ಹುಲಸೂರ | ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ : ತಹಸೀಲ್ದಾರ್ ಕಚೇರಿ ಸ್ವಚ್ಛಗೊಳಿಸಿ ವಿನೂತನ ಪ್ರತಿಭಟನೆ

Date:

ಹುಲಸೂರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆರಂಭಿಸಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಎರಡನೇ ದಿನವೂ ಮುಂದುವರೆಯಿತು.

- Advertisement -

ನವಕಲ್ಯಾಣ ಕರ್ನಾಟಕ ಮಹಾಸಭಾ ಕಾರ್ಯದರ್ಶಿ ಡಾ.ಶಂಕರಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ರೈತರು ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮುಖಾಂತರ ಸರ್ಕಾರದ ಗಮನ ಸೆಳೆಯುತ್ತಿದ್ದು, ಹೋರಾಟಗಾರರು ಗುರುವಾರ ಬೆಳಿಗ್ಗೆ ಹುಲಸೂರು ತಹಸೀಲ್ ಕಚೇರಿ ಎದುರುಗಡೆ ಆವರಣ ಸ್ವಚ್ಛಗೊಳಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಶ್ರಮದಾನ ನಡೆಸಿದ ರೈತರು, ರೈತ ಕಾಯಕಯೋಗಿ, ಶ್ರಮಜೀವಿ ಎಂಬ ಸಂದೇಶವನ್ನು ಸಾರಿದರು. ರೈತರು ಕೇವಲ ಕೃಷಿ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಶ್ರಮದ ಮೂಲಕ ಕೊಡುಗೆ ನೀಡುತ್ತಿದ್ದಾರೆ ಎಂಬುದನ್ನು ಈ ಮೂಲಕ ಬಿಂಬಿಸಿದರು.

ಹುಲಸೂರ ತಾಲೂಕಿನಲ್ಲಿ ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಹುಲಸೂರ ತಾಲೂಕು ಸೇರಿದಂತೆ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಸೌಲಭ್ಯಗಳನ್ನು ಒದಗಿಸಬೇಕು. ತಮ್ಮ ಬೇಡಿಕೆ ಈಡೇರುವವರೆಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಪಟ್ಟು ಹಿಡಿದಿದ್ದಾರೆ.

ರೈತರ ತಾಳ್ಮೆ ಪರೀಕ್ಷಿಸಬಾರದು: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ

ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಬಸವಕಲ್ಯಾಣಸ ಘನಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ಸರ್ಕಾರಗಳು ರೈತಪರವಾದ ಚಿಂತನೆ ಹೊಂದಬೇಕು. ಸಂಕಷ್ಟದಲ್ಲಿರುವ ರೈತರ ತಾಳ್ಮೆಯನ್ನು ಪರೀಕ್ಷಿಸುವ ಕೆಲಸಕ್ಕೆ ಸರ್ಕಾರ ಮುಂದಾಗಬಾರದು. ಹುಲಸೂರು ತಾಲೂಕಿನ ರೈತರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

WhatsApp Image 2026 09 10 at 9.41.16 PM

ಎತ್ತುಗಳೊಂದಿಗೆ ಧರಣಿಗೆ ಬಂದ ರೈತರು

ಗುರುವಾರ ಹೋಳಾ ಹಬ್ಬದ ಹಿನ್ನೆಲೆ ಹುಲಸೂರ ಪಟ್ಟಣದ ರೈತರು ಎತ್ತುಗಳಿಗೆ ಸಿಂಗಾರ ಮಾಡಿ ಧರಣಿ ಸ್ಥಳಕ್ಕೆ ಕರೆ ತಂದರು. ರೈತರು ತಮ್ಮ ಮನೆಗಳಿಂದಲೇ ಊಟದ ಬುತ್ತಿ ತಂದು ಹೋರಾಟ ವೇದಿಕೆಯಲ್ಲಿ ಸಾಮೂಹಿಕವಾಗಿ ಊಟ ಮಾಡಿದರು. ಈ ಮೂಲಕ ರೈತರಲ್ಲಿ ಇರುವ ಪರಸ್ಪರ ಸಹಕಾರ, ಒಗ್ಗಟ್ಟು ಹಾಗೂ ಹೋರಾಟದ ಸಂಕಲ್ಪವನ್ನು ಪ್ರದರ್ಶಿಸಿದರು.

ಇದನ್ನೂ ಓದಿ : ಬೀದರ್‌ | ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ : ಕಿರಿಯ ಮೇಲ್ವಿಚಾರಕಿ ಅಮಾನತು

ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖರಾದ ವೀರಾರೆಡ್ಡಿ ಪಾಟೀಲ್‌, ಸಂತೋಷ ಗುದಗೆ, ರುದ್ರಯ್ಯಾ ಸ್ವಾಮಿ, ಬಸವರಾಜ ಚೌರೆ, ನೂರ್‌ ಅಹ್ಮದ್‌, ನಾಗಯ್ಯಾ ಸ್ವಾಮಿ, ಸುನೀಲ್‌ ಭುಜಂಗೆ ಸೇರಿದಂತೆ ತಾಲೂಕಿನ ರೈತರು ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕಬ್ಬು ತೂಕ ಮೋಸಕ್ಕೆ ಬ್ರೇಕ್; ಜಿಲ್ಲೆಯ 9 ಸಕ್ಕರೆ ಕಾರ್ಖಾನೆಗಳ ತಪಾಸಣೆ

ಕಬ್ಬು ಅರೆಯುವ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಅನ್ಯಾಯವಾಗದಂತೆ...

ಬೀದರ್‌ | ಪ್ರಭುರಾವ ಕಂಬಳಿವಾಲೆ ಪ್ರತಿಷ್ಠಾನದಿಂದ ಸಮ್ಮೇಳನ ಸರ್ವಾಧ್ಯಕ್ಷರಿಗೆ ಸನ್ಮಾನ

ನವೆಂಬರ್ 14 ಮತ್ತು 15ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆಯಲಿರುವ...

2013ರ ಅತ್ಯಾಚಾರ ಪ್ರಕರಣ: ಪತ್ರಕರ್ತ ತರುಣ್ ತೇಜ್‌ಪಾಲ್‌ ಶಿಕ್ಷೆ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ

2013ರಲ್ಲಿ ಕಿರಿಯ ಸಹೋದ್ಯೋಗಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, 'ತೆಹಲ್ಕಾ'...

ಭಾಲ್ಕಿ | ದಾಸೋಹ ಅಹಂಕಾರವಿಲ್ಲದ ಸಮರ್ಪಣಾ ಭಾವದ ಪ್ರತೀಕ: ಬಸವಲಿಂಗ ಪಟ್ಟದ್ದೇವರು

ದಾಸೋಹ ಎಂಬುದು ಶರಣ ಸಂಸ್ಕೃತಿ ಹಾಗೂ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅತ್ಯಂತ...