ಗಡಿ ಜಿಲ್ಲೆಯಲ್ಲಿ ಕನ್ನಡ ಬಳಕೆ ಕಡ್ಡಾಯ ಜಾರಿಗೆ ಒತ್ತು : ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ

Date:

ಬೀದರ್ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದ್ದು, ಸರ್ಕಾರದ ನಿಯಮಾನುಸಾರ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕಾರಳೆ ಅವರು ಹೇಳಿದರು.

- Advertisement -

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕನ್ನಡದ ಬಳಕೆ ಕುರಿತು ಈಗಾಗಲೇ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೂ ಇನ್ನೂ ಕೆಲವು ಇಲಾಖೆಗಳಲ್ಲಿ ಕನ್ನಡದ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕಾತಿಯನ್ನು ಹೆಚ್ಚಿಸುವುದರ ಜೊತೆಗೆ ಕನ್ನಡದ ಅರಿವು ಮೂಡಿಸುವುದು ಅಷ್ಟೇ ಅತ್ಯಗತ್ಯವಾಗಿದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯ ಸುನೀಲ ಭಾವಿಕಟ್ಟಿ ಮಾತನಾಡಿ, “ಗಡಿ ಭಾಗದ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಬೇಕು. ಅಗತ್ಯವಿದ್ದಲ್ಲಿ ಒಂದೇ ಶಾಲೆಗೆ ಇಬ್ಬರು ಕನ್ನಡ ಶಿಕ್ಷಕರನ್ನು ನಿಯೋಜಿಸುವ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸಮಿತಿ ಸದಸ್ಯರಾದ ಟಿ.ಎನ್.ಮಚ್ಚೆ ಮಾತನಾಡಿ, “ವಿವಿಧ ಇಲಾಖೆಗಳ ಜೊತೆಗೆ ಆರೋಗ್ಯ ಇಲಾಖೆಯಲ್ಲಿಯೂ ಕನ್ನಡದ ಬಳಕೆ ಹೆಚ್ಚಾಗಬೇಕಿದೆ. ಆರೋಗ್ಯ ಸಿಬ್ಬಂದಿಗೆ ಕನ್ನಡದ ಅರಿವು ಮೂಡಿಸಿ, ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಸಂವಹನ ನಡೆಸುವಂತೆ ಕ್ರಮ ಕೈಗೊಳ್ಳಬೇಕು” ಎಂದು ಸಲಹೆ ನೀಡಿದರು.

ಸಮಿತಿಯ ಸದಸ್ಯ ರಜೀಯಾ ಬಳಕಟ್ಟೆ ಮಾತನಾಡಿ, “ಬ್ಯಾಂಕುಗಳಲ್ಲಿನ ಎಲ್ಲಾ ವ್ಯವಹಾರಗಳಲ್ಲಿ ಕನ್ನಡದ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಚಾಲನೆ

ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಸಭೆಯ ಉದ್ದೇಶ ಹಾಗೂ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...