ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ
ಸ್ವಾಮಿ ನೇತೃತ್ವದ ನಿಯೋಗ ಒತ್ತಾಯಿಸಿದೆ.
ಈ ಕುರಿತು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದ ನಿಯೋಗ ಬೀದರ್ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ತೀವ್ರವಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಿತ್ತನೆ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಇಲ್ಲದೆ ಬೆಳೆಗಳು ಒಣಗುತ್ತಿವೆ. ಸಾಲಸೋಲ ಮಾಡಿದ ರೈತರು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಕೂಡಲೇ ಸರಕಾರ ರೈತರ ಸಮಸ್ಯೆ ಅರಿತು ಗಡಿಜಿಲ್ಲೆ ಬೀದರ್‌ನ ಉಳಿದ ಎಲ್ಲ ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಘೋಷಿಸಿಸುವುದರ ಜತೆಗೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಬೀದರ್ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ನಾಗೇಂದ್ರ, ಗೌರವಾಧ್ಯಕ್ಷ ಚಾಮರಾಜ ಪಾಟೀಲ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ
ಬಿರಾದಾರ, ಸಂಘಟನಾ ಕಾರ್ಯದರ್ಶಿ ಅಶೋಕ ಕಾರಬಾರಿ, ಪಂಡಿತ ಚಿದ್ರಿ ಸೇರಿದಂತೆ ಹಲವರು ಇದ್ದರು.




