ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಮನ್ಮಥ ಡೋಳೆ ಆಯ್ಕೆ

Date:

ಔರಾದ್‌ ಪಟ್ಟಣದಲ್ಲಿ ಫೆ.4ರಂದು ನಡೆಯಲಿರುವ ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಹೆಸರು ಕೊನೆಗೂ ಅಂತಿಮಗೊಂಡಿದೆ. ಹಿರಿಯ ಸಾಹಿತಿ, ಪ್ರಾಚಾರ್ಯ ಡಾ.ಮನ್ಮಥ ಡೋಳೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

- Advertisement -

ಔರಾದ್‌ ಪಟ್ಟಣದ ಕನ್ನಡ ಭವನದಲ್ಲಿ ಬುಧವಾರ ಸಂಜೆ ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಮನ್ಮಥ ಡೋಳೆ ಅವರು ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಹಿಂದೆ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಸಾಹಿತಿಗಳು, ಸಾಹಿತ್ಯೇತರ ಕ್ಷೇತ್ರಗಳ ಸಾಧಕರ ಹೆಸರು ಪ್ರಸ್ತಾಪವಾಗಿತ್ತು. ಸಾಹಿತಿ ಮನ್ಮಥ ಡೋಳೆ ಅವರ ಹೆಸರು ಅಂತಿಮವಾಗಿದೆ.

ಡಾ.ಮನ್ಮಥ ಡೋಳೆ ಪರಿಚಯ :

ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಡಾ.ಮನ್ಮಥ ಡೋಳೆ ಅವರು ಔರಾದ್‌ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ 1ನೇ ಜೂನ್‌ 1970ರಲ್ಲಿ ಜನಿಸಿದ್ದಾರೆ. ಎಂಎ, ಎಂಫಿಲ್, ಪಿಎಚ್‌ಡಿ ಪೂರೈಸಿದ್ದು, ಕಳೆದ 2 ದಶಕದಿಂದ ಔರಾದ್‌ ಪಟ್ಟಣದ ನಾಲಂದಾ ಪದವಿ ಪೂರ್ವ ಕಾಲೇಜಿನ (ಅನುದಾನಿತ) ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

2013ರಲ್ಲಿ ʼಮಿಡಿ ಮಾವುʼ ಚುಟುಕು ಕವನ ಸಂಕಲನ ಪ್ರಕಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿದ ಅವರು, ಅನಂತರ ʼಬೀದರ್‌ ಜಿಲ್ಲಾ ದಲಿತ ಸಿರಿʼ, ʼಬಿಡಿ ಬರಹಗಳ ಪ್ರಬಂಧ ಮಾಲೆʼ ಪ್ರಕಟಿತ ಕೃತಿಗಳು. ಬಸವೇಶ್ವರ ಮತ್ತು ʼಅಂಬೇಡ್ಕರ್‌ ಅವರ ಚಿಂತನೆಯ ನೆಲೆ ಮತ್ತು ನಿಲುವುಗಳುʼ ಅವರ ಸಂಶೋಧನಾ ಗ್ರಂಥವಾಗಿದೆ.

1004824709

ಈ ಹಿಂದೆ ಪತ್ರಕರ್ತರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಘಟಕದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಾಮಾಜಿಕ, ಸಾಹಿತ್ಯಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಕನ್ನಡ ನಾಡು-ನುಡಿ, ಭಾಷಾ ಬೆಳವಣಿಗೆಗೆ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. 16 ವರ್ಷಗಳ ಕಾಲ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ದಲಿತ-ಬಂಡಾಯ ಸಾಹಿತ್ಯಕ್ಕಾಗಿ ಶ್ರಮಿಸಿದ್ದಾರೆ. ಬೀದರ್ ಜಿಲ್ಲಾ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನ ಸಂಘಟಿಸಿದ ಕೀರ್ತಿ ಅವರದ್ದಾಗಿದೆ. ಸದ್ಯ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ : ಅರಸು – ಸಿದ್ದರಾಮಯ್ಯ: ʼಬದಲಾದ ಕಾಲಘಟ್ಟದ ಪಾತ್ರʼಕ್ಕೆ ಸಿಗದ ವಿಶ್ಲೇಷಣಾ ನ್ಯಾಯ

ಕಳೆದ ಮೂರು ದಶಕದಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುರುತಿಸಿ ಸಮ್ಮೇಳನ ಸರ್ವಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು ಅತ್ಯಂತ ಸಂತೋಷ ತಂದಿದೆ. ನನ್ನನ್ನು ಗುರುತಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಪದಾಧಿಕಾರಿಗಳಿಗೆ, ಕನ್ನಡ ಸಾಹಿತ್ಯಾಸಕ್ತರಿಗೆ, ಸಂಘಟಕರಿಗೆ ಕೃತಜ್ಞನಾಗಿದ್ದೇನೆʼ ಎಂದು ಮನ್ಮಥ ಡೋಳೆ ಅವರು ʼಈದಿನʼ ಜೊತೆ ಮಾತನಾಡಿ ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ ಪ್ರಮುಖರಾದ ಡಾ.ವೈಜಿನಾಥ ಬುಟ್ಟೆ, ಗುರುನಾಥ ದೇಶಮುಖ, ಜಗನ್ನಾಥ ದೇಶಮುಖ, ಮಲ್ಲಿಕಾರ್ಜುನ ಟಂಕಸಾಲೆ, ಅಮೃತರಾವ ಬಿರಾದಾರ, ವಿರೇಶ ಅಲಮಾಜೆ, ಗೋವಿಂದ ಪಾಟೀಲ್, ಶರಣಬಸವ ಸಾವಳೆ, ಮಹಾನಂದಾ ಎಂಡೆ, ಮಾರುತಿ ಚವ್ಹಾಣ, ವಿರೇಶ ಮೀಸೆ, ಕೈಲಾಸಪತಿ ಕೇದಾರೆ, ಶಮಶೊದ್ದಿನ್ ಮುಲ್ಲಾ, ಸಂದೀಪ ಪಾಟೀಲ್, ಅಶೋಕ ಶೆಂಬೆಳ್ಳೆ, ಅಂಬಾದಾಸ ನಳಗೆ, ಧನರಾಜ ಮಾನೆ, ಶಿವಕುಮಾರ ಪಾಟೀಲ್, ಝರೆಪ್ಪ ಬಿರಾದಾರ, ಗುರುನಾಥರೆಡ್ಡಿ ಕೌಡಾಳೆ, ಜ್ಞಾನೇಶ್ವರ ವಾಡೇಕರ್, ಎಂಡಿ ಸಾಜೀದ್, ಜಗನ್ನಾಥ ಬಿರಾದಾರ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ...

ಹುಲಸೂರ ತಾಲೂಕು ʼಬರʼ ಘೋಷಣೆಗೆ ಸೆ.27ರ ಗಡುವು: 6 ದಿನಗಳ ಧರಣಿ ಕೊನೆಗೊಳಿಸಿದ ರೈತರು

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ...