ಬೀದರ್‌ | ಹಾವು ಕಡಿದು ವಾಟರ್‌ಮ್ಯಾನ್‌ ಸಾವು

Date:

ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ವಾಟರ್‌ಮ್ಯಾನ್ ಭೀಮ ಮಾಧವರಾವ ಜಾಧವ್ (48) ಅವರು ನಾಗರ ಪಂಚಮಿ ಹಬ್ಬದ ದಿನವಾದ ಸೋಮವಾರ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಗ್ರಾಮದ ಹೊರವಲಯದ ಹಾಲಹಳ್ಳಿ ರಸ್ತೆಯಲ್ಲಿರುವ ಮಹಾದೇವ ಮಂದಿರದ ಸಮೀಪದ ನೀರಿನ ಟ್ಯಾಂಕರ್‌ನ ಕೆಳಗೆ ನೀರು ಬಂದ್ ಮಾಡಲು ತೆರಳಿದ್ದ ವೇಳೆ ಭೀಮ ಜಾಧವ್ ಅವರಿಗೆ ಹಾವು ಕಡಿದಿದೆ. ತೀವ್ರ ವಿಷದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೃಹತ್‌ ಗಾತ್ರದ ನೀರಿನ ಟ್ಯಾಂಕರ್‌ನ ಕೆಳಭಾಗದಲ್ಲಿ ಹುಲ್ಲು-ಕಂಟಿ ಬೆಳೆದಿತ್ತು. ಹುಲ್ಲು ಕಟಾವು ಮಾಡಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಹೀಗಾಗಿ ಟ್ಯಾಂಕರ್ ಕೆಳಗೆ ಅಡಗಿದ್ದ ಹಾವು ಕಡಿದು ವಾಟರ್‌ಮ್ಯಾನ್ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹುಲಸೂರು ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್‌ಐ ಪಂಡಿತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...