ಸಾಲದ ಹಣ ಕೇಳಿದರೆ ಜೀವ ಬೆದರಿಕೆ ಆರೋಪ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್‌ಐಆರ್

Date:

ವಿಧಾನಸಭೆ ಚುನಾವಣೆ ವೇಳೆ ಪಡೆದಿದ್ದ ₹99 ಲಕ್ಷ ಸಾಲವನ್ನು ಮರಳಿ ನೀಡಲಿಲ್ಲವೆಂಬ ಆರೋಪದಡಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಬಸವಕಲ್ಯಾಣ ನಗರದ ಜೈ ಶಂಕರ್ ಕಾಲೋನಿಯ ನಿವಾಸಿ ಸಂಜುಕುಮಾರ್ ಸುಗುರೆ ಎಂಬವರು ದೂರು ನೀಡಿದ್ದು, ಬೆಂಗಳೂರಿನ ಎಸಿಜೆಎಂ ನ್ಯಾಯಾಲಯ ಆದೇಶದ ಮೇರೆಗೆ ಶನಿವಾರ ಬಸವಕಲ್ಯಾಣದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶಾಸಕ ಶರಣು ಸಲಗರ್ ಅವರು 2023ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣೆಯ ತಯಾರಿಯಲ್ಲಿದ್ದಾಗ ಜನವರಿ 2023ರಿಂದ ಫೆಬ್ರವರಿ 2023ರ ಎರಡನೇ ವಾರದವರೆಗೆ ಸಲಗರ್ ಅವರಿಗೆ ಒಟ್ಟು 99 ಲಕ್ಷ ರೂಪಾಯಿ ಮುಂಗಡವಾಗಿ ಸಾಲ ನೀಡಲಾಗಿತ್ತು. ಶರಣು ಸಲಗರ್ ಅವರು ಈ ಸಾಲವನ್ನು 6 ತಿಂಗಳಲ್ಲಿ ಮರುಪಾವತಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಸಾವಲವನ್ನು ಮರುಪಾವತಿ ಮಾಡಲಿಲ್ಲ” ಎಂದು ಸಂಜುಕುಮಾರ್ ಸುಗುರೆ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

“ಈ ಹಿಂದೆಯೂ ನನ್ನ ಬಳಿ ಹಲವಾರು ಬಾರಿ ಹಣ ಪಡೆದಿದ್ದರು. ಆ ಹಣವನ್ನು ವಾಪಸ್ ಮರಳಿಸಿದ್ದರು. ಅದೇ ನಂಬಿಕೆಯ ಮೇಲೆ ಈ ಸಾಲವನ್ನು ನೀಡಲಾಗಿತ್ತು. ಅಲ್ಲದೆ ಆತ ನಮ್ಮ ದೂರದ ಸಂಬಂಧಿ, ಇದೇ ನಂಬಿಕೆಯ ಮೇಲೆ ಹಣದ ಸಹಾಯ ಮಾಡಲಾಗಿತ್ತು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಆದರೆ, ಹಲವು ದಿನಗಳು ಕಳೆದರೂ ವಾಪಸ್ ಹಣ ನೀಡದೇ ಸತಾಯಿಸಲಾಗಿತ್ತು. ಬಳಿಕ ಸೆ. 14ರಂದು ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶರಣು ಸಲಗರ್ ಹಣ ನೀಡಲು ಒಪ್ಪಿಕೊಂಡು ಚೆಕ್ ನೀಡಿದ್ದಾರೆ. ಆದರೆ, ಚೆಕ್ ಬ್ಯಾಂಕ್‌ಗೆ ಹಾಕಿದಾಗ ಖಾತೆ ಮುಚ್ಚಿರುವ ಸಂಗತಿ ಬೆಳಕಿಗೆ ಬಂದಿದ್ದು, ಚೆಕ್‌ ಬೌನ್ಸ್‌ ಆಗಿದೆ” ಎಂದು ದೂರಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪಿಎಸ್‌ಐ ಹಗರಣ; ಜೈಲಲ್ಲಿ ಆರ್ ಡಿ ಪಾಟೀಲ ಮತ್ತೆ ಕಿರಿಕ್

“ಕೊಟ್ಟ ಹಣವನ್ನು ವಾಪಸ್‌ ಕೊಡುವಂತೆ ಕೇಳಲು ಶರಣು ಸಲಗರ್ ಅವರ ಮನೆಗೆ ಹೋದ ನನ್ನ ಪತ್ನಿ ಹಾಗೂ ಪುತ್ರನಿಗೆ ಹಣ ನೀಡದೇ ಇಬ್ಬರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಜೀವ ಬೇದರಿಕೆ ಹಾಕಿದ್ದಾರೆ. ಆರೋಪಿ ಸ್ಥಾನದಲ್ಲಿ ಇರುವ ಶಾಸಕ ಶರಣು ಸಲಗರ್, ಮೋಸ ಮಾಡುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ 74, 109, 314(4), 318, 351 ಮತ್ತು 352 ಬಿಎನ್ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಭಾಲ್ಕಿ | ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ನೆಲೆ ಅರಿಯಬೇಕು: ಧನಲಕ್ಷ್ಮಿ ಪಾಟೀಲ್

ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...