ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ ಮೊಮೀನ್ (8) ಮೃತ ಬಾಲಕ. ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ನಂತರ ಬಾಲಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಯಿತು. ಆದರೆ ಬಾಲಕ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದರು. ಈ ಸಂಬಂಧ ಹುಲಸೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಆತ್ಮಹತ್ಯೆ
ಆಸ್ಪತ್ರೆಗೆ ತಹಸೀಲ್ದಾರ್ ಶಿವಾನಂದ ಮೇತ್ರೆ, ತಾ.ಪಂ. ಇಒ ಮಹಾದೇವ ಜಮ್ಮು, ಸಿಪಿಐ ಅಲಿಸಾಬ್ ಹಾಗೂ ಜೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು. ಸರ್ಕಾರದ ಪರಿಹಾರ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.





