ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

Date:

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕಿ, ಅಡುಗೆ ಸಹಾಯಕಿ ಹಾಗೂ ಚಾಲಕ ಗಾಯಗೊಂಡಿರುವ ಘಟನೆ ಹುಲಸೂರು ಸಮೀಪದ ಹಾಲಹಳ್ಳಿ ಕ್ರಾಸ್ ಬಳಿ ಸೋಮವಾರ ನಡೆದಿದೆ.

- Advertisement -

ಹುಲಸೂರಿನಿಂದ ಕೆಸರ ಜವಳಗಾ, ಕದರಾಬಾದವಾಡಿ ಮಾರ್ಗವಾಗಿ ಹಾಲಹಳ್ಳಿ ಗ್ರಾಮಕ್ಕೆ ಸಂಜೆ ತೆರಳುತ್ತಿದ್ದ ಶಾಲಾ ಬಸ್ ಹಾಲಹಳ್ಳಿ ಕ್ರಾಸ್ ತಿರುವಿನಲ್ಲಿ ಕಿರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬಸ್‌ನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಮೂವರು ಶಿಕ್ಷಕಿಯರು, ಒಬ್ಬರು ಅಡುಗೆ ಸಿಬ್ಬಂದಿ ಹಾಗೂ ಚಾಲಕ ಪ್ರಯಾಣಿಸುತ್ತಿದ್ದರು. ಬಸ್ ಹಳ್ಳಕ್ಕೆ ಉರುಳುತ್ತಿದ್ದಂತೆ ವಿದ್ಯಾರ್ಥಿಗಳು ಭಯದಿಂದ ಕಿರುಚಾಡಿದ್ದಾರೆ. ಇದನ್ನು ಗಮನಿಸಿದ ಹಾಲಹಳ್ಳಿ ಗ್ರಾಮದ ಯುವಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಬಸ್‌ನಲ್ಲಿದ್ದ ಮಕ್ಕಳನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಇತರರಿಗೆ ಹುಲಸೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಸವಕಲ್ಯಾಣ ಹಾಗೂ ಮಹಾರಾಷ್ಟ್ರದ ಉಮರ್ಗಾ, ಬ್ರಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಸ್ಥಳೀಯ ಶಾಸಕ ಶರಣು ಸಲಗರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗಾಯಾಳು ವಿದ್ಯಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಹುಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...