ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಗೆ ಬೀದರ್ ದಕ್ಷಿಣ ಕ್ಷೇತ್ರದ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಆಸ್ಕರ್ ಫರ್ನಾಂಡೀಸ್ ಖಂಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ಮುಗಿದ ಬಳಿಕ ಕೋಮುವಾದಿಗಳು ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿರುವುದು ಅಸಾಂವಿಧಾನಿಕ ಕೃತ್ಯವಾಗಿದ್ದು, ಜಾತ್ಯತೀತ ವ್ಯವಸ್ಥೆಗೆ ಅಪಮಾನ ಮಾಡಿದಂತಾಗಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಮನುವಾದಿ ಮನಸ್ಥಿತಿಯವರು ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಬಗ್ಗೆ ತಾರತಮ್ಯ ಧೋರಣೆ ತೋರುತ್ತಿದ್ದಾರೆ ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರವೂ ಈ ಸಮುದಾಯಗಳ ಬಗ್ಗೆ ಅಸಡ್ಡೆ ತೋರುತ್ತಿದ್ದು, ಪ್ರಾತಿನಿಧ್ಯ ದೊರೆತಿದೆಯೇ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಸ್ಕರ್ ಫರ್ನಾಂಡೀಸ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಆಮ್ ಆದ್ಮಿ ಪಕ್ಷದ ತಾಂತ್ರಿಕ ವಿಭಾಗಕ್ಕೆ ಓಂಕಾರ ಎನ್. ನೇಮಕ




