ಬೀದರ್‌ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಎರಡನೇ ದಿನಕ್ಕೆ ಕಾಲಿಟ್ಟ ಧರಣಿ

Date:

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಬುಧವಾರ
ರೈತರು, ವಿವಿಧ ಸಂಘ ಸಂಸ್ಥೆಯ ಮುಖಂಡರು ಭಜನೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

- Advertisement -

ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದು ರೈತರು ಆತಂಕದಲ್ಲಿದ್ದಾರೆ. ರಾಜ್ಯ ಸರಕಾರ ಜಿಲ್ಲೆಯ ನಾಲ್ಕು ತಾಲೂಕುಗಳು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಭಾಲ್ಕಿ, ಹುಲಸೂರು, ಕಮಲನಗರ ಮತ್ತು ಔರಾದ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟು ಅನ್ಯಾಯ ಎಸಗಿದೆ. ಇದರಿಂದ ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ಆರ್ಥಿಕವಾಗಿ ಸಂಕಷ್ಟಕ್ಕಿಡಾಗಿದ್ದಾರೆ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಕೂಡಲೇ ರಾಜ್ಯ ಸರಕಾರ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಿ ಪರಿಹಾರ ವಿತರಿಸುವುದರ ಜತೆಗೆ ವಿವಿಧ
ಬೇಡಿಕೆ ಈಡೇರಿಸಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಪ್ರತಿ ಟನ್ ಕಬ್ಬಿಗೆ ₹4 ಸಾವಿರ ಬೆಲೆ ನಿಗದಿಪಡಿಸಿ, ಆಮ್ ಆದ್ಮಿ ಪಕ್ಷ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಪ್ರಮುಖರಾದ ಜೈರಾಜ ಕೊಳ್ಳಾ, ಕೆ.ಡಿ.ಗಣೇಶ, ಸಂಗಮೇಶ ಭೂರೆ, ದೀಪಕ ಸಿಂಧೆ ಸೇರಿದಂತೆ ಹಲವರು ಇದ್ದರು.

WhatsApp Image 2026 08 29 at 3.48.01 PM 6
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸ್ವಾತಂತ್ರ್ಯ ಹೋರಾಟ ಹಿನ್ನೆಲೆಯುಳ್ಳ BSP ನಾಯಕ ಸುಧೀಂದ್ರ ಭದೋರಿಯಾ ಕುಟುಂಬದ ಹೆಸರುಗಳು ಡಿಲೀಟ್‌

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...