ಬೀದರ್‌ | ಮಾಂಜಾ ದಾರಕ್ಕೆ ಬಲಿಯಾದ ಸಂಜುಕುಮಾರ್ ಕುಟುಂಬಕ್ಕೆ ಪರಿಹಾರ ಆಗ್ರಹಿಸಿ ಸತ್ಯಾಗ್ರಹ

Date:

ನಿಷೇಧಿತ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಗುಂಡಪ್ಪ ಹೊಸಮನಿ ಕುಟುಂಬಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

- Advertisement -

2026ರ ಜನವರಿ 14ರಂದು ಚಿಟಗುಪ್ಪಾ ತಾಲೂಕಿನ ತಾಳಮಡಗಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಬಂಬುಳಗಿ ಗ್ರಾಮದ ನಿವಾಸಿ ಸಂಜುಕುಮಾರ ಗುಂಡಪ್ಪ ಹೊಸಮನಿ (45) ಅವರು ನಿಷೇಧಿತ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಘಟನೆಯ ಬಳಿಕ ಸಚಿವ ಈಶ್ವರ ಖಂಡ್ರೆ ಹಾಗೂ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಗ್ರಾಮಕ್ಕೆ ತೆರಳಿ ಮೃತರ ಕುಟುಂಬವನ್ನು ಭೇಟಿ ಮಾಡಿ ಸರ್ಕಾರದಿಂದ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಘಟನೆ ನಡೆದು ಸುಮಾರು ಎಂಟು ತಿಂಗಳು ಕಳೆದರೂ ಕುಟುಂಬಕ್ಕೆ ಯಾವುದೇ ಪರಿಹಾರ ದೊರೆತಿಲ್ಲ. ನೀಡಿದ್ದ ಭರವಸೆ ಕೇವಲ ಆಶ್ವಾಸನೆಯಾಗಿಯೇ ಉಳಿದಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಆಲ್‌ ಇಂಡಿಯಾ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಉಮೇಶ ಗುತ್ತೇದಾರ್ ಮಾತನಾಡಿ, “ನಿಷೇಧಿತ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಹೊಸಮನಿ ಅವರಿಗೆ ಇಲ್ಲಿಯವರೆಗೆ ನಯಾಪೈಸೆ ಪರಿಹಾರ ದೊರೆತ್ತಿಲ್ಲ. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಂಬಂಧಿತ ಅಧಿಕಾರಿಗಳ ಮೇಳೆ ಸುಮೋಟೋ‌ ಕೇಸ್ ಸಹ ದಾಖಲಿಸಿದ್ದಾರೆ. ಕುಟುಂಬದ ಸದಸ್ಯನನ್ನು ಕಳೆದಕೊಂಡ ಸಂಜುಕುಮಾರ ಅವರ ಕುಟುಂಬವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಹೀಗಾಗಿ ಸರ್ಕಾರ ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

“ಮೃತ ಸಂಜುಕುಮಾರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು.ಕುಟುಂಬಕ್ಕೆ 5 ಎಕರೆ ಜಮೀನು ಮಂಜೂರು ಮಾಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮೃತರ ಪುತ್ರಿಯೊಬ್ಬರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಬಿಎಎಂಎಸ್ ಪದವಿ ವ್ಯಾಸಂಗ ಮಾಡುತ್ತಿದ್ದು, ಅವರ ಸೀಟ್ ಬೀದರ್ ಜಿಲ್ಲೆಗೆ ವರ್ಗಾಯಿಸಿ ಇಲ್ಲೇ ಅಧ್ಯಯನ ನಡೆಸುವಂತೆ ಮಾಡಬೇಕು. ರಾಜ್ಯದಲ್ಲಿ ಮಾಂಜಾ ದಾರ ಬಳಕ್ಕೆ ನಿಷೇಧ ಕಾಯ್ದೆ ಇದೆ, ಹೀಗಾಗಿ ನಿಷೇಧಿತ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಕುಟುಂಬಗಳಿಗೆ ವಿಶೇಷ ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕು” ಎಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಧ್ವನಿಯೆತ್ತಿ ಪರಿಹಾರ ಕೊಡಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಅವರು ಭೇಟಿ ನೀಡಿ ಪಕ್ಷದ ಶಾಸಕರಿಗೆ ಮನವರಿಕೆ ಮಾಡಿ, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಧಿವೇಶನದಲ್ಲಿ ಧ್ವನಿಯೆತ್ತಿ ಪರಿಹಾರಕ್ಕೆ ಆಗ್ರಹಿಸಲು ತಿಳಿಸುವೆ ಎಂದಿದ್ದಾರೆ.

ಮೃತ ಸಂಜುಕುಮಾರ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಚಿಟಗುಪ್ಪ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಿಂದ ಬೀದರ್‌ವರೆಗೆ ಪಾದಯಾತ್ರೆ ಮೂಲಕ ಆಗಮಿಸಿ, ಬೀದರ್ ನಗರದ ಅಂಬೇಡ್ಕರ್ ವೃತ್ತದ ಎದುರು ಕಳೆದ ಒಂದು ವಾರದಿಂದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ಆದರೆ, ಜಿಲ್ಲಾಡಳಿತ ನಮಗೆ ಸ್ಪಂದಿಸುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಆಗಸ್ಟ್‌ 15ರಿಂದ ಹೋರಾಟವನ್ನು ವಿನೂತನವಾಗಿ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

WhatsApp Image 2026 08 13 at 6.47.20 PM
advertisement

ಇದನ್ನೂ ಓದಿ : ಬೀದರ್‌ | ಹೊಲದಲ್ಲಿ ಮೇಕೆ ಮೇಯಿಸಿದಕ್ಕೆ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ; ಸಾವು

ಸತ್ಯಾಗ್ರಹದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ದತ್ತು ಸೂರ್ಯವಂಶಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸತ್ಯದೀಪ ಹಾವನೂರ, ಪ್ರಕಾಶ ಕೋಟೆ, ಸಂಜುಕುಮಾರ ಮೇದಾ, ರಾಜ್ಯ ಕಾರ್ಯದರ್ಶಿ ಜಿ. ಆಸ್ಕರ್, ಜಿಲ್ಲಾಧ್ಯಕ್ಷ ಯೋಹಾನ ಡಿಸೋಜಾ ಚಿಲ್ಲರ್ಗಿ, ಗುಣವಂತ ಶಿಂಧೆ, ಜಿಲ್ಲಾ ಉಪಾಧ್ಯಕ್ಷ ಶ್ರೀಮಂತ ಬಗದಲ್, ದಕ್ಷಿಣ ಕ್ಷೇತ್ರದ ಸಂಯೋಜಕ ಸಾಲೊಮೊನ್ ಮಂಗಲಪೇಟ್, ಉತ್ತರ ಕ್ಷೇತ್ರದ ಉಪಾಧ್ಯಕ್ಷರು, ವೀರಶೆಟ್ಟಿ ಬಂಬುಳಗಿ, ಪುಟ್ಟರಾಜ ರೇಕುಳಗಿ, ಪ್ರಸಾದ ಮನ್ನಳ್ಳಿ, ಲಾಲಪ್ಪ ರಾಂಪೂರೆ, ಬಸವರಾಜ , ಯೋಹಾನ ಬಗದಲ್, ಸಂದೀಪ ನಂದಿ ಸೇರಿದಂತೆ ಮೃತರ ಕುಟುಂಬದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...