ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

Date:

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

- Advertisement -

ಬೀದರನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಗ್ರಾಮ ಪಂಚಾಯತಿಗಳ ಮೀಸಲಾತಿ ಪೂರ್ಣಗೊಂಡಿದೆ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಮೀಸಲಾತಿ ಪ್ರಕ್ರಿಯೆಯೂ ಮುಗಿದಿದ್ದು ಕರಡು ಅಧಿಸೂಚನೆ ಹೊರಡಿಸಲು ಸಿದ್ಧವಾಗಿದ್ದೇವೆ. ಆದರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕೇಂದ್ರ ಚುನಾವಣೆ ಆಯೋಗದ ಅನುಮತಿ ಕೇಳಲಾಗಿದ್ದು, ಅನುಮತಿ ಸಿಕ್ಕರೆ ತಕ್ಷಣ ಕರಡು ಅಧಿಸೂಚನೆ ಹೊರಡಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಕರಡು ಅಧಿಸೂಚನೆ ಪ್ರಕಟವಾದ ಬಳಿಕ ಆಕ್ಷೇಪಣೆ ಸಲ್ಲಿಸಲು ನಿಯಮಾನುಸಾರ ಕಾಲಾವಕಾಶ ನೀಡಿ, ಪ್ರಕ್ರಿಯೆಯ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿ, ಉಚ್ಚ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಕೆ ಮಾಡಲಾಗುವುದು. ಬಳಿಕ ರಾಜ್ಯ ಚುನಾವಣೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...