ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹ : 5ನೇ ದಿನ ಪೂರೈಸಿದ ಧರಣಿ ಸತ್ಯಾಗ್ರಹ

Date:

ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ನವಕಲ್ಯಾಣ ಕರ್ನಾಟಕ ಮಹಾಸಭಾ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ 5ನೇ ದಿನ ಪೂರೈಸಿತು.

- Advertisement -

ಅಹೋರಾತ್ರಿ ಧರಣಿಯ 5ನೇ ದಿನ ರೈತ ಹೋರಾಟಗಾರರು ಹಲಗೆ ಚಳುವಳಿ ನಡೆಸಿ ಆಕ್ರೋಶ ಹೊರಹಾಕಿದರು. ಅಲ್ಲದೆ ಧರಣಿ ಸ್ಥಳದಲ್ಲಿ ಮಹಿಳಾ ಕಲಾತಂಡದಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದೆ. ರೈತರ ಈ ವಿನೂತನ ಹೋರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಜಿಲ್ಲೆಯ ರೈತ ಮುಖಂಡರು, ವಿವಿಧ ಭಾಗದ ರೈತರು, ಮಹಿಳೆಯರು, ಯುವಕರು ಪ್ರತಿದಿನ ಪಾಲ್ಗೊಂಡು ಬೆಂಬಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತಡೋಳದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಭಾನುವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ರೈತರ ರಕ್ಷಣೆಗೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕು. ಹುಲಸೂರ ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಲು ಎದುರಾಗಿರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಬೇಕು” ಒತ್ತಾಯಿಸಿದರು.

“ಇಡೀ ಬೀದರ್ ಜಿಲ್ಲೆ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ರೈತರ ವಿಚಾರದಲ್ಲಿ ರಾಜಕಾರಣ ಮಾಡದೆ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಹುಲಸೂರ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಹೇಳಿದರು.

WhatsApp Image 2026 09 13 at 6.15.05 PM

“ಜಗತ್ತು ಎಲ್ಲದರ ಮೇಲೂ ಅವಲಂಬಿತವಾಗಿದೆ. ಆದರೆ ರೈತ ಮಾತ್ರ ಯಾರ ಮೇಲೂ ಅವಲಂಬಿತನಾಗಿಲ್ಲ. ಬದಲಾಗಿ ಜನರು, ಜಾನುವಾರುಗಳು ಸೇರಿದಂತೆ ಅನೇಕ ಜೀವಿಗಳು ರೈತರನ್ನೇ ಆಶ್ರಯಿಸಿಕೊಂಡಿವೆ. ನಮ್ಮನ್ನು ಆಶ್ರಯಿಸಿರುವ ಜೀವಿಗಳಿಗಾಗಿ ರೈತರು ಬದುಕಬೇಕಾಗಿದೆ. ರೈತರ ಹಕ್ಕುಗಳನ್ನು ಪಡೆಯಲು ಹೋರಾಟ ಅನಿವಾರ್ಯವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

“ರೈತರ ಹೋರಾಟ ಸಂಘಟಿತವಾಗಿ, ಗಟ್ಟಿಯಾದ ಧ್ವನಿಯಲ್ಲಿ ನಡೆದಾಗ ಮಾತ್ರ ಬೇಡಿಕೆಗಳು ಈಡೇರಲು ಸಾಧ್ಯ. ಆದರೆ ಹೋರಾಟದ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳಬಾರದು. ಒಂದು ಕ್ಷಣದ ಆವೇಶವೂ ಜೀವನ ಹಾಗೂ ಸಂಸಾರವನ್ನು ಹಾಳು ಮಾಡಬಹುದು. ಶಾಂತಿಯುತವಾಗಿ, ಸಂಘಟಿತವಾಗಿ ಹೋರಾಟ ಮುಂದುವರಿಸಬೇಕು” ಎಂದು ಸಲಹೆ ನೀಡಿದರು.

ಬಳಿಕ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಹೋರಾಟ ನಿರತ ರೈತರೊಂದಿಗೆ ಕೃಷಿ ಕುರಿತು ಸಂವಾದ ನಡೆಸಿದರು. ಆಧುನಿಕ, ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ಚರ್ಚಿಸಿದ ಅವರು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ವಿಧಾನಗಳು ಹಾಗೂ ಹೆಚ್ಚು ಆದಾಯ ತರುವ ಬೆಳೆಗಳ ಕೃಷಿ ಕುರಿತು ರೈತರಿಗೆ ಮಾಹಿತಿ ನೀಡಿದರು.

ಶಾಸಕ ಶರಣು ಸಲಗರ ಭೇಟಿ

ಹುಲಸೂರು ತಾಲೂಕು ಬರಗಾಲ ತಾಲೂಕೆಂದು ಘೋಷಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದಂದು (ಸೆ.12) ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಂಪೂರ್ಣ ಬೆಂಬಲ ಸೂಚಿಸಿದರು.

WhatsApp Image 2026 09 13 at 6.35.14 PM
ಶಾಸಕ ಶರಣು ಸಲಗರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಬಳಿಕ ಶಾಸಕ ಶರಣು ಸಲಗರ ಮಾತನಾಡಿ, “ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಉಪಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸುವ ಮೂಲಕ ಹುಲಸೂರು ತಾಲೂಕನ್ನು ಆದಷ್ಟು ಬೇಗ ಬರಗಾಲ ತಾಲೂಕೆಂದು ಘೋಷಿಸುವಂತೆ ಮನವಿ ಮಾಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದರು.

“ರೈತರು ನಡೆಸುತ್ತಿರುವ ಈ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಬೇಕು. ಈ ಹೋರಾಟದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ. ಹುಲಸೂರು ತಾಲೂಕನ್ನು ಬರಗಾಲ ತಾಲೂಕೆಂದು ಘೋಷಿಸುವವರೆಗೆ ಯಾವುದೇ ಕಾರಣಕ್ಕೂ ಸುಮ್ಮನೆ ಕೂರುವುದಿಲ್ಲ. ರೈತರ ಹಿತಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತೇನೆ” ಎಂದು ಭರವಸೆ ನೀಡಿದರು.

ನಾಳೆ ರೈತ ಮುಖಂಡರ ಸಭೆ

ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮುಂದಿನ ರೂಪುರೇಷೆಗಳ ಹಾಗೂ ಶಾಸಕ ಶರಣು ಸಲಗರ ಅವರು ಭರವಸೆ ನೀಡಿ ಧರಣಿ ಹಿಂಪಡೆಯುವಂತೆ ತಿಳಿಸಿದ ಬಗ್ಗೆ ಚರ್ಚಿಸಲು ನಾಳೆ ಮಧ್ಯಾಹ್ನ ತಾಲೂಕಿನ ರೈತ ಮುಖಂಡರ ಸಭೆ ನಡೆಯಲಿದೆ ಎಂದು ಧರಣಿನಿರತ ರೈತ ಮುಖಂಡರು ತಿಳಿಸಿದ್ದಾರೆ.

ಹೋರಾಟಕ್ಕೆ ಬೆಂಬಲ ಸೂಚಿಸಿದ ಬಸವಕೇಂದ್ರ

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ರೈತ ಸಂಘದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಬಸವಕೇಂದ್ರ ಹುಲಸೂರ ತಾಲೂಕು ಘಟಕ ಬೆಂಬಲ ಸೂಚಿಸಿದೆ.

WhatsApp Image 2026 09 13 at 7.08.32 PM

ಈ ಕುರಿತು ಬಸವಕೇಂದ್ರ ತಾಲೂಕು ಘಟಕ ಅಧ್ಯಕ್ಷ ಆಕಾಶ ಖಂಡಾಳೆ ಸೇರಿದಂತೆ ಪದಾಧಿಕಾರಿಗಳಾದ ಮಹಾದೇವ ಮಹಾಜನ, ಮಲ್ಲಿಕಾರ್ಜುನ ದೇವಪ್ಪ, ರಾಜಕುಮಾರ ತೊಂಡಾರೆ, ರವೀಂದ್ರ ಬಿರಾದರ, ಶಿವರಾಜ ಬೇಲೂರ, ಮನ್ಮಥ ತೋಗಲೂರ, ಅನೀಲಕುಮಾರ, ಪ್ರಶಾಂತ, ಷಣ್ಮುಖ, ಶಿವಪುತ್ರ, ಸಚಿವ ಕೌಟೆ ಮತ್ತಿತರರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಧರಣಿಗೆ ಸಂಪೂರ್ಣವಾಗಿ ಬೆಂಬಲಿಸಿ ಸಮರ್ಥನೆ ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಚವರೆ, ಉಪಾಧ್ಯಕ್ಷ ಸುನೀಲ್ ಭುಜಂಗೆ, ಕಾರ್ಯದರ್ಶಿ ರಾಜಕುಮಾರ ನಿಡೋದೆ, ರೈತ ಮುಖಂಡರಾದ ಸುಧೀರ ಕಾಡಾದಿ, ರಮೇಶ ಭೂಪಳೆ, ಸೋಮನಾಥ ನಂದಗೆ, ಶಿವಕುಮಾರ್ ಕನ್ನಾಡೆ, ಚಂದ್ರಕಾಂತ ದೇಟ್ನೇ, ಅಪ್ಪಾರಾವ್ ಖಂಡಾಳೆ, ರಾಜಪ್ಪ ಮಂಗಾ, ರಾಜಕುಮಾರ ತೊಂಡಾರೆ, ಪ್ರಭಾತರಾವ್ ಭೂಸಾರೆ, ನೂರ್‌ಅಹ್ಮದ್, ಬಸವರಾಜ ಆದ್ಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...