ಅಡುಗೆ ಅನಿಲ ದರ ₹29 ಹೆಚ್ಚಳ : ಇದೇನಾ ಅಚ್ಛೇದಿನ್ ಎಂದು ಪ್ರಶ್ನಿಸಿದ ಸಚಿವ ಈಶ್ವರ ಖಂಡ್ರೆ

Date:

ಗೃಹ ಬಳಕೆಯ 14.2 ಕೆ.ಜಿ. ಅಡುಗೆ ಅನಿಲ ಸಿಲಿಂಡರ್ ದರವನ್ನು ₹29 ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇದೇನಾ ಅಚ್ಛೇದಿನ್ ಎಂದು ಪ್ರಶ್ನಿಸಿದ್ದಾರೆ.

- Advertisement -

“ಕಳೆದ 3 ತಿಂಗಳಲ್ಲಿ 2ನೇ ಬಾರಿ ಶ್ರೀಸಾಮಾನ್ಯರು ಬಳಸುವ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, ಸುಮಾರು ₹ 90 ಹೊರೆ ಬಿದ್ದಿದೆ. ಇದರಿಂದ ಬಡವರು, ಮಧ್ಯಮವರ್ಗದವರು ನಲುಗಿ ಹೋಗಿದ್ದಾರೆ. ಇದೆಲ್ಲವೂ ಕೇಂದ್ರ ಸರ್ಕಾರದ ದುರಾಡಳಿತದ ಫಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಕಾಂಗ್ರೆಸ್ ನೇತೃತ್ವದ ಯುಪಿಎ ಕಾರ್ಯಕಾಲದಲ್ಲಿ ₹3 -4 ದರ ಹೆಚ್ಚಳವಾದರೂ ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿಗರು ಈಗ ಏಕೆ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಈಗ ಇವರ ಬಡವರ ಪರ ಕಾಳಜಿ ಎಲ್ಲಿ ಹೋಯಿತು” ಎಂದು ಪ್ರಶ್ನಿಸಿದ್ದಾರೆ.

“ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹3,200 ದಾಟಿದ್ದು, ಹೊಟೆಲ್ ಗಳಲ್ಲಿ ಎಲ್ಲ ತಿಂಡಿ ತಿನಿಸುಗಳ ದರ ಹೆಚ್ಚಳ ಆಗಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಳದಿಂದ ಜೀವನಾವಶ್ಯಕ ವಸ್ತುಗಳ ದರವೂ ಗಗನಕ್ಕೆ ಏರಿದೆ. ಬಡವರು, ಮಧ್ಯಮವರ್ಗದವರ ಬದುಕು ದುಸ್ತರವಾಗುತ್ತಿದೆ. ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ನೀಡಿರುವುದರಿಂದ ಜನ ಕೇಂದ್ರ ಸರ್ಕಾರದ ಈ ಹೊರೆ ಹೊರುವ ಶಕ್ತಿ ಪಡೆದಿದ್ದಾರೆ. ಬಿಜೆಪಿ ಮತ್ತು ಮಿತ್ರಪಕ್ಷಗಳಿಗೆ ಜನರೇ ಬೀದಿಗಿಳಿದು ಬುದ್ಧಿಕಲಿಸುವ ದಿನ ದೂರವಿಲ್ಲ” ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ವೈಚಾರಿಕ ಪರಂಪರೆಯ ನೆಲ ʼಕಲ್ಯಾಣʼ : ವಿವೇಕಾನಂದ ಸಜ್ಜನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...