ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

Date:

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಪಟ್ಟಣದ ನಿವಾಸಿಗಳು ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವದ ಕುರಿತು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಮಲನಗರ ತಾಲೂಕಿನ ಹಾಲಹಳ್ಳಿ ಸಮೀಪದ ಬ್ಯಾರೇಜ್‌ನಲ್ಲಿ ನೀರು ಖಾಲಿಯಾಗಿರುವುದರಿಂದ ಕಳೆದ ಒಂದು ವಾರದಿಂದ ಪಟ್ಟಣಕ್ಕೆ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸುತ್ತಿದ್ದಾರೆ. ಆದರೆ, ಔರಾದ ಪಟ್ಟಣದಿಂದ ಕೇವಲ 5 ಕಿ.ಮೀ. ದೂರದಲ್ಲಿರುವ ತೇಗಂಪೂರ ಕೆರೆಯಿಂದ ನೀರು ಪೂರೈಸಲು ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ತೆರೆದ ಬಾವಿ ಮತ್ತು ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ ಲಭ್ಯವಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ದೂರಿದ್ದಾರೆ.

ತೇಗಂಪೂರ ಕೆರೆ ನೀರು ಪೂರೈಸಿ

ತೇಗಂಪೂರ ಕೆರೆ ಸಮೀಪದ ತೆರೆದ ಬಾವಿಯಿಂದ ತುರ್ತಾಗಿ ಔರಾದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಮಹಿಳೆಯರು ಮತ್ತು ಮಕ್ಕಳೊಂದಿಗೆ ಖಾಲಿ ಕೊಡಗಳನ್ನು ಹಿಡಿದು ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಅನೀಲ ಜಿರೋಬೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಅನೀಲ ದೇವಕತ್ತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...