ಹುಮನಾಬಾದ್‌ | ಅಕ್ರಮ ಸಿಬ್ಬಂದಿ ನೇಮಕ ಆರೋಪ : ಸಿಂಧನಕೇರಾ ಪಿಡಿಒ ಅಮಾನತು

Date:

ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ಬಹುಜನ ಯುವ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ ದೀನೆ ಅವರು ನೀಡಿದ ದೂರಿನ ಅನ್ವಯ ತನಿಖೆ ನಡೆಸಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಜೂ.16ರಂದು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ತಾಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ್‌ ಪಿಡಿಒ ಆಗಿರುವ ರಘುನಾಥ ಅವರು ಸಿಂಧನಕೇರಾ ಗ್ರಾಮ ಪಂಚಾಯತಿ ಪಿಡಿಒ ಆಗಿ ಪ್ರಭಾರ ವಹಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದರು. ಸಭಾ ನಡವಳಿ ಪುಸ್ತಕದಲ್ಲಿ ನಕಲಿ ಹೆಸರು ಮತ್ತು ಹುದ್ದೆ ಸೃಷ್ಟಿಸಿ, ದಾಖಲೆ ತಿದ್ದುಪಡಿ ಹಾಗೂ ಫೋರ್ಜರಿ ಸಹಿ ಮಾಡಿ ಮೇಲಾಧಿಕಾರಿಗಳಿಗೆ ತಪ್ಪು ಮಾಹಿತಿ ಸಲ್ಲಿಸಲಾಗಿದೆ ಎಂದು ಆರೋಪಿಸಿ ಕಳೆದ ಫೆಬ್ರುವರಿಯಲ್ಲಿ ಜಿಪಂ ಸಿಇಒಗೆ ಬಹುಜನ ಯುವ ಪ್ಯಾಂಥರ್‌ನ ಜಿಲ್ಲಾ ಸಮಿತಿ ವತಿಯಿಂದ ದೂರು ಸಲ್ಲಿಸಲಾಗಿತ್ತು.

ದೂರಿನ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿಗಳು ಹಾಗೂ ಸಹಾಯಕ ಯೋಜನಾಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ : ಬೀದರ್‌ | ಸೋರುವ ಕೊಠಡಿ, ಶಿಕ್ಷಕರ ಕೊರತೆ : ಆತಂಕದಲ್ಲಿ ಮಕ್ಕಳ ಕಲಿಕೆ!

ವರದಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆಯದೆ ಮನಬಂದಂತೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಉಪಾಯ ಮಾಡಿದ್ದು, ಸಭಾ ನಡವಳಿಗಳನ್ನು ಅನಧಿಕೃತವಾಗಿ ಪಂಚತಂತ್ರ 2.0 ತಂತ್ರಾಂಶಕ್ಕೆ ಅಪ್‌ಲೋಡ್ ಮಾಡಿರುವುದು ಸೇರಿ ಹಲವು ಅಕ್ರಮ ಕಂಡುಬಂದಿರುವ ಬಗ್ಗೆ ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...