ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ನೀಡಿ : ಮಠಾಧೀಶರ ಒತ್ತಾಯ

Date:

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರಕಿಸುವ ಉದ್ದೇಶದಿಂದ ಅರಣ್ಯ, ಜೀವಿಶಾಸ್ತ್ರ, ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕೆಂದು ಬೀದರ ಜಿಲ್ಲೆಯ ಮಠಾಧೀಶರು ಜಂಟಿಯಾಗಿ ಬೇಡಿಕೆಯಿಟ್ಟಿದ್ದಾರೆ.

- Advertisement -

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಲಬರ್ಗಾ ರಾಚೋಟೇಶ್ವರ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಮಾತನಾಡಿ, “ಈಶ್ವರ ಖಂಡ್ರೆಯವರು ಜಾತಿ, ಧರ್ಮ, ಮತ ಹಾಗೂ ಪಂಥಗಳ ಭೇದವಿಲ್ಲದೆ ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣುವ ಪ್ರಗತಿಶೀಲ ನಾಯಕರಾಗಿದ್ದಾರೆ. ಈಗ ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸರ್ಕಾರದಲ್ಲಿ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಈ ಭಾಗ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂಬ ವಿಶ್ವಾಸ ನಮಗಿದೆ. ಉತ್ತರ ಕರ್ನಾಟಕ, ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕದವರಾದ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಭಾಲ್ಕಿಯ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಬೀದರ್‌ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರಭಾವಿ ನಾಯಕರಾದ ಈಶ್ವರ ಖಂಡ್ರೆಯವರಿಗೆ ಉಪಮುಖ್ಯಮಂತ್ರಿಯಾಗಿ ಮಾಡಲೇಬೇಕು. ಸರ್ವ ಸಮಾಜವನ್ನು ಪ್ರತಿನಿಧಿಸುವ ಧೀಮಂತ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ. ಸಿದ್ದರಾಮಯ್ಯ ನೇತ್ರತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು ನೂತನ ಅನುಭವ ಮಂಟಪ ನೀಲಿ ನಕಾಶೆ ತಯ್ಯಾರಿಸಿದವರು ಖಂಡ್ರೆಯವರು. ಈ ಹಿಂದೆಯೂ ಈಶ್ವರ ಖಂಡ್ರೆ ಅವರಿಗೆ ಡಿಸಿಎಂ ಮಾಡಬೇಕೆಂದು ಕರೆ ನೀಡಿದ್ದೇವೆ. ಈಗಲೂ ಅದೇ ಬೇಡಿಕೆ ಇದೆ. ನಮ್ಮ ಮನವಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸ್ಪಂದಿಸದಿದ್ದರೆ ಅವರಿಗೂ ಭೇಟಿ ನೀಡುವ ಬಗ್ಗೆ ಯೋಚಿಸುತ್ತೇವೆʼ ಎಂದರು.

ಬೀದರ ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಮಾತನಾಡಿ, ʼಇಡೀ ಜೀವನವನ್ನು ಪಕ್ಷ ಸಂಘಟನೆಗಾಗಿ ಹಗಲಿರಳು ಶ್ರಮಿಸುತ್ತಿರುವ ದಕ್ಷ, ಪ್ರಾಮಾಣಿಕ ನಾಯಕರಾದ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ದೊರೆತಲ್ಲಿ ಬೀದರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದ್ದು, ಈ ಭಾಗಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರೆಯಲಿದೆ. ಈಶ್ವರ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ನಾಡಿನ ಮಠಾಧೀಶರ ಪರವಾಗಿ ಕಳಕಳಿಯ ಮನವಿ ಮಾಡುತ್ತೇವೆʼ ಎಂದರು.

WhatsApp Image 2026 05 30 at 4.42.08 PM

ಮುಚಳಂಬದ ಮಠದ ಪ್ರಣವಾನಂದ ಮಹಾಸ್ವಾಮೀಜಿ ಮಾತನಾಡಿ, ʼರಾಜ್ಯದ ವಿವಿಧ ಭಾಗಗಳಿಗೆ ಅವಕಾಶಗಳು ದೊರೆತಿರುವಂತೆ ಕಲ್ಯಾಣ ಕರ್ನಾಟಕ ಭಾಗಕ್ಕೂ ಸಮಾನ ಅವಕಾಶ ಕಲ್ಪಿಸಬೇಕಾಗಿದೆ. ವಿಶೇಷವಾಗಿ ಹಿಂದುಳಿದ ಬೀದರ ಜಿಲ್ಲೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ಮಠಗಳ 18ಕ್ಕೂ ಹೆಚ್ಚು ಪೂಜ್ಯರು ಈಶ್ವರ ಖಂಡ್ರೆಯವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಸರ್ಕಾರವನ್ನು ಒಕ್ಕೊರಲಿನಿಂದ ಆಗ್ರಹಿಸಿದರು.

ಇದನ್ನೂ ಓದಿ : ಬೀದರ್| ಎಫ್‌ಐಡಿ ರದ್ದು, ರಸಗೊಬ್ಬರ ಕೊರತೆ ನಿವಾರಣೆಗೆ ರೈತ ಸಂಘ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ಜಯಶಾಂತಲಿಂಗ ಸ್ವಾಮಿಗಳು ಹಿರೇನಾಗಾಂವ, ಚನ್ನಮಲ್ಲ ಸ್ವಾಮೀಜಿ ಹುಡಗಿ, ಸಿದ್ದೇಶ್ವರ ಶಿವಾಚಾರ್ಯರು ಕಿಟ್ಟಾ, ಹೊನ್ನಲಿಂಗ ಸ್ವಾಮೀಜಿ ಸಿಂಧನಕೇರಾ, ಗಂಗಾಧರ ಶಿವಾಚಾರ್ಯರು ಲಾಡಗೇರಿ, ಶಿವಶಂಕರ ಸ್ವಾಮೀಜಿ ಯದಲಾಪುರ, ಸಿದ್ಧಲಿಂಗ ಸ್ವಾಮೀಜಿ ಸದಲಾಪುರ, ಶಿವಕುಮಾರ ಸ್ವಾಮಿಗಳು ಸೊಂತ, ಶಾಂತಲಿಂಗ ಸ್ವಾಮಿ ಖೇಳಗಿ, ಶರಣಕುಮಾರ ದೇವರು ಮರಕುಂದಾ, ಪ್ರಭುಕುಮಾರ ಸ್ವಾಮಿ ಬೀದರ, ಬಸವಲಿಂಗದೇವರು ಖಟಕ ಚಿಂಚೋಳಿ, ಸಿದ್ಧಬಸವ ಸ್ವಾಮೀಜಿ, ಗುರುಪಾದ ಸ್ವಾಮೀಜಿ ಚಿಲ್ಲರ್ಗಿ, ಚನ್ನಬಸವ ಸ್ವಾಮೀಜಿ ಮಂಠಾಳ, ಮರುಳಾರಾಧ್ಯ ಸ್ವಾಮೀಜಿ ಚಿಟಗುಪ್ಪ, ಚಂದ್ರಶೇಖರ ಶಿವಾಚಾರ್ಯರು ಬೇಮಳಖೇಡಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಭಾರತವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಆರ್ಥಿಕ ಪಾಲುದಾರ: ಪ್ರಧಾನಿ ಮೋದಿ

ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು...