ಬೀದರ್ | ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಕೆ

Date:

Advertisements

ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್‌ ಜಿಲ್ಲಾ ಉಸ್ತುವಾರಿ ಈಶ್ವರ ಖಂಡ್ರೆಯವರ ಮಗ ಸಾಗರ್‌ ಖಂಡ್ರೆ ಅವರು ಮಂಗಳವಾರ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದರು.

ಬೀದರ್‌ ನಗರದಲ್ಲಿ ಅಭ್ಯರ್ಥಿ ಸಾಗರ್‌ ಖಂಡ್ರೆಯವರು ತಾಯಿ ಗೀತಾ ಖಂಡ್ರೆ, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ ಹಾಗೂ ಮಾವ ಗಂಗಾಧರ ಅವರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

ನಾಳೆ (ಏ.17) ರಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ತೆರಳಿ ಇನ್ನೊಂದು ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಗಣೇಶ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ

ಸಮಾವೇಶದಲ್ಲಿ ಪಕ್ಷದ ಸಚಿವರು, ಶಾಸಕರು, ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X