ, ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಈಶ್ವರಸಿಂಗ್ ಠಾಕೂರ್, ಶಶಿ ಹೊಸಳ್ಳಿ, ದೀಪಕ ಗಾದಗೆ, ವಿಕ್ರಮ ಮುದಾಳೆ, ಲುಂಬಿಣಿ ಗೌತಮ್, ಸಂಗಮೇಶ ನಾಸಿಗರ, ರಾಜಶೇಖರ ನಾಗಮೂರ್ತಿ, ಶ್ರೀಕಾಂತ ಪಾಂಡ್ರೆ, ಶ್ರೀನಿವಾಸ ಚೌಧರಿ ಸೇರಿದಂತೆ ಅನೇಕರಿದ್ದರು.