ಭೀಕರ ಅಪಘಾತ | ತೆಲಂಗಾಣಕ್ಕೆ ಕೂಲಿ ಕೆಲಸಕ್ಕೆ ತೆರಳಿದ ಆರು ಜನ ಕಾರ್ಮಿಕರ ಸಾವು

Date:

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್‌ ಸಮೀಪದ ಹೈದರಾಬಾದ್‌-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ ಹಾಗೂ‌ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

- Advertisement -

ಮೃತರೆಲ್ಲರೂ ಬೀದರ್‌ ತಾಲೂಕಿನ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ. ಟಂ ಟಂ ಚಾಲಕ ದೇವಿದಾಸ ಸೇರಿದಂತೆ ಕೂಲಿ ಕಾರ್ಮಿಕರಾದ ರೇಖಾ, ರೇಷ್ಮಾ, ಕವಿತಾ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಮೃತ ಕಾರ್ಮಿಕರು ಪ್ರತಿದಿನ ಕೂಲಿ ಕೆಲಸಕ್ಕೆಂದು ತೆಲಂಗಾಣಕ್ಕೆ ತೆರಳುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಹೋಗಿ ಸಂಜೆ ವಾಪಸ್‌ ಊರಿಗೆ ಬರುವಾಗ ಟ್ಯಾಂಕರ್ ಲಾರಿ ಹಾಗೂ ಟಂಟಂ ನಡುವೆ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ. ಆಟೊದಲ್ಲಿ ಒಟ್ಟು 11 ಜನ ಕಾರ್ಮಿಕರಿದ್ದರು ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೆಲ ಕಾರ್ಮಿಕರ ಮೃತದೇಹ ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದವು. ಗಂಭೀರ ಗಾಯಗೊಂಡವರನ್ನು ಬೀದರ್‌ ಬ್ರಿಮ್ಸ್‌ಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Advertisements

ಘಟನೆಯ ಕುರಿತು ಬೀದರ್‌ ಹಾಗೂ ತೆಲಂಗಾಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ರಸ್ತೆ ಅಪಘಾತದಲ್ಲಿ 5 ಸಾವು: ಈಶ್ವರ ಖಂಡ್ರೆ ಸಂತಾಪ

ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆ ಸಿಂಧೋಲ ಗ್ರಾ. ಪಂ. ವ್ಯಾಪ್ತಿಯ ರಾಜಗೀರಾ ಗ್ರಾಮದ 5 ಜನರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆಯ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಬೀದರನಲ್ಲಿ ಹೇಳಿಕೆ ನೀಡಿರುವ ಅವರು, ಇದು ಅತ್ಯಂತ ಹೃದಯ ವಿದ್ರಾವಕ ಘಟನೆ, ನೆರೆಯ ತೆಲಂಗಾಣಕ್ಕೆ ಹೋಗಿದ್ದವರು, ಮರಳಿ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ಇದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲು ತೆಲಂಗಾಣದ ಆಡಳಿತದೊಂದಿಗೆ ಸತತ ಸಂಪರ್ಕದಲ್ಲಿ ಇರುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ಸಿಗಲಿ: ವಿಜಯಲಕ್ಷ್ಮಿ ಬಾಳೆಕುಂದ್ರಿ

ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆಯೂ ಬೀದರ್ ಜಿಲ್ಲಾಡಳಿತಕ್ಕೆ ಅವರು ಸೂಚನೆ ನೀಡಿದ್ದಾರೆ. ಈ ನೋವಿನ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ಕರ್ನಾಟಕ ಸರ್ಕಾರ ನಿಲ್ಲುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...