ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್ ಜಿಲ್ಲಾ ಉಸ್ತುವಾರಿ ಈಶ್ವರ ಖಂಡ್ರೆಯವರ ಮಗ ಸಾಗರ್ ಖಂಡ್ರೆ ಅವರು ಮಂಗಳವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದರು.
ಬೀದರ್ ನಗರದಲ್ಲಿ ಅಭ್ಯರ್ಥಿ ಸಾಗರ್ ಖಂಡ್ರೆಯವರು ತಾಯಿ ಗೀತಾ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಹಾಗೂ ಮಾವ ಗಂಗಾಧರ ಅವರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ನಾಳೆ (ಏ.17) ರಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ತೆರಳಿ ಇನ್ನೊಂದು ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಗಣೇಶ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ
ಸಮಾವೇಶದಲ್ಲಿ ಪಕ್ಷದ ಸಚಿವರು, ಶಾಸಕರು, ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.