ಬೀದರ್‌ | ಅಂಗವಿಕಲರ ನಿಧಿ ಸಮಪರ್ಕವಾಗಿ ಬಳಕೆಗೆ ಆಗ್ರಹ

Date:

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ನೀಡುತ್ತದೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಅಂಗವಿಕಲರಿಗೆ ಮೀಸಲಿರುವ ಹಣ ಸಮಪರ್ಕವಾಗಿ ಬಳಕೆ ಮಾಡದೇ ಅಂಗವಿಕಲರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಭಾರತೀಯ ಅಂಗವಿಕಲರ ಸಂಘ ಹಾಗೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶಾಂತಕುಮಾರ ಮುಕ್ತಾ ಆರೋಪಿಸಿದ್ದಾರೆ.

ಈ ಸಂಬಂಧ ಅಂಗವಿಕಲರ ಸಂಘ ಹಾಗೂ ಹಿತರಕ್ಷಣಾ ಸಮಿತಿಯಿಂದ ಹುಲಸೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅವರಿಗೆ ಹಕ್ಕೊತ್ತಾಯ ಪತ್ರ ಸಲಿಸಿದರು.

“ಈಗಾಗಲೇ ಗ್ರಾಮ ಪಂಚಾಯಿತಿನಲ್ಲಿ ಇರುವ ಹತ್ತು ಲಕ್ಷದಷ್ಟು ಹಣ ದುರ್ಬಳಕೆ ಮಾಡದೇ  ಅರ್ಹ ಅಂಗವಿಕಲರ ಕ್ಷೇಮಾಭಿವೃದ್ಧಿಗೆ ಬಳಸಬೇಕು. ಈ ಕುರಿತು ಒಂದು ವಾರದಲ್ಲಿ ಈ ಮೀಸಲು ಹಣ ಬಳಸದೆ ಇದ್ದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮನವಿ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಈ ಕುರಿತು ಹಿರಿಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಕಾಂತ ನಂಜವಾಡೆ, ರವಿ ದೇವನಾಳೆ, ಅರವಿಂದ ಪಾರಶೆಟ್ಟೆ, ರವೀಂದ್ರ, ಕಾಶಿನಾಥ್, ನೌಸೇದ ಹಮ್ಮಿದ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

ವರದಿ ಮಾಹಿತಿ : ದತ್ತಾ ಮೋರೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...