ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು.
ಬಳಿಕ ಆನಂದ ದೇವಪ್ಪ ಮಾತನಾಡಿ, “ಯಾವುದೇ ಸಂಘ-ಸಂಸ್ಥೆ ಬೆಳೆಯಬೇಕಾದರೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗುವುದು ಅಗತ್ಯವಾಗಿದೆ. ಸಂಘದ ನಿಯಮಗಳನ್ನು ಚಾಚೂತಪ್ಪದೆ ಪಾಲಿಸುವುದರ ಜತೆಗೆ ನಿಯಮಿತವಾಗಿ ಸಭೆ-ಸಮಾರಂಭಗಳನ್ನು ನಡೆಸಬೇಕು. ಪತ್ರಕರ್ತರ ಸಂಘಕ್ಕೆ ತನ್ನದೇ ಆದ ಇತಿಹಾಸವಿದೆ. ಸಂಘವು ಸದಾ ಪತ್ರಕರ್ತರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳನ್ನು ನಡೆಸದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.
ಹುಲಸೂರಿನ ಗುರು ಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಜಿಲ್ಲಾ ಪದಾಧಿಕಾರಿಗಳಿಗೆ ಸನ್ಮಾನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಖಜಾಂಚಿ ಸುನೀಲ ಕುಲಕರ್ಣಿ, ಕಾರ್ಯದರ್ಶಿ ಸಂತೋಷ ಚೆಟ್ಟಿ ಹಾಗೂ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ ಪಾಟೀಲ ಅವರನ್ನು ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಸನ್ಮಾನಿಸಿ ಆಶೀರ್ವದಿಸಿದರು.
ಇದನ್ನೂ ಓದಿ : ಬೀದರ್ | ಪ್ರತೀ ಮನೆಯಲ್ಲೂ ಇರಲಿ ಗ್ರಂಥಾಲಯ: ಶೈಲಜಾ ಹುಡುಗೆ
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಖಜಾಂಚಿ ಸುನೀಲ ಕುಲಕರ್ಣಿ, ಕಾರ್ಯದರ್ಶಿ ಸಂತೋಷ ಚೆಟ್ಟೆ, ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ ಪಾಟೀಲ, ವ್ಯವಸ್ಥಾಪಕ ರಾಜಕುಮಾರ ಸಾಗರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಸಾಹಿತಿ ಡಾ.ಬಸವರಾಜ ಬಲ್ಲೂರ, ಶಿವರಾಜ ಖಪಲೆ, ಮಹೇಶ ಹುಲಸೂರಕರ, ಬಸವಕುಮಾರ ಕೌಟೆ, ವೀರಶೆಟ್ಟಿ ಕರಕಲ್ಲೆ, ದತ್ತಾತ್ರಿ ಸಾಬನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.




