ಹುಲಸೂರ ತಾಲೂಕು ʼಬರʼ ಘೋಷಣೆಗೆ ಸೆ.27ರ ಗಡುವು: 6 ದಿನಗಳ ಧರಣಿ ಕೊನೆಗೊಳಿಸಿದ ರೈತರು

Date:

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ಹುಲಸೂರ ಪಟ್ಟಣದ ತಹಸಿಲ್‌ ಕಚೇರಿ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಕೊನೆಗೊಂಡಿತು.

- Advertisement -

ಹುಲಸೂರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ 6 ದಿನಕ್ಕೆ ಕಾಲಿಟ್ಟಿತ್ತು. ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಸೋಮವಾರ ಭೇಟಿ ನೀಡಿ ಹುಲಸೂರ ತಾಲೂಕು ಬರ ಘೋಷಣೆಯ ರೈತರ ಬೇಡಿಕೆ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರುವ ಭರವಸೆ ನೀಡಿದ ಬಳಿಕ ರೈತರು ಧರಣಿ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಸೋಮವಾರ ರೈತ ಮುಖಂಡರು ಹೋರಾಟದ ಮುಂದಿನ ರೂಪುರೇಷೆಗಳ ಬಗ್ಗೆ ಸಭೆ ನಡೆಸಿದರು. ಬಳಿಕ ಹುಲಸೂರ ಶಿವಾನಂದ ಸ್ವಾಮೀಜಿ, ತಡೋಳದ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ಹಾಗೂ ಶಾಸಕ ಶರಣು ಸಲಗರ ಧರಣಿ ಸ್ಥಳಕ್ಕೆ ಆಗಮಿಸಿ ರೈತರ ಮನವೋಲಿಸಿದ ಬಳಿಕ ರೈತರು ಹಣ್ಣು ಸೇವಿಸಿ ಧರಣಿ ಕೈಬಿಟ್ಟರು.

ಶಾಸಕ ಶರಣು ಸಲಗರ ಮಾತನಾಡಿ, “ಹುಲಸೂರ ತಾಲೂಕಿನಲ್ಲಿ ಮಳೆ ಅಭಾವದಿಂದ ಬೆಳೆ ಸಂಪೂರ್ಣವಾಗಿ ಒಣಗುತ್ತಿದೆ. ಬರ ಘೋಷಣೆ ಸಂಬಂಧ ಈಗಾಗಲೇ ಸಿಎಂ, ಡಿಸಿಎಂ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಭೇಟಿಯಾಗಿ ಬರ ಘೋಷಿಸುವಂತೆ ಮನವರಿಕೆ ಮಾಡಿದ್ದೇನೆ. ಶೀಘ್ರದಲ್ಲಿ ಬರ ಘೋಷಣೆಯಾಗುವ ಸಾಧ್ಯತೆಯೂ ಇದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಮತ್ತೊಮ್ಮೆ ಮಾತನಾಡಿ ತಿಳಿಸುವೆ. ನಿಮ್ಮ ಹೋರಾಟದ ಜವಾಬ್ದಾರಿ ನಾನು ಪಡೆಯುವೆ, ನೀವು ಧರಣಿ ಸತ್ಯಾಗ್ರಹ ಹಿಂಪಡೆಯಬೇಕು” ಎಂದು ರೈತರಿಗೆ ಭರವಸೆ ನೀಡಿದರು.

WhatsApp Image 2026 09 14 at 9.19.49 PM

ಹುಲಸೂರ ತಾಲೂಕು ರೈತ ಸಂಘದ ಕಾರ್ಯದರ್ಶಿ ರಾಜಕುಮಾರ ನಿಡೋದೆ ಮಾತನಾಡಿ, “ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ 6 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಸೋಮವಾರ ಶಾಸಕ ಶರಣು ಸಲಗರ ಹಾಗೂ ತಡೋಳಾ, ಹುಲಸೂರ ಮಠದ ಶ್ರೀಗಳು ಭೇಟಿ ನೀಡಿ ಧರಣಿ ಕೈಬಿಡುವಂತೆ ಮನವಿ ಮಾಡಿದರು. ಸೆ.17 ಒಳಗಾಗಿ ಬರ ಘೋಷಣೆ ಆಗುವ ಸಾಧ್ಯತೆ ಇದೆ. ಬರ ಘೋಷಣೆಗೆ ಸೆ.27ರ ಗಡವು ನೀಡೋಣ, ಆಗಲೂ ಬರ ಘೋಷಿಸದಿದ್ದರೆ ತಮ್ಮ ನೇತ್ರತ್ವದಲ್ಲಿ ಸಭೆ ನಡೆಸಿ ಧರಣಿ ಮತ್ತೆ ಆರಂಭಿಸೋಣ ಎಂದು ಭರವಸೆ ನೀಡಿದ ಹಿನ್ನೆಲೆ ಧರಣಿ ಅಂತ್ಯಗೊಳಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ : ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ತಾಲೂಕು ಅಧ್ಯಕ್ಷ ಬಸವರಾಜ ಚೌವರೆ, ನವಕಲ್ಯಾಣ ಕರ್ನಾಟಕ ಮಹಾಸಭಾ ಕಾರ್ಯದರ್ಶಿ ಡಾ.ಶಂಕರಗೌಡ ಸೇರಿದಂತೆ ರೈತ ಸಂಘದ ಪ್ರಮುಖರಾದ ಸುನೀಲ್ ಭುಜಂಗೆ, ಖಾಸೀಂ ಅಲಿ, ಸೋಮನಾಥ ನಂದಗೆ, ರಮೇಶ್ ಗೋಕುಳೆ, ನಾಗನಾಥ ತೋಗರಗೆ, ಜಗನ್ನಾಥ ಬಡದಾಳೆ, ಶಿವಕುಮಾರ ಕನ್ನಾಡೆ, ಮಡಿವಾಳಪ್ಪ ಖಪಲೆ, ಹೈದಾರ್ ಸಾಬ್ ನೀಲಂಗೆ, ಶಿವಕುಮಾರ ಧನ್ನೂರೆ, ನೂರ್ ಅಹಮದ್, ಇಬ್ರಾಹಿಂ ಕೋತವಾಲ್, ಸಿದ್ದು ಬೀರಗೆ, ಬಸವರಾಜ ಆದ್ಯಾಪ್ಪಾ, ಅಪ್ಪಾರಾವ ಖಂಡಾಳೆ, ಉಮೇಶ ತೋಟಾದ, ಬಬನ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದಲ್ಲಿ ತೀವ್ರ ಬಡತನ ಶೇ 2.6ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ

ಕಳೆದ ಒಂದು ದಶಕದಲ್ಲಿ ಬಡತನ ನಿರ್ಮೂಲನೆಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿಯೇ ಅತಿ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು; ಹೋರಾಟದ ನಡುವೆ ಒಣಗುತ್ತಿದೆ ಕಬ್ಬು

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ...

ಬೆಂಗಳೂರಿನ ಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶ: ಇಬ್ಬರು ವಿದೇಶಿ ಪ್ರಜೆಗಳ ಸಾವು

ಬೆಂಗಳೂರಿನ ಹಲಸೂರಿನಲ್ಲಿರುವ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಶುಕ್ರವಾರ ಸಂಜೆ ಈಜುತ್ತಿದ್ದ ವೇಳೆ...

ಗ್ಯಾನೇಶ್‌ ವಿರುದ್ಧ ‘ಇಂಡಿಯಾ’ ಪ್ರತಿಭಟನೆ; ಹೋರಾಟ ಹತ್ತಿಕ್ಕಲು ಮೋದಿ-ಶಾ ಸರ್ಕಸ್! 

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು SIR ಪ್ರಕ್ರಿಯೆಯಲ್ಲಿ ನಡೆದಿರುವ...