ಬೀದರ್‌ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Date:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ರಾಜ್ಯಪಾಲರ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ವರ ನೇತ್ರತ್ವದಲ್ಲಿ ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಹೈಕೊರ್ಟ್ ನ್ಯಾಯಾಧೀಶರು ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆದರೆ ಸಿಎಂ ಸಿದ್ಧರಾಮಯ್ಯನವರು ಇನ್ನೂ ಕಾನೂನು ಹೋರಾಟ ಮಾಡುವುದಾಗಿ ಕಾಲಹರಣ ಮಾಡುತ್ತಿದ್ದಾರೆ. ಮುಡಾ, ವಾಲ್ಮೀಕಿ ಹಗರಣ ಕೆಐಡಿಬಿ ಹಗರಣ ಸೇರಿದಂತೆ ಇತರೆ ಹಗರಣಗಳಲ್ಲಿ ಸಿಲುಕಿಕೊಂಡಿರುವ ಸಿದ್ಧರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸರ್ಕಾರವನ್ನು ವಜಾಗೊಳಿಸಬೇಕುʼ ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕತ್ತಲೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ; ಸಿಬ್ಬಂದಿ ಪರದಾಟ

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಮಂತ್ರಿ ಭಗವಂತ ಖೂಬಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪಾ ಯರನಳ್ಳಿ, ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಈಶ್ವರಸಿಂಗ್ ಠಾಕೂರ್, ಶಶಿ ಹೊಸಳ್ಳಿ, ದೀಪಕ ಗಾದಗೆ, ವಿಕ್ರಮ ಮುದಾಳೆ, ಲುಂಬಿಣಿ ಗೌತಮ್, ಸಂಗಮೇಶ ನಾಸಿಗರ, ರಾಜಶೇಖರ ನಾಗಮೂರ್ತಿ, ಶ್ರೀಕಾಂತ ಪಾಂಡ್ರೆ, ಶ್ರೀನಿವಾಸ ಚೌಧರಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...