ಚಿಟಗುಪ್ಪ | ಯುವ ಮಂಡಲ ವಿಕಾಸ ಅಭಿಯಾನ ಕಾರ್ಯಕ್ರಮ

Date:

ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಬೀದರ್ ಕೇಂದ್ರ, ಮಾಡಗುಳದ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸಹಯೋಗದಲ್ಲಿ 2025-26ನೇ ಸಾಲಿನ ಯುವ ಮಂಡಲ ವಿಕಾಸ ಅಭಿಯಾನ ಕಾರ್ಯಕ್ರಮ ನಡೆಯಿತು.

- Advertisement -

ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂತೋಷ್ ಹತ್ತರಗಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,”ಯುವ ಸಮೂಹ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳೇ ಭವ್ಯ ಭಾರತದ ಭವಿಷ್ಯದ ನಾಯಕರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಜಯಕುಮಾರ್ ಸಿಂಧೆ ಮಾತನಾಡಿ, “ಆಟ ಮತ್ತು ಪಾಠ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಸಂಯೋಜಕರ ಲಕ್ಷ್ಮಣ ಪಿ.ಮಚಕುರೆ ಮಾತನಾಡಿ, ʼಯುವಜನತೆ ಗ್ರಾಮ ಮತ್ತು ಕಾಲೇಜುಗಳಲ್ಲಿ ಯುವ ಸಂಘಗಳನ್ನು ರಚಿಸಿಕೊಂಡು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಜಿಲ್ಲೆಗೆ ಕೀರ್ತಿ ತರಬೇಕು. ಸರ್ಕಾರವು ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲು ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಪ್ರೋತ್ಸಾಹ ಧನ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆʼ ಎಂದು ಮಾಹಿತಿ ನೀಡಿದರು.

ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಶಾಂತಕುಮಾರ್ ಪಾಟೀಲ್, ಕಾಲೇಜಿನ ಸಂಸ್ಕೃತಿ ವಿಭಾಗದ ಮುಖ್ಯಸ್ಥ ಚೀತ್ರಶೇಖರ ಚಿರಳ್ಳಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಎಎಂಓ ಡಾ.ವಿಜೆರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮೀನಾಕುಮಾರಿ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಭಾಗವಹಿಸಿದರು.

ಇದನ್ನೂ ಓದಿ : ಬೀದರ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸಿಲಿಂಡರ್‌ ಕೊರತೆಯಿಲ್ಲ : ಡಿಸಿ ಸ್ಪಷ್ಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...