ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ.ಜ್ಯೋತಿ ದಮ್ಮ ಪ್ರಕಾಶ್ ಅವರನ್ನು ಬೀದರ್ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಹುದ್ದೆಗೆ ತಾತ್ಕಾಲಿಕವಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಪ್ರಕರಣ 17ರ ಅಡಿಯಲ್ಲಿ ಈ ನಿಯೋಜನೆ ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ ಅಥವಾ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಹಿರಿಯ ಶ್ರೇಣಿ ಅಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲದ ಗ್ರೂಪ್ ‘ಎ’ ಅಧಿಕಾರಿಯನ್ನು ನೇಮಿಸುವವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ.ಜ್ಯೋತಿ ದಮ್ಮ ಪ್ರಕಾಶ್ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಬೀದರ್ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಹುದ್ದೆಯ ಕರ್ತವ್ಯಕ್ಕೆ ಹಾಜರಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸೇವಾ ಷರತ್ತು ಮತ್ತು ನಿಬಂಧನೆಗಳ ಕುರಿತು ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಉನ್ನತ ಶಿಕ್ಷಣ ಇಲಾಖೆ(ವಿಶ್ವವಿದ್ಯಾಲಯಗಳು-1) ಸರ್ಕಾರದ ಅಧೀನ ಕಾರ್ಯದರ್ಶಿ ವಿದ್ಯಾ ಹೆಚ್.ಪೈ ಅವರು ರಾಜ್ಯಪಾಲರ ಆದೇಶನುಸಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು



