ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

Date:

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ ಕಳಪೆ ಕಾಮಗಾರಿಯನ್ನು ಖಂಡಿಸಿ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- Advertisement -

ಅಹಿಂದ ಚಿಂತಕರ ವೇದಿಕೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು ಗ್ರಾಮದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ನಾಡ ಕಚೇರಿಗೆ ತೆರಳಿದರು. ಬಳಿಕ ಬೀದರ್ ಜಿಲ್ಲಾಧಿಕಾರಿಗಳ ಹೆಸರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್‌ ಅನೀಲಕುಮಾರ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಹಿಂದ ಚಿಂತಕರ ವೇದಿಕೆ ಜಿಲ್ಲಾಧ್ಯಕ್ಷ ಧನರಾಜ ಬೇಮಳಖೇಡ ಮಾತನಾಡಿ, “ಮಹಾರಾಷ್ಟ್ರ ಗಡಿಯಿಂದ ನಿರ್ಮಿಸಲಾಗಿರುವ ಸುಮಾರು 120 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ–122ರ ಕಾಮಗಾರಿ ಕಳಪೆಯಾಗಿದ್ದು, ರಸ್ತೆ ನಿರ್ಮಿಸಿ ಮೂರು ವರ್ಷವೂ ಪೂರ್ಣಗೊಂಡಿಲ್ಲ. ಈಗಾಗಲೇ ಹಲವೆಡೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಕಳಪೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಯುವ ಮುಖಂಡ ಬಲಭದ್ರ ದಾಮಾ ಮಾತನಾಡಿ, “ಬೇಮಳಖೇಡ ಗ್ರಾಮದಲ್ಲಿ ಸುಮಾರು ₹4 ಕೋಟಿ ಅನುದಾನದಲ್ಲಿ ಕೈಗೊಂಡಿರುವ ಜಲ ಜೀವನ್‌ ಮಿಷನ್‌ ಯೋಜನೆಯ ಕಾಮಗಾರಿ ಕಳಪೆಯಾಗಿದ್ದು, ಬಹುತೇಕ ಮನೆಗಳ ನಲ್ಲಿಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಜೆಜೆಎಂ ಕಾಮಗಾರಿ ಹೆಸರಿನಲ್ಲಿ ಗ್ರಾಮದಲ್ಲಿ ರಸ್ತೆಗಳನ್ನೆಲ್ಲ ಬೇಕಾಬಿಟ್ಟಿಯಾಗಿ ಅಗೆದು ಹಾಕಲಾಗಿದ್ದು, ಕಾಮಗಾರಿ ಪೂರ್ಣಗೊಂಡರೂ ರಸ್ತೆಗಳನ್ನು ದುರಸ್ತಿಪಡಿಸದಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಕೂಡಲೇ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ, ಅಗೆದಿರುವ ರಸ್ತೆಗಳನ್ನು ಸಮರ್ಪಕವಾಗಿ ದುರಸ್ತಿಪಡಿಸಬೇಕು. ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಮಹಾವೀರ ಶರಣಪ್ಪ, ಬಕ್ಕಪ್ಪ ಮಾಣಿಕಪ್ಪ, ಬಸವರಾಜ ಸ್ವಾಮಿ, ಅಭಿಷೇಕ, ವಿಜಯಕುಮಾರ, ಫರ್ನಾಂಡಿಸ್‌, ಉಮಾಕಾಂತ, ವಿಠಲ, ಪೀರ್‌ಪಾಶಾ, ಕರಣಕಿಶೋರ ಸೇರಿದಂತೆ ಗ್ರಾಮಸ್ಥರು ಹಾಗೂ ಅಹಿಂದ ಚಿಂತಕರ ವೇದಿಕೆಯ ಪ್ರಮುಖರು ಪಾಲ್ಗೊಂಡಿದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...