ಬೀದರ್-ಬೆಂಗಳೂರು ವಿಮಾನ ಸಂಚಾರ ಸಮಯ ಬದಲಿಸಿ : ಅರವಿಂದಕುಮಾರ ಅರಳಿ

Date:

ಬೀದರ್- ಬೆಂಗಳೂರು ನಡುವಿನ ವಿಮಾನ ಸಂಚಾರದ ವೇಳಾಪಟ್ಟಿಯಲ್ಲಿ ಸಮಯ ಬದಲಾವಣೆ ಮಾಡಬೇಕೆಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

“ಈ ಹಿಂದೆ ಪ್ರತಿದಿನ ಬೆಂಗಳೂರಿನಿಂದ ಬೆಳಿಗ್ಗೆ 6.30ಕ್ಕೆ ಹಾರಾಟ ಆರಂಭಿಸುತ್ತಿದ್ದ ವಿಮಾನ 7.45ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿತ್ತು. ಬಳಿಕ ಬೆಳಿಗ್ಗೆ 8.15ಕ್ಕೆ ಬೀದರ್‌ನಿಂದ ಹಾರಾಟ ಆರಂಭಿಸಿ ಬೆಳಿಗ್ಗೆ 9.30ಕ್ಕೆ ಬೆಂಗಳೂರು ತಲುಪುತ್ತಿತ್ತು. ಇದು ಬೀದರ್ ಅಲ್ಲದೆ ಸುತ್ತಮುತ್ತಲ ಜಿಲ್ಲೆಗಳ ವಿಮಾನಯಾನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಮತ್ತು ಪ್ರವಾಸಿಗರಿಗೆ ಅನುಕೂಲಕರವಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಸ್ಟಾರ್ ಏರ್ ಸಂಸ್ಥೆ ಈಗ ಏಕಾಏಕಿ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದ್ದು, ಮಧ್ಯಾಹ್ನ 12.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿ 1.45ಕ್ಕೆ ಬೀದರಗೆ ತಲುಪುತ್ತಿದೆ. ಮತ್ತೆ ಬೀದರ್ ನಿಂದ ಮಧ್ಯಾಹ್ನ 2.30ಕ್ಕೆ ಹೊರಟು ಬೆಂಗಳೂರಿಗೆ 3.30ಕ್ಕೆ ತಲುಪಲಿದೆ. ಈ ವೇಳಾಪಟ್ಟಿಯಿಂದ ಯಾವುದೇ ಪ್ರಯಾಣಿಕರಿಗೆ ಅನುಕೂಲ ಆಗುವುದಿಲ್ಲ. ಬೀದರ್‌ದಿಂದ ಬೆಂಗಳೂರು ತಲುಪಲು ಒಂದು ಗಂಟೆಯಾದರೂ, ಅಲ್ಲಿನ ವಿಮಾನ ನಿಲ್ದಾಣದಿಂದ ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವ ಹೊತ್ತಿಗೆ ಸಂಜೆ 5 ಗಂಟೆಯಾಗುತ್ತದೆ. ಇದರಿಂದ ಕಚೇರಿ ಕೆಲಸ ಕಾರ್ಯಗಳಿಗೆ ತೆರಳುವ ಜನರಿಗೆ ತೊಂದರೆ ಆಗುತ್ತಿದ್ದು, ಒಂದು ದಿನ ಮುಂಚೆಯೇ ಹೋಗಬೇಕಾದ ಸ್ಥಿತಿ ಬಂದಿದೆʼ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರಹೀಂ ಖಾನ್‍ಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

ಒಂದು ವರ್ಷ ಸ್ಥಗಿತಗೊಂಡ ವಿಮಾನ ಸೇವೆ ಜೂ.10ರಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಿಂದ ಪುನಾರಂಭಗೊಂಡಿದೆ. ಆದರೆ, ಈಗಿನ ವಿಮಾನ ಸಂಚಾರ ವೇಳಾಪಟ್ಟಿ ಬದಲಾವಣೆಯಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಕೂಡಲೇ ಸ್ಟಾರ್‌ ಏರ್‌ ಸಂಸ್ಥೆ ಜೊತೆ ಚರ್ಚಿಸಿ ಮೊದಲಿನಂತೆ ವಿಮಾನಯಾನ ಸೇವೆ ನೀಡುವಂತೆ ಸೂಚಿಸಬೇಕು. ಒಂದು ವೇಳೆ ಬೀದರ್-ಬೆಂಗಳೂರು ನಡುವಿನ ವಿಮಾನ ಸಂಚಾರ ಸಮಯ ಬದಲಾಯಿಸದಿದ್ದರೆ ವಿಮಾನ ಸೇವೆಯೇ ರದ್ದುಗೊಳಿಸಿ, ಸಬ್ಸಿಡಿ ಹಣ ಹಿಂಪಡೆದು ಜಿಲ್ಲೆಯ ಇತರೆ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲು ಎಂದು ಅರವಿಂದಕುಮಾರ ಅರಳಿ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER)...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ, ಬಡಪಾಯಿ ಜನರಿಗೆ ರೊಟ್ಟಿಯೂ ತುಟ್ಟಿ!

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ...

ದೀಪಾವಳಿ ವ್ಯಾಪಾರದ ಮೇಲೆ ರ‍್ಯಾಲಿ ಬಿಸಿ; ರಾಹುಲ್ ಗಾಂಧಿಗೆ ಮತ್ತೊಮ್ಮೆ ಪತ್ರ ಬರೆದ ದೆಹಲಿ ವ್ಯಾಪಾರಿಗಳ ಸಂಘ

ದೆಹಲಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಇಂಡಿಯಾ (INDIA) ಮೈತ್ರಿಕೂಟದ ಬೃಹತ್ ಪ್ರತಿಭಟನಾ...