ಔರಾದ್-ಕಮಲನಗರ ಖಾಸಗಿ ಶಾಲೆಗಳ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ಈ ಸಂಬಂಧ ಒಕ್ಕೂಟದ ಮುಖಂಡರು ಗುರುವಾರ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಗಾಯಕವಾಡ ಹಾಗೂ ತಹಶೀಲ್ದಾರ್ ಮಹೇಶ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಔರಾದ್ ಮತ್ತು ಕಮಲನಗರ ತಾಲ್ಲೂಕಿನ ಕೆಲ ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ಪೋಷಕರಿಂದ ವಸೂಲಿ ಮಾಡುತ್ತಿದ್ದು, ಇದರಿಂದ ಮಧ್ಯಮ ಹಾಗೂ ಬಡ ಕುಟುಂಬಗಳ ಮೇಲೆ ತೀವ್ರ ಆರ್ಥಿಕ ಹೊರೆ ಉಂಟಾಗಿದೆ. ಸುರಕ್ಷಿತ ಕಟ್ಟಡ, ಅಗ್ನಿ ಸುರಕ್ಷತಾ ಪ್ರಮಾಣಪತ್ರ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಾಲಯ, ವಸತಿ ನಿಲಯಗಳ ಸಮರ್ಪಕ ಮೇಲ್ವಿಚಾರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಶಾಲಾ ನಿರ್ವಹಣಾ ಸಮಿತಿ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕಾದ ನಿಯಮಗಳನ್ನು ಅನೇಕ ಶಿಕ್ಷಣ ಸಂಸ್ಥೆಗಳು ಪಾಲಿಸುತ್ತಿಲ್ಲ. ದಾಖಲಾತಿ, ವರ್ಗಾವಣೆ ಪ್ರಮಾಣಪತ್ರ ವಿತರಣೆ, ಪ್ರವೇಶ ಪ್ರಕ್ರಿಯೆ ಹಾಗೂ ಶಾಲಾ ವಾಹನಗಳ ಸುರಕ್ಷತಾ ನಿಯಮಗಳ ಉಲ್ಲಂಘನೆಯೂ ವ್ಯಾಪಕವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2026 07 17 at 3.16.22 PM

ಸಂಬಂಧಿಸಿದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಪರಿಶೀಲನೆ ನಡೆಸಿ, ಶಿಕ್ಷಣ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ : ಬೀದರ್‌ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಮನವಿ

ಈ ಸಂದರ್ಭದಲ್ಲಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರವೀಣ ಕಾರಂಜೆ, ಸಂತೋಷ ಸಿಂಧೆ, ಗಣಪತಿ ವಾಸುದೇವ, ಸುನೀಲ ಮಿತ್ರಾ, ಆನಂದ ಕಾಂಬಳೆ, ಪ್ರಕಾಶ ಬಂಗಾರೆ, ಸುಭಾಷ ಲಾಧಾ, ದಿನೇಶ ಸಿಂಧೆ, ಶಾಂತಕುಮಾರ ಭಾವಿಕಟ್ಟಿ, ಸಂತೋಷ ಸೂರ್ಯವಂಶಿ, ಸುಂದರ ಮೇತ್ರೆ, ಉತ್ತಮ ಗಾಯಕವಾಡ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...